ಮೈಸೂರು: ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಗುಂಜನರಸೀಪುರ ದೇವಾಲಯದ ಬಳಿ ಇರುವ ತ್ರಿವೇಣಿ ಸಂಗಮಕ್ಕೆ ಭೇಟಿ ನೀಡಿ ಕುಂಭಮೇಳದ ಸ್ಥಳವನ್ನು ಪರಿಶೀಲಿಸಿದ್ದಾರೆ.
ಟಿ.ನರಸೀಪುರದಲ್ಲಿ ಇದೇ ಫೆಬ್ರವರಿ.10 ರಿಂದ 13 ರವರೆಗೆ 13 ವರ್ಷಗಳಿಗೊಮ್ಮೆ ನಡೆಯುವ ಕುಂಭಮೇಳ ಜರುಗಲಿದೆ. ಈ ಹಿನ್ನೆಲೆಯಲ್ಲಿ ತ್ರಿವೇಣಿ ಸಂಗಮಕ್ಕೆ ನಿರ್ಮಲಾನಂದನಾಥ ಸ್ವಾಮೀಜಿಗಳು ಭೇಟಿ ಸ್ಥಳವನ್ನು ಪರಿಶೀಲಿಸಿದ್ದರು. ಬಳಿಕ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಲಕ್ಷಾಂತರ ಸಂಖ್ಯೆಯಲ್ಲಿ ಭಕ್ತರು ಕುಂಭಮೇಳಕ್ಕೆ ಆಗಮಿಸುತ್ತಾರೆ. ಹೀಗಾಗಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ನೀಡಬೇಕು ಎಂದು ಹೇಳಿದರು.
ಇನ್ನೂ ಈ ಕುಂಭಮೇಳ ಯಶಸ್ವಿಯಾಗಬೇಕೆಂದರೆ ಅಧಿಕಾರಿಗಳು ಮತ್ತು ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ. ಹಾಗಾಗಿ ಯಾವುದೇ ರೀತಿಯ ಲೋಪದೋಷಗಳು ಆಗದಂತೆ ಕ್ರಮವಹಿಸಿ, ಮುಜಾಗ್ರತಾ ಕ್ರಮ ಕೈಗೊಳ್ಳಿ ಎಂದರು.





