ಮೈಸೂರು: ನಂದಿನಿ ಗ್ರಾಹಕರಿಗೆ ಶೇ.15ರಷ್ಟು ರಿಯಾಯಿತಿಯಡಿಯಲ್ಲಿ ಹಲವು ಉತ್ಪನ್ನಗಳನ್ನು ನೀಡಲಾಗುತ್ತಿದ್ದು, ಇದರ ಸದುಪಯೋಗಪಡಿಸಿಕೊಳ್ಳುವಂತೆ ಮೈಸೂರು ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್) ಅಧ್ಯಕ್ಷ ಆರ್.ಚೆಲುವರಾಜು ಹೇಳಿದರು.
ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ( ಮೈಮುಲ್)ದಿಂದ ಮೊಟ್ಟ ಮೊದಲ ಬಾರಿಗೆ ಆನೆಯ ಮೆರವಣಿಗೆ ಮೂಲಕ ವಿಶ್ವ ಹಾಲು ದಿನವನ್ನು ಆಚರಿಸಿ ಗಮನ ಸೆಳೆದರು. ಬಳಿಕ ನಡೆದ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿಶ್ವಸಂಸ್ಥೆ 2001ರಲ್ಲಿ ಆಹಾರ ಮತ್ತು ಕೃಷಿ ಸಂಸ್ಥೆಯಿಂದ ವಿಶ್ವ ಮಟ್ಟದಲ್ಲಿ ಹಾಲು ದಿನ ಆಚರಿಸುತ್ತಿದ್ದೇವೆ. ವಿಶ್ವ ಹಾಗೂ ರಾಜ್ಯದ ಮಟ್ಟದಲ್ಲಿ ಹಾಲಿನ ಉತ್ಪನ್ನಗಳು ತನ್ನದೇ ಆದ ರೀತಿಯಲ್ಲಿ ಪ್ರಚಾರ ಪಡೆದುಕೊಂಡಿವೆ. ನಂದಿನಿಯ 68 ಉತ್ಪನ್ನಗಳ ಜತೆಗೆ ಅನೇಕ ಉತ್ಪನ್ನಗಳನ್ನು ಬಿಡುಗಡೆ ಮಾಡಿದ್ದೇವೆ. ಇಡೀ ದೇಶದಲ್ಲಿ ನಂದಿನಿ ಮಾರಾಟ ಮಾಡುತ್ತಿದ್ದೇವೆ. ದೇಶದಲ್ಲಿ ಎಷ್ಟು ಉತ್ಪನ್ನಗಳಿವೆಯೋ ಅದೆಲ್ಲದಕ್ಕಿಂತಲೂ ಕಡಿಮೆ ದರದಲ್ಲಿ ನಂದಿನಿ ಹಾಲಿನ ದರವಿದೆ. ಯಾವುದೇ ಅತಿಯಾದ ಲಾಭದ ಆಸೆ ಇಲ್ಲದೆ, ಗ್ರಾಹಕರು ಹಾಗೂ ರೈತರ ಹಿತದೃಷ್ಠಿಯಿಂದ ಕೆಎಂಎಫ್ ನಿಭಾಯಿಸಿಕೊಂಡು ಹೋಗುತ್ತಿದೆ ಎಂದರು.
ಎಲ್ಲರೂ ನಂದಿನಿ ಉತ್ಪನ್ನಗಳ ಬಳಕೆಗೆ ತಿಳಿಸಬೇಕು. ಇದಕ್ಕಾಗಿಯೇ ಇಂದಿನಿಂದ ಗ್ರಾಹಕರಿಗಾಗಿ ಮ್ಯಾಂಗೋಲಸ್ಸಿ, ರಾಗಿ ಅಂಬಲಿ, ಬಯೋಟಿಕ್ ಮಜ್ಜಿಗೆ, ಪ್ರೊ ಬಯೋಟಿಕ್ ಮೊಸರು, ಬರ್ಫಿ, ಸಮೃದ್ಧಿ ಹಾಲು, ಸಿಹಿ ಲಸ್ಸಿ, ಗೋಧಿ ಲಡ್ಡು ಇಷ್ಟು ಉತ್ಪನ್ನಗಳ ಮೇಲೆ ಶೇ.15ರಷ್ಟು ರಿಯಾಯಿತಿ ನೀಡುತ್ತಿದ್ದೇವೆ. ಸಾರ್ವಜನಿಕರು ಹಾಗೂ ಗ್ರಾಹಕರು ಇದರ ಸದುಪಯೋಪಡಿಸಿಕೊಂಡು ಬೇರೆ ಉತ್ಪನ್ನಗಳ ಮೇಲೆ ವ್ಯಾಮೋಹ ಆಗದೇ ನಂದಿನಿ ಉತ್ಪನ್ನಗಳನ್ನೇ ಹೆಚ್ಚೆಚ್ಚು ಬಳಸಿ ಎಂದು ಕರೆ ನೀಡಿದರು.
ಜಿಲ್ಲಾ ಹಾಲು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿ. ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎನ್.ಸುರೇಶ್ ನಾಯ್ಕ್ ಪ್ರಸ್ತಾವಿಕವಾಗಿ ಮಾತನಾಡಿ, ಈಗಾಗಲೇ ಮೈಮುಲ್ ರೈತ ಹಾಗೂ ಗ್ರಾಹಕ ಸ್ನೇಹಿಯಾಗಿ ಅನೇಕ ರಿಯಾಯಿತಿಗಳನ್ನು ಘೋಷಣೆ ಮಾಡಿದೆ. ಈಗ ನೂತನ ಉತ್ಪನ್ನಗಳನ್ನು ಸಹ ವಿಶ್ವ ಹಾಲು ದಿನದಂದು ಬಿಡುಗಡೆ ಮಾಡಿದ್ದು, ಗ್ರಾಹಕರು ಇದರ ಸದುಪಯೋಗಪಡಿಸಿಕೊಂಡು ರೈತರನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕೆಂದು ಹೇಳಿದರು.
ಕೆ.ಆರ್.ನಗರ ಪಶುವೈದ್ಯಾಧಿಕಾರಿ ಡಾ.ಮಂಜುನಾಥ್, ಅಪೊಲೋ ಆಸ್ಪತ್ರೆ ಪ್ರಸೂತಿ ತಜ್ಞೆ ಕವಿತಾ, ಕಾವೇರಿ ಮಲ್ಟಿಸೆಷಾಲಿಟಿ ಆಸ್ಪತ್ರೆಯ ಪೌಷ್ಠಿಕ ತಜ್ಞೆ ಶಶಿಕಲಾ ಹಾಲಿನ ಮಹತ್ವ ಕುರಿತು ಮಾತನಾಡಿದರು. ನಿರ್ದೇಶಕರಾದ ಎ.ಟಿ.ಸೋಮಶೇಖರ್, ಕೆ.ಜಿ.ಮಹೇಶ್, ಕೆ.ಉಮಾಶಂಕರ್, ಸಿ.ಓಂ.ಪ್ರಕಾಶ್, ಕೆ.ಈರೇಗೌಡ, ದ್ರಾಕ್ಷಯಿಣಿ ಬಸವರಾಜಪ್ಪ, ಲೀಲಾ ಬಿ.ಕೆ.ನಾಗರಾಜು, ನೀಲಾಂಬಿಕೆ ಮಹೇಶ್ ಕುರಹಟ್ಟಿ, ಶಿವಗಾಮಿ ಷಣ್ಮುಗಂ, ಗುರುಸ್ವಾಮಿ ಬಿ, ಬಿ.ಎ. ಪ್ರಕಾಶ್, ಎ.ಬಿ. ಮಲ್ಲಿಕಾ ರವಿಕುಮಾರ್, ಪಶುಸಂಗೋಪನಾ ಇಲಾಖೆ ನಿರ್ದೇಶಕ ಮತ್ತು ಮೈಮುಲ್ ಪದನಿಮಿತ್ತ ನಿರ್ದೇಶಕ ಡಾ.ನಾಗರಾಜು, ಒಕ್ಕೂಟದ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಇನ್ನಿತರರು ಉಪಸ್ಥಿತರಿದ್ದರು.
ಡಿಸಿ ಶಿಲ್ಪಾನಾಗ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯ ಸಫಾರಿ ವಾಹನದಲ್ಲಿ ಮಕ್ಕಳನ್ನು ಕರೆತರಲು ಕ್ರಮ ಹನೂರು : ಅಂತೂ ಇಂತೂ…
ಬೆಳಗಾವಿ : ನಾನು ಅಡ್ಜಸ್ಟ್ ಮೆಂಟ್ ರಾಜಕಾರಣಿ ಅಲ್ಲ, ನಿಜವಾದ ವಿರೋಧ ಪಕ್ಷದ ನಾಯಕ ನಾನೇ ಎಂದು ವಿಧಾನಸಭೆ ಕಲಾಪದ…
ಬೆಳಗಾವಿ : ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ಪುರಾಣ ಪ್ರಸಿದ್ಧ ಕ್ಷೇತ್ರವಾಗಿರುವ ಬಿಳಿಗಿರಿ ರಂಗನಬೆಟ್ಟ ಪ್ರದೇಶವನ್ನು 5.75…
ಬೆಳಗಾವಿ : ಬಿಜೆಪಿ ನಾಯಕರಿಗೆ ರೈತರ ಮೇಲೆ ದಿಢೀರ್ ಪ್ರೀತಿ ಬಂದಿದೆ. ಅವರು ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡಲಿ, ಯಾರು…
ಬೆಳಗಾವಿ: ರಾಜಧಾನಿ ಬೆಂಗಳೂರನ್ನು ಹೊರತುಪಡಿಸಿದರೆ ಅತಿವೇಗವಾಗಿ ಬೆಳೆಯುತ್ತಿರುವ ಮೈಸೂರಿನಲ್ಲಿ ಸುಮಾರು 300 ಎಕರೆ ಜಮೀನಿನಲ್ಲಿ ಲೇಔಟ್ ನಿರ್ಮಾಣ ಮಾಡಿ ಸಾರ್ವಜನಿಕರಿಗೆ…
ಬೆಂಗಳೂರು: ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ರಾಜ್ಯ ಸರ್ಕಾರ ನೀಡಿದ್ದ ರಜೆ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಆದರೆ ಈ…