Mysore
31
clear sky

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ಶೀಘ್ರವೇ ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ: ನಿಸಾರ್‌ ಅಹಮ್ಮದ್‌

ಮೈಸೂರು: ಅಲ್ಪಸಂಖ್ಯಾತರ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಿ ಎಂದು ಅಲ್ಪ ಸಂಖ್ಯಾತರ ಆಯೋಗದ ಅಧ್ಯಕ್ಷ ನಿಸಾರ್‌ ಅಹಮ್ಮದ್‌ ತಿಳಿಸಿದ್ದಾರೆ.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು(ಜನವರಿ.21) ಆಯೋಜಿಸಿದ್ದ ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮದಡಿ ಅಲ್ಪಸಂಖ್ಯಾತರ ಅಭಿವೃದ್ಧಿಯ ಸಂಬಂಧ 2024-25 ನೇ ಸಾಲಿನ ಜಿಲ್ಲಾ ಮಟ್ಟದ ತ್ರೈಮಾಸಿಕ ಸಭೆಯಲ್ಲಿ ಅಧ್ಯಕ್ಷತೆವಹಿಸಿ ಅವರು ಮಾತನಾಡಿದರು.

ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರಗಳು ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಈ ಯೋಜನೆಗಳ ಸೌಲಭ್ಯಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಅಲ್ಲದೇ ಸರ್ಕಾರಿ ಉರ್ದು ಶಾಲೆಗಳಲ್ಲಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳು ಎಷ್ಟು ಜನ ಶಾಲೆ ಬಿಟ್ಟಿದ್ದಾರೆ ಎಂಬುದನ್ನು ಪತ್ತೆ ಹಚ್ಚಬೇಕು. ಜೊತೆಗೆ ಆ ವಿದ್ಯಾರ್ಥಿಗಳು ಶಾಲೆ ಬಿಡಲು ಕಾರಣಗಳು ಏನೆಂಬುದನ್ನು ಶಿಕ್ಷಣ ಇಲಾಖೆಯ ಅಧಿಕಾರಿಗಳು ಸರ್ವೇ ಮಾಡಬೇಕು ಎಂದರು.

ಈ ವಿದ್ಯಾರ್ಥಿಗಳು ಮತ್ತೆ ಶಾಲೆಗೆ ತರಲು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ಜಿಲ್ಲಾ ನಗರಾಭಿವೃದ್ಧಿ ಕೋಸದ ವತಿಯಿಂದ ವಾಜಪೇಯಿ ನಗರ ವಸತಿ ಯೋಜನೆಯಡಿ ವಸತಿ ವ್ಯವಸ್ಥೆ ಕಲ್ಪಿಸಲು ಯೋಜನೆಯಿದ್ದು, ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು ಎಂದು ಸೂಚಿಸಿದರು.

ಇನ್ನೂ ಜಿಲ್ಲಾ ಉದ್ಯೋಗ ಹಾಗೂ ವಿನಿಮಯ ಕೇಂದ್ರದ ವತಿಯಿಂದ ವಿವಿಧ ಕಂಪೆನಿ ಮತ್ತು ಕಾರ್ಖಾನೆಗಳಿಗೆ ಅಗತ್ಯವಿರುವ ಹುದ್ದೆಗಳ ಬಗ್ಗೆ ಮಾಹಿತಿ ಪಡೆದು ಆಸಕ್ತಿ ಇರುವ ಅಭ್ಯರ್ಥಿಗಳಿಗೆ ಅವಕಾಶ ನೀಡಬೇಕು. ತೋಟಗಾರಿಗೆ ಇಲಾಖೆಯಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ, ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಗಳಡಿ ಅಲ್ಪಸಂಖ್ಯಾತರಿಗೆ ಇರುವ ಸೌಲಭ್ಯಗಳನ್ನು ಅರ್ಹರಿಗೆ ನೀಡಬೇಕು. ಅಲ್ಪಸಂಖ್ಯಾತರು ಕೃಷಿ ಮಾಡುತ್ತಿರುವ ಸಂಖ್ಯೆಯ ಮಾಹಿತಿಯನ್ನು ಪಡೆದುಕೊಳ್ಳಿ. ಆ ನಂತರ ಅವರಿಗೆ ಸೌಲಭ್ಯ ನೀಡಬೇಕು ಎಂದು ಸಲಹೆ ನೀಡಿದರು.

Tags: