Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ: ಮೈಸೂರು ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್

Nijasharan Hadapada Appanna

ಎಚ್.ಡಿ.ಕೋಟೆ: ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಆಸ್ತಿ, ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದ್ದಾರೆ ಎಂದು ಮೈಸೂರು ಜಿಲ್ಲಾಧ್ಯಕ್ಷ ಎನ್.ಆರ್.ನಾಗೇಶ್ ಹೇಳಿದರು.

ಎಚ್.ಡಿ.ಕೋಟೆ ಪಟ್ಟಣದ ತಾಲ್ಲೂಕು ಮಿನಿವಿಧಾನ ಸೌಧದ ಮುಂಭಾಗ ಶಿವಶರಣ ನಿಜಲಿಂಗಿ ಯೋಗಿ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶರಣರ ತತ್ವಾದರ್ಶ, ಅವರ ವಚನಗಳ ಸಾರವನ್ನು ಮುಂದಿನ ಪೀಳಿಗೆಗೆ ತಿಳಿಸಬೇಕು. ಶರಣರು ತೋರಿಸಿದ ಜ್ಞಾನ ಪಥದಲ್ಲಿ ನಡೆದು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.

ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು, ಶಿವಶರಣರ ವಚನಗಳ ಪುಸ್ತಕಗಳನ್ನು ಓದುವಂತಾಗಬೇಕು. ವಚನ ಸಂಸ್ಕೃತಿಯನ್ನು ಮನೆ-ಮನೆಗಳಿಗೆ ತಲುಪಿಸುವಂತಾಗಬೇಕು. ಅವರ ವಿಚಾರಧಾರೆಗಳು ಸಮರ್ಪಕವಾಗಿ ಅನುಷ್ಠಾನಗೊಂಡಲ್ಲಿ ಮಾತ್ರ ಶರಣರಿಗೆ ಸಂದ ಗೌರವ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸವಿತ ಸಮಾಜದ ತಾಲ್ಲೂಕು ಅಧ್ಯಕ್ಷ ನರಸಿಂಹ, ಕೋಟೆ ಟೌನ್ ಅಧ್ಯಕ್ಷ ರೇವಣ್ಣ ಹ್ಯಾಡ್ ಪೋಸ್ಟ್. ಅಧ್ಯಕ್ಷ ಸುರೇಶ್, ಗೌರವ ಅಧ್ಯಕ್ಷ ಸಿದ್ದರಾಜು, ಕಾರ್ಯದರ್ಶಿ ಬಸವಣ್ಣ ಸೇರಿದಂತೆ ಮತ್ತಿತರರು ಭಾಗಿಯಾಗಿದ್ದರು.

Tags:
error: Content is protected !!