ಮೈಸೂರು : ಇನ್ನ ೨ ವರ್ಷದಲ್ಲಿ ವರುಣ ಕ್ಷೇತ್ರದಲ್ಲಿ ಯಾವುದೇ ಶಿಥಿಲ ವ್ಯವಸ್ಥೆಯ ಶಾಲಾ ಕೊಠಡಿಗಳು ಇರುವುದಿಲ್ಲ. ಅಷ್ಟರ ಮಟ್ಟಿಗೆ ಶೈಕ್ಷಣಿಕ ಪ್ರಗತಿ ಕೈಗೊಳ್ಳುತ್ತೇವೆ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ.
ನಂಜನಗೂಡು ತಾಲೂಕು ಚಿಕ್ಕಯ್ಯನ ಛತ್ರ ಹೋಬಳಿ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಹದಿನಾರು ಗ್ರಾಮದಲ್ಲಿ ತಾಂಡವಪುರ ಕೈಗಾರಿಕಾ ಪ್ರದೇಶದಲ್ಲಿರುವ ಐಟಿಸಿ ಕಂಪನಿ ವತಿಯಿಂದ ಎರಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳನ್ನು ನಿರ್ಮಿಸಲಾಗಿತ್ತು. ಈ ಶಾಲಾ ಕೊಠಡಿಗಳನ್ನು ಹಾಗೂ ಅಂಗನವಾಡಿ ಕೊಣೆಗಳ ಬೀಗದ ಕೀ ಯನ್ನು ಶಾಲೆಯ ಮುಖ್ಯ ಶಿಕ್ಷಕರಿಗೆ ಕೊಡುವ ಮೂಲಕ ಡಾ.ಯತೀಂದ್ರ ಸಿದ್ದರಾಮಯ್ಯ ಕೊಠಡಿ ಉದ್ಘಾಟನೆ ಮಾಡಿದರು.
ಬಳಿಕ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ನಮ್ಮ ವರುಣ ಕ್ಷೇತ್ರದಲ್ಲಿರುವ ಕೈಗಾರಿಕಾ ಪ್ರದೇಶದ ಕಂಪನಿಗಳ ಮಾಲೀಕರು ಹಾಗೂ ದಾನಿಗಳು ಶೈಕ್ಷಣಿಕ ಪ್ರಗತಿಗೆ ಹೆಚ್ಚು ಸಹಕಾರ ನೀಡುತ್ತಿರುವುದು ಬಹಳ ಒಳ್ಳೆಯ ಕೆಲಸ ಎಂದು ಕಂಪನಿಗಳ ಸೇವೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಅಲ್ಲದೆ ಮೈಸೂರು ಜಿಲ್ಲೆ ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಎಲ್ಲ ಗ್ರಾಮಗಳಲ್ಲೂ ಶಿಥಿಲ ವ್ಯವಸ್ಥೆಯಲ್ಲಿರುವ ಶಾಲಾ ಕೊಠಡಿಗಳನ್ನು ಕೆಡವಿ ಸರ್ಕಾರ ಮತ್ತು ದಾನಿಗಳ ಸಹಕಾರದಿಂದ ಇನ್ನು ಎರಡು ವರ್ಷಗಳಲ್ಲಿ ಹೊಸ ಶಾಲಾ ಕೊಠಡಿಗಳನ್ನ ನಿರ್ಮಿಸಿಕೊಡುತ್ತೇವೆ ಎಂದು ಭರವಸೆ ನೀಡಿದರು.
ಇದೇ ವೇಳೆ ಐಟಿಸಿ ಕಂಪನಿ ವತಿಯಿಂದ ಡಾ.ಯತೀಂದ್ರ ಸಿದ್ರಾಮಯ್ಯನವರನ್ನು ಸನ್ಮಾನಿಸಲಾಯಿತು.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…