ಮೈಸೂರು: ನಾನು ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯ ಆಕಾಂಕ್ಷಿಯಲ್ಲ, ಪಕ್ಷದ ನಿಷ್ಠಾವಂತ ಕಾರ್ಯಕರ್ತ ಅಷ್ಟೇ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.
ನಗರದ ಸೈಲೆಂಟ್ ಶೋರ್ಸ್ ಹೋಟೆಲ್‌ನಲ್ಲಿ ಇಂದು(ಫೆಬ್ರವರಿ.25) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕ್ರಿಯೆ ನೀಡಿದ ಅವರು, ಕಾರ್ಯಕರ್ತರು ತಳಮಟ್ಟದಿಂದ ಪಕ್ಷವನ್ನು ಬೆಳೆಸಿದ್ದಾರೆ. ರಾಜ್ಯದಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರಿಗೂ ಅಧಿಕಾರ ಕೊಡಿಸುವುದೇ ನಮ್ಮ ಗುರಿಯಾಗಿದೆ. ನಾನು ಸಂಘಟನೆಗೆ ಮೊದಲ ಆದ್ಯತೆ ನೀಡುತ್ತಿದ್ದು, ಎಲ್ಲಾ ರೀತಿಯ ಸಂಘಟನೆಗಳಲ್ಲೂ ನಾನು ಭಾಗವಹಿಸುತ್ತೇನೆ. ಅಲ್ಲದೇ ಮಾಜಿ ಪ್ರಧಾನಿ ಎಚ್.ಡಿ.ಕುಮಾರಸ್ವಾಮಿ ಮತ್ತು ಕೇಂದ್ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಅನಾರೋಗ್ಯ ಸಮಸ್ಯೆ ಇರುವುದರಿಂದ ಸದ್ಯಕ್ಕೆ ರಾಜ್ಯಾಧ್ಯಕ್ಷ ಪಟ್ಟ ಎಂಬುದು ಅಪ್ರಸ್ತುತ ಎನಿಸಿದೆ. ಆದರೆ ಕ್ಷದಲ್ಲಿ ಹಲವು ಹಿರಿಯ ನಾಯಕರು ಇದ್ದಾರೆ ಎಂದು ಹೇಳಿದರು.
ಇನ್ನು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕರು ಸಂವಿಧಾನದ ಪುಸ್ತಕ ಹಿಡಿದು ಉದ್ದುದ್ದ ಭಾಷಣ ಮಾಡುತ್ತಾರೆ. ಆದರೆ ರಾಹುಲ್ ಗಾಂಧಿ ಗುರುಗಳಾದ ಸ್ಯಾಮ್ ಪಿತ್ರೋಡ ಅವ ಪ್ರಕರಣ ಬೆಳಕಿಗೆ ಬಂದಿದೆ. ಈ ಬಗ್ಗೆ ಕಾಂಗ್ರೆಸ್ ಪಕ್ಷ ಮತ್ತು ಸಚಿವ ಈಶ್ವರ್ ಖಂಡ್ರೆ ಅವರು ಏನು ಮಾತನಾಡುತ್ತಾರೆ ಎಂದು ಕಾದು ನೋಡಬೇಕಾಗಿದೆ ಎಂದರು.
ಉದಯಗಿರಿ ಪ್ರಕರಣ ಪೂರ್ವನಿಯೋಜಿತ ಕೃತ್ಯ
ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಅಸಹಾಯಕರಾಗಿ ಹೇಳಿಕೆ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಕ್ಕೆ ಯುವಕನ ಗಡಿಪಾರಿಗೆ ಚಿಂತನೆ ಮಾಡುತ್ತಿದ್ದಾರೆ. ಅಂತಹ ಗಡಿಪಾರು ಮಾಡುವುದಾದರೆ ನಮ್ಮ ಪಕ್ಷದ ಪೇಜ್ ಅಲ್ಲೂ ಹಲವು ಪೋಸ್ಟ್ ಹಾಕುತ್ತಾರೆ. ನಿತ್ಯವೂ ಪಕ್ಷದ ವಿರುದ್ಧ ಕ್ರಮ ಆಗುತ್ತದೆ. ಆದರೆ ಉದಯಗಿರಿ ಪ್ರಕರಣ ಪೂರ್ವನಿಯೋಜಿತ ಕೃತ್ಯ ಎಂದು ಆರೋಪ ಮಾಡಿದ್ದಾರೆ.
ಅಧಿಕಾರಿಗಳ ಮೇಲೆ ಲೋಕಾಯುಕ್ತ ಗೂಬೆ ಕೂರಿಸುತ್ತಿದೆ
ಮುಡಾ ಪ್ರಕರಣದ ತನಿಖೆಯಲ್ಲಿ ಮೈಸೂರು ಲೋಕಾಯುಕ್ತ ಅಧಿಕಾರಿಗಳು ತರಾತುರಿಯಲ್ಲಿ ಬಿ ರಿಪೋರ್ಟ್ ಹಾಕಿದ್ದಾರೆ. ಈ ವರದಿಯಲ್ಲಿ ಅಂದಿನ ಮೈಸೂರು ಜಿಲ್ಲಾಧಿಕಾರಿ ಮತ್ತು ಪ್ರಸ್ತುತ ರಾಯಚೂರು ಸಂಸದ ಕುಮಾರ್ ನಾಯ್ಕ್ ಅವರ ನಿರ್ಲಕ್ಷ್ಯದಿಂದಲೇ ಪಾರ್ವತಿ ಸಿದ್ದರಾಮಯ್ಯ ಅವರಿಗೆ 14 ಬದಲಿ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದೆ. ಹೀಗಾಗಿ ಅಧಿಕಾರಿಗಳ ಮೇಲೆ ಲೋಕಾಯುಕ್ತ ಗೂಬೆ ಕೂರಿಸುತ್ತಿದೆ. ಸ್ಥಳ ಪರಿಶೀಲನೆ ನಡೆಸದೆ ಲೋಪ ಎಸಗಲು ಅದರ ಹಿಂದಿರುವ ವ್ಯಕ್ತಿಗಳು ಕಾರಣ ಅಲ್ಲವೇ? ಆ ಪ್ರಭಾವ ಬೀರಿರುವ ವ್ಯಕ್ತಿಗಳು ಯಾರು? ಆ ರಾಜಕಾರಣಿಗಳು ಯಾರು? ಎಂದು ಪ್ರಶ್ನಿಸಿದ್ದಾರೆ.





