Mysore
18
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ದಸರಾ ಪ್ರಾಧಿಕಾರ ಅಗತ್ಯ ಇಲ್ಲ: ಸಿಎಂ

ಮೈಸೂರು : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ, ಕರ್ನಾಟಕ ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದರ ಜತೆಗೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇದಕ್ಕೆ ಪೂರಕವಾದ ಇಲಾಖೆಗಳು ಇವೆ. ಹೀಗಾಗಿ ಪ್ರತ್ಯೇಕ ಪ್ರಾಧಿಕಾರ ರಚನೆ ಅಗತ್ಯವಿಲ್ಲ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.

ಕಳೆದ ವರ್ಷದ ದಸರಾ ವೇಳೆ ಮುಂದಿನ ದಸರಾದಲ್ಲಿ ನಾನು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷ ನಾಯಕರು ಹೇಳಿದ್ದರು. ವಿರೋಧ ಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೆ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

ಇದನ್ನು ಓದಿ : ಬೆಳೆ ನಷ್ಟ | ಸಮೀಕ್ಷೆ ಮುಗಿದ ಬಳಿಕ ಪರಿಹಾರ ವಿತರಣೆ ; ಸಿಎಂ

ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಅವರಿಗೆ ಸರ್ವೋಚ್ಚ ನ್ಯಾಯಾಲಯ ಛೀಮಾರಿ ಹಾಕಿತು. ದಸರಾ ರಾಜಕೀಯದ ವಿಷಯವಲ್ಲ, ಇದು ಸಾಂಸ್ಕೃತಿಕ ಉತ್ಸವ ಎಂದು ಹೇಳಿದರು.

ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿವೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂಭ್ರಮದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆಂದು ಹೇಳಿದರು.

Tags:
error: Content is protected !!