ಮೈಸೂರು : ತಮ್ಮ ನೂತನ ಮನೆಯ ಗೃಹ ಪ್ರವೇಶದ ಬಗ್ಗೆ ಮೈಸೂರಿನಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಗೃಹಪ್ರವೇಶ ಕಾರ್ಯಕ್ರಮಕ್ಕೆ ಯಾರಿಗೂ ಆಹ್ವಾನವಿಲ್ಲ. ಇದು ಕೇವಲ ಕೌಟುಂಬಿಕ ಸಮಾರಂಭವಾಗಿರಲಿದೆ ಎಂದು ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಹೊಸ ಮನೆ ನಿರ್ಮಿಸಿದರೂ ಈಗ ವಾಸವಿರುವ ಮರಿಸ್ವಾಮಿ ಮನೆಯನ್ನು ಹಾಗೆಯೇ ಉಳಿಸಿಕೊಳ್ಳುವ ಆಸಕ್ತಿ ತೋರಿದ್ದಾರೆ. ನಾನು ಈಗ ಇರುವ ಮನೆ ನನ್ನದಲ್ಲ, ಮರಿಸ್ವಾಮಿ ಅವರದ್ದು. ಮರಿಸ್ವಾಮಿಯೇ ನನಗೆ ಹಾಗೂ ನನ್ನ ಮಗನಿಗೆ ಅನ್ನದಾತ. ಹೊಸ ಮನೆಗೆ ಸ್ಥಳಾಂತರಗೊಂಡ ನಂತರವೂ, ಮರಿಸ್ವಾಮಿ ಅವರು ಈ ಮನೆಯನ್ನು ಖಾಲಿ ಇಟ್ಟರೆ, ಅದನ್ನು ಸಾರ್ವಜನಿಕರ ಭೇಟಿಗಾಗಿ ಬಳಸಿಕೊಳ್ಳುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದನ್ನೂ ಓದಿ:-ದಸರಾ ಬಹುಮಾನ ವಿತರಣೆ ವೇಳೆ ತಳ್ಳಾಟ : DYSP ಗೆ ಗಾಯ ; ಆಸ್ಪತ್ರೆಗೆ ದಾಖಲು
ಡಿಸೆಂಬರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೂತನ ಮನೆಯ ಗೃಹಪ್ರವೇಶ ನಡೆಯುವ ಸಾಧ್ಯತೆ ಇದೆ. ಮೈಸೂರಿಗೆ ಬಂದರೆ ತಾವು ಮರಿಸ್ವಾಮಿ ಎಂಬುವವರ ಮನೆಯಲ್ಲಿ ಉಳಿದುಕೊಳ್ಳುತ್ತಿದ್ದೆ. ಇದು ನನ್ನ ಅದೃಷ್ಟದ ಮನೆ. ಎರಡು ಬಾರಿ ಮುಖ್ಯಮಂತ್ರಿ ಸ್ಥಾನ ಅಲಂಕರಿಸುವ ಅದೃಷ್ಟ ಒದಗಿ ಬಂದಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಚರ್ಚೆಯಾಗಿಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಕುರಿತು ಬೆಂಗಳೂರಿನಲ್ಲಿ…
ನವದೆಹಲಿ: ಕಾಲಾತೀತ, ಮೌಲ್ಯಾಧರಿತ ಆದರ್ಶಗಳನ್ನು ಒಳಗೊಂಡಿರುವ ಭಗವದ್ಗೀತೆಯನ್ನು ವಿದ್ಯಾರ್ಥಿಗಳಿಗೆ ಬೋಧಿಸಲು ಪಠ್ಯದಲ್ಲಿ ಸೇರಿಸಬೇಕು ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು…
ನಂಜನಗೂಡು: ಸೋಲು, ಗೆಲುವಿಗಿಂತ ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ ಎಂದು ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು ಹೇಳಿದರು. ನಂಜನಗೂಡು ನಗರದ ಕಾಲೇಜೊಂದರಲ್ಲಿ ಆಯೋಜಿಸಿದ್ದ…
ಮಂಡ್ಯ: ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿಫಾರಂನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು…
ಬೆಂಗಳೂರು: ಆರ್.ಅಶೋಕ್ ಅವರನ್ನು ವಿಪಕ್ಷ ನಾಯಕನ ಸ್ಥಾನದಿಂದ ಇಳಿಸದೇ ಹೋದರೆ ಬಿಜೆಪಿ ಶಾಶ್ವತವಾಗಿ ವಿಪಕ್ಷದಲ್ಲಿ ಇರುತ್ತದೆ ಎಂದು ಸಚಿವ ಎಂ.ಬಿ.ಪಾಟೀಲ್…
ನವದೆಹಲಿ: ಭಾರತ-ರಷ್ಯಾ ಉಭಯ ದೇಶಗಳ ನಡುವೆ ನಡೆದ ದ್ವಿಪಕ್ಷೀಯ ಮಾತುಕತೆ ವೇಳೆ ಹಲವಾರು ಮಹತ್ವದ ಒಪ್ಪಂದಗಳಿಗೆ ಸಹಿ ಹಾಕಲಾಗಿದೆ. ನವದೆಹಲಿಯ…