“ಈ ಹಿಂದೆಯೂ ನೀವು ಪಕ್ಷದ ರೇಖೆಯನ್ನು ಉಲ್ಲಂಘಿಸಿದ್ದೀರಿ. ಇಂದು ಕೂಡಾ ಜಿಎಸ್‌ಟಿ ಕುರಿತ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದೀರಿ ಅದು ಪಕ್ಷದ ಅಧಿಕೃತ ನಿಲುವಲ್ಲ ಎಂದು ದೆಹಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹರ್ಷ್ ಮಲ್ಹೋತ್ರಾ ಅವರು ಬುಧವಾರ ದುವಾ ಅವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.
ದೆಹಲಿ ಬಿಜೆಪಿ ಅಧ್ಯಕ್ಷರ ಆದೇಶದ ಪ್ರಕಾರ ವಕ್ತಾರೆ ಹುದ್ದೆಯಿಂದ ದುವಾ ಅವರನ್ನು ತಕ್ಷಣವೇ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಅವರು ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುವುದನ್ನು ಮುಂದುವರಿಸಬಹುದು ಪತ್ರದಲ್ಲಿ ಅವರು ಹೇಳಿದ್ದಾರೆ.