ಮೈಸೂರು : ನಮ್ಮ ರಾಜ್ಯದ ವಿಚಾರ ಬಂದಾಗ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಸುಳ್ಳು ಹೇಳಿದ್ದರು ಈಗಲೂ ಹೇಳಿದ್ದಾರೆ ಎಂದು ಸಿ.ಎಂ.ಸಿದ್ದರಾಮಯ್ಯ ಆರೋಪಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.
ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.
ಕೇಂದ್ರದ ನೀತಿ , ಕಾರ್ಯಕ್ರಮಗಳಿಂದ ಶೇ 31% ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ : 15 ನೇ ಹಣಕಾಸು ಯೋಜನೆಯಲ್ಲಿ ಅತಿ ಹೆಚ್ಚು ಅನ್ಯಾಯವಾಗಿರುವ ರಾಜ್ಯ ಕರ್ನಾಟಕ. ರಾಜ್ಯದಿಂದ ರಾಜ್ಯ ಸಭಾ ಸದಸ್ಯರಾಗಿರುವ ಅವರು ಕೈಗಾರಿಕೆಗಳೆಲ್ಲಾ ಬೇರೆ ರಾಜ್ಯಕ್ಕೆ ಹೋಗುತ್ತಿವೆ ಎಂದೂ ಹೇಳಿದ್ದಾರೆ.
ಆದರೆ ನಮ್ಮ ಕೇಂದ್ರ ಸರ್ಕಾರದ ಹಣಕಾಸು ಸಚಿವರ ನೀತಿ , ಕಾರ್ಯಕ್ರಮಗಳಿಂದ ಶೇ 31% ನಮ್ಮ ದೇಶಕ್ಕೆ ಬರುತ್ತಿರುವ ಎಫ್.ಡಿ.ಐ ಕಡಿಮೆಯಾಗಿದೆ. ಕೇಂದ್ರಕ್ಕೆ ತೆರಿಗೆ ನೀಡುವಲ್ಲಿ ಮಹಾರಾಷ್ಟ್ರ ಮೊದಲ ಸ್ಥಾನದಲ್ಲಿದ್ದು, ಕರ್ನಾಟಕ 2 ನೇ ಸ್ಥಾನದಲ್ಲಿದೆ ಇನ್ನೇನು ಕೊಡುಗೆ ಕೊಡಬೇಕು? ಎಂದು ಪ್ರಶ್ನಿಸಿದರು.
ಅವರೇ 2023-24 ನೇ ಬಜೆಟ್ ನಲ್ಲಿ ಹೇಳಿದಂತೆ ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಣೆ ಮಾಡಿದ್ದ 5300 ಕೋಟಿಗಳನ್ನು ಕೊಟ್ಟಿಲ್ಲ . ಅವರ ಘೋಷಣೆ ನೋಡಿ ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂಡ ಬಜೆಟ್ ನಲ್ಲಿ ಪುನರುಚ್ಚರಿಸಿದ್ದರು ಎಂದರು.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…