ಮೈಸೂರು

ಹೊಸ ತಲೆಮಾರಿನ ಕಲಾವಿದರ ಪ್ರೋತ್ಸಾಹ ಅಗತ್ಯ : ಪ್ರೊ.ಜಯಪ್ರಕಾಶ್‌ಗೌಡ

ಮೈಸೂರು: ಹೊಸ ತಲೆಮಾರಿನ ಜಾನಪದ ಕಲಾವಿದರಿಗೆ ಪ್ರೋತ್ಸಾಹ ನೀಡಿದರೆ ಮಾತ್ರ ಕಲೆಯನ್ನು ಉಳಿಸಲು ಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕ ಪ್ರೊ.ಜಯಪ್ರಕಾಶ್‌ಗೌಡ ಹೇಳಿದರು.

ರಂಗಾಯಣದ ಭೂಮಿಗೀತದಲ್ಲಿ ಕರ್ನಾಟಕ ಬಯಲಾಟ ಅಕಾಡೆಮಿ, ಮೈಸೂರು ರಂಗಾಯಣ ಮತ್ತು ಮಹಾರಾಜ ಕಾಲೇಜು ಜಾನಪದ ವಿಭಾಗಗಳ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ‘ಮೂಡಲಪಾಯ, ಬಯಲಾಟದ ಹೊಸ ಸಾಧ್ಯತೆಗಳು’ ಸಂವಾದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮಂಡ್ಯದ ಕಾಲೇಜಿನಲ್ಲಿ ನಾನು ಪ್ರಾಧ್ಯಾಪಕನಾಗಿದ್ದಾಗ ಜಾನಪದ ಹಾಗೂ ಎಲ್ಲ ಕಲೆಗಳನ್ನು ವಿದ್ಯಾರ್ಥಿ ಗಳಿಗೆ ಕಲಿಸುವ ಕೆಲಸ ಮಾಡಿದ್ದೆ. ಬಳಿಕ ಕಾಲೇಜಿನಲ್ಲಿ ಕಲೆಗಳನ್ನು ಪ್ರದರ್ಶಿಸುವುದಲ್ಲದೇ, ವೃತ್ತಿ ಕಲಾವಿದ ರೊಂದಿಗೆ ಸೇರಿ ಹಳ್ಳಿಗಳಲ್ಲಿ ಕಲೆಗಳನ್ನು ವ್ಯವಸ್ಥಿತವಾಗಿ ಪ್ರದರ್ಶನ ಮಾಡುವ ಕೆಲಸ ಮಾಡುತ್ತಿದ್ದೆವು ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟದ್ದಲ್ಲಿ ಪರಿಗಣಿಸಬಹುದಾದ ಜಾನಪದದ  ಬಗ್ಗೆ ಎಲ್ಲರೂ ಮಾತನಾಡುತ್ತಾರೆ. ಆದರೆ,  ಅದರ ಒಳ ಹೊಕ್ಕುವ ಪ್ರಯತ್ನವಾಗಲೀ, ಅದನ್ನು ಮುಂದು ವರಿಸುವ ಕೆಲಸವಾಗಲಿ ಯಾರಿಂದಲೂ ಆಗುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಜಾನಪದ ಕಲೆಗಳು ಅಳಿವಿನ ಅಂಚಿನ ಹಾದಿ ಹಿಡಿದಿವೆ. ಪ್ರಯೋಗಶೀಲತೆಯಾದಾಗ ಮಾತ್ರ ಯಾವುದೇ ಕಲೆ ಉಳಿಯಲು ಸಾಧ್ಯ. ಒಂದು ತಮಟೆಯ ಶಬ್ಧ ಪ್ರತಿಯೊಬ್ಬರನ್ನೂ ಎಚ್ಚರಿಸುವ ಕೆಲಸ ಮಾಡುತ್ತದೆ. ಕಲೆ ಉಳಿಯಲು ಕೇವಲ ಪಠ್ಯ ಶಿಕ್ಷಣ ಸಾಲದು ಪ್ರಾಯೋಗಿಕ ಶಿಕ್ಷಣ ಬಹಳ ಮುಖ್ಯ. ಅಂತಹ ಕೆಲಸಗಳನ್ನು ಯಾವ ಅಕಾಡೆಮಿಗಳಾಗಲಿ, ವಿಶ್ವವಿದ್ಯಾನಿಲಯಗಳಾಗಲಿ ಮಾಡುತ್ತಿಲ್ಲ ಎಂದು ತಿಳಿಸಿದರು.

ಪ್ರೊ.ಡಿ.ಕೆ.ರಾಜೇಂದ್ರ, ಪ್ರೊ.ನಂಜಯ್ಯ ಹೊಂಗನೂರು, ಡಾ.ಮೈಲಹಳ್ಳಿ ರೇವಣ್ಣ, ಡಿ.ತಿಪ್ಪಣ್ಣ, ಪ್ರೊ. ಎಚ್.ಆರ್.ಚೇತನ, ಪ್ರೊ.ವಿಜಯಲಕ್ಷ್ಮೀ ಮನಾಪುರ, ಮರಿಯಯ್ಯ ಮತ್ತಿತರರು ಉಪಸ್ಥಿತರಿದ್ದರು.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚೇತನ್ ಅಹಿಂಸಾ ಗಡಿಪಾರಿಗೆ ಆಗ್ರಹ

ಅಭಿಮಾನಿಗಳು, ನಿರ್ಮಾಪಕರ ಸಂಘದ ಆಕ್ರೋಶ ಬೆಂಗಳೂರು : ಪದ್ಮಭೂಷಣ ಡಾ.ರಾಜ್‌ಕುಮಾರ್ ಅವರ ಸ್ಮಾರಕದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಹೇಳಿಕೆ…

3 hours ago

ಕೊಡಗು | ಗುಂಡು ಹೊಡೆದುಕೊಂಡು ಶಿಕ್ಷಕಿ ಆತ್ಮಹತ್ಯೆ

ಮಡಿಕೇರಿ : ಶಿಕ್ಷಕಿಯೊಬ್ಬರು ಬಂದೂಕಿನಿಂದ ಗುಂಡು ಹೊಡೆದುಕೊಂಡು ಸಾವಿಗೆ ಶರಣಾದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ ಚೇರಂಬಾಣೆಯಲ್ಲಿ ನಡೆದಿದೆ.…

3 hours ago

ಬಿಜೆಪಿಗೆ ಸೇರ್ಪಡೆಗೊಂಡ 7 ರಾಜ್ಯಸಭಾ ಸದಸ್ಯರ ವಿರುದ್ಧ ಕ್ರಮಕ್ಕೆ ಎಎಪಿ ಆಗ್ರಹ

ನವದೆಹಲಿ : ಆಮ್ ಆದ್ಮಿ ಪಕ್ಷದಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು, ಪಕ್ಷ ತೊರೆದು ಭಾರತೀಯ ಜನತಾ ಪಕ್ಷಕ್ಕೆ (ಬಿಜೆಪಿ)…

3 hours ago

ಶಾಲೆಗಳಲ್ಲಿ ದಿನಪತ್ರಿಕೆ ಓದುವುದು ಇನ್ಮುಂದೆ ಕಡ್ಡಾಯ

ಬೆಂಗಳೂರು : ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ಪ್ರತಿದಿನ ದಿನಪತ್ರಿಕೆ ಓದಿಸುವುದನ್ನು ಕಡ್ಡಾಯಗೊಳಿಸಲು ಶಿಕ್ಷಣ…

4 hours ago

ಜನಗಣತಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾಲ್ಗೊಳ್ಳುವಿಕೆ ಅತ್ಯಗತ್ಯ: ಪ್ರಧಾನಿ ಮೋದಿ

ನವದೆಹಲಿ : ದೇಶದಾದ್ಯಂತ ನಡೆಯುತ್ತಿರುವ ಜನಗಣತಿ ಕಾರ್ಯವು ಕೇವಲ ಸರ್ಕಾರದ ಕೆಲಸವಲ್ಲ, ಬದಲಾಗಿ ಪ್ರತಿ ನಾಗರಿಕರ ಜವಾಬ್ದಾರಿಯಾಗಿದೆ. ಇದರಲ್ಲಿ ಎಲ್ಲರ…

4 hours ago

ಮೈಸೂರು | ಕರಗ ಮಹೋತ್ಸವ ಸಂಪನ್ನ

ಮೈಸೂರು : ನಗರದ ಇಟ್ಟಿಗೆಗೂಡಿನ ಶ್ರೀ ರೇಣುಕಾದೇವಿ ಕರಗ ದೇವಸ್ಥಾನ ಟ್ರಸ್ಟ್, ಶ್ರೀ ಚಾಮುಂಡೇಶ್ವರಿ ಮತ್ತು ಮಾರಿಯಮ್ಮನವರ ೧೦೨ನೇ ಕರಗಮಹೋತ್ಸವ…

5 hours ago