Mysore
16
clear sky

Social Media

ಮಂಗಳವಾರ, 07 ಜನವರಿ 2025
Light
Dark

ಚರಂಡಿಯಲ್ಲಿ ನವಜಾತ ಶಿಶು ಪತ್ತೆ: ಚಿಕಿತ್ಸೆಗಾಗಿ ಮೈಸೂರು ಆಸ್ಪತ್ರೆಗೆ ರವಾನೆ

ಮೈಸೂರು: ಚರಂಡಿಯಲ್ಲಿ ನವಜಾತ ಶಿಶುವೊಂದು ಪತ್ತೆಯಾಗಿರುವ ಘಟನೆ ಎಚ್.ಡಿ.ಕೋಟೆ ತಾಲ್ಲೂಕಿನ ರಾಜೇಗೌಡನ ಹುಂಡಿ ಗ್ರಾಮದಲ್ಲಿ ನಡೆದಿದೆ. ಮಗುವನ್ನು ರಕ್ಷಣೆ ಮಾಡಿ, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.

ಇಂದು ಬೆಳಿಗ್ಗೆ ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಹೋಗುವ ಸಂದರ್ಭದಲ್ಲಿ ಚರಂಡಿಯಿಂದ ಮಗುವೊಂದು ಅಳುವ ಶಬ್ಧ ಕೇಳಿಸಿದೆ. ಕೂಡಲೇ ಗ್ರಾಮಸ್ಥರು ಸ್ಥಳೀಯ ಆಶಾ ಕಾರ್ಯಕರ್ತರಿಗೆ ವಿಚಾರ ತಿಳಿಸಿದ್ದಾರೆ. ತಕ್ಷಣ ಆಶಾ ಕಾರ್ಯಕರ್ತೆಯರು ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಸ್ಥಳಕ್ಕೆ ಬಂದು ಮಗುವನ್ನ ಹೆಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಗೆ ಸ್ಥಳಾಂತರಿಸಿದ್ದಾರೆ.

ಈ ವಿಚಾರವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆರೋಗ್ಯ ತಾಲ್ಲೂಕಾಧಿಕಾರಿಗಳಿಗೆ ತಿಳಿಸಿದ್ದು, ಶಿಶುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಘಟನೆಯ ಬಗ್ಗೆ ತಾಲೂಕಿನ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ದೀಪಾ ಅವರು ಮಾಹಿತಿ ನೀಡಿದ್ದು, ಇಂದು ಬೆಳಗ್ಗೆ ನವಜಾತ ಶಿಶುವೊಂದು ಜೀವಂತ ಸ್ಥಿತಿಯಲ್ಲಿ ಚರಂಡಿಯಲ್ಲಿ ಪತ್ತೆಯಾಗಿದೆ. ಆ ಮಗುವಿಗೆ ಎಚ್.ಡಿ.ಕೋಟೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಮಕ್ಕಳ ಆಸ್ಪತ್ರೆಗೆ ಕಳುಹಿಸಲಾಗಿದೆ. ಅಲ್ಲಿ ಮಗುವನ್ನ ಜಿಲ್ಲಾ ಮಕ್ಕಳ ಸಮಿತಿ ಮುಂದೆ ಹಾಜರುಪಡಿಸಿ ಚಿಕಿತ್ಸೆ ಮುಂದುವರೆಸಲಾಗಿದೆ ಎಂದರು.

Tags: