ಮೈಸೂರು: ಚನ್ನಪಟ್ಟಣದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಮಾಡಿದರೆ ಗೆಲುವು ಖಚಿತ ಎಂದು ವಿಧಾನಪರಿಷತ್ ಸದಸ್ಯ ಮಂಜೇಗೌಡ ಹೇಳಿದ್ದಾರೆ.
ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಿಂದ ಭಾರೀ ಮತಗಳ ಅಂತರದಿಂದ ಗೆದ್ದು ಜಯಗಳಿಸಿದ ಬಳಿಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರದಲ್ಲಿ ಕೇಂದ್ರ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ.
ಬಳಿಕ ಅವರು ತಾವು ಪ್ರತಿನಿಧಿಸಿ ಗೆಲುವು ಸಾಧಿಸಿದ್ದ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿದ್ದು, ಕಾಂಗ್ರೆಸ್, ಬಿಜೆಪಿ-ಜೆಡಿಎಸ್ ಮೈತ್ರಿ ನಾಯಕರು ಭಾರೀ ಪೈಪೋಟಿಗಿಳಿದಿದ್ದಾರೆ.
ಒಂದು ಕಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ ಚನ್ನಪಟ್ಟಣ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಇನ್ನೊಂದೆಡೆ ಬಿಜೆಪಿಯಿಂದ ಸಿ.ಪಿ.ಯೋಗೇಶ್ವರ್ ಚನ್ನಪಟ್ಟಣ ಕ್ಷೇತ್ರದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.
ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಪುತ್ರ ಹಾಗೂ ನಟ ನಿಖಿಲ್ ಕುಮಾರಸ್ವಾಮಿಯನ್ನು ಚನ್ನಪಟ್ಟಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡಬೇಕು ಎಂಬ ಮಾತುಗಳು ಕೂಡ ಕೇಳಿ ಬರುತ್ತಿವೆ.
ಚನ್ನಪಟ್ಟಣ ಉಪಚುನಾವಣೆ ಸಂಬಂಧ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ ವಿಧಾನಪರಿಷತ್ ಸದಸ್ಯ ಮಂಜೇಗೌಡ ಅವರು, ಚನ್ನಪಟ್ಟಣ ಕ್ಷೇತ್ರಕ್ಕೆ ನಿಖಿಲ್ ಕುಮಾರಸ್ವಾಮಿಯನ್ನು ಅಭ್ಯರ್ಥಿಯನ್ನಾಗಿ ಮಾಡಬೇಕು. ಆ ಕ್ಷೇತ್ರದ ಜನರೆಲ್ಲಾ ಡಿಕೆಶಿಯನ್ನು ತಿರಸ್ಕರಿಸಿದ್ದಾರೆ. ಈಗ ಜನತೆ ಮೈತ್ರಿ ಪರ ಭಾರೀ ಒಲವು ತೋರಿದ್ದಾರೆ ಎಂದರು.
ಮಕ್ಕಳೊಂದಿಗೆ ಸರ್ಕಾರಿ ಕಾಲೇಜುಗಳತ್ತ ಮುಖ ಮಾಡಿದ ಪೋಷಕರು ಗಿರೀಶ್ ಹುಣಸೂರು ಮೈಸೂರು : ೨೦೨೫-೨೬ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ…
ದಕ್ಷಿಣದ ರಾಜ್ಯಗಳಲ್ಲಿ ತನ್ನ ಪಾರುಪತ್ಯ ಭದ್ರಗೊಳಿಸಲು ಬಿಜೆಪಿಗೆ ಕರ್ನಾಟಕ ಅವಶ್ಯ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ…
ತಮಿಳುನಾಡಿನ ಮುಖ್ಯಮಂತ್ರಿಯಾಗಿ ಜೋಸೆಫ್ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಆ ಮೂಲಕ ತಮಿಳುನಾಡಿನಲ್ಲಿ ವಿಜಯ್ ನೇತೃತ್ವದ ಟಿವಿಕೆ ಮಿತ್ರ ಪಕ್ಷಗಳ…
ಕಟ್ಟಡವನ್ನು ಜೀರ್ಣೋದ್ಧಾರ ಮಾಡಬೇಕೋ? ನೆಲಸಮಗೊಳಿಸಿ ಹೊಸದಾಗಿ ನಿರ್ಮಿಸಬೇಕೋ? ಸುಪ್ರೀಂ ತೀರ್ಪು ಎದುರು ನೋಡುತ್ತಿರುವ ಪಾಲಿಕೆ ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು :…
ಚೆನ್ನೈ : ದಳಪತಿ ವಿಜಯ್ ತಮಿಳುನಾಡಿನ ನೂತನ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಮಾರಂಭದಲ್ಲಿ ಅನೇಕ ಗಣ್ಯರು ಸೇರಿದ್ದರು.…