ಮೈಸೂರು

ಅಧಿಕಾರ ಹಂಚಿಕೆ ಪ್ರಸ್ತಾವವೇ ನಡೆದಿಲ್ಲ : ಗೃಹ ಸಚಿವ ಪರಮೇಶ್ವರ್‌

ಮೈಸೂರು : ಪಕ್ಷದೊಳಗೆ ಮುಖ್ಯಮಂತ್ರಿ ಅಥವಾ ನಾಯಕತ್ವ ಬದಲಾವಣೆಗೆ ಸಂಬಂಧಿಸಿದಂತೆ ಅಧಿಕಾರ ಹಂಚಿಕೆಯ ಪ್ರಸ್ತಾವವೇ ನಡೆದಿಲ್ಲ. ಹೈಕಮಾಂಡ್ ಸುಮ್ಮನಿದೆ ಎಂದರೆ ಅದರಲ್ಲಿ ಬದಲಾವಣೆಗಳು ಇಲ್ಲ ಎಂದರ್ಥ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್‌ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಹಂಚಿಕೆಯ ಕುರಿತು ನಮಗೆ ಈತನಕ ಯಾವ ವಿಚಾರವೂ ಗೊತ್ತಿಲ್ಲ. ಪಕ್ಷದ ಒಳಗೆ ಅಂತಹ ಪ್ರಸ್ತಾಪವೇ ನಡೆದಿಲ್ಲ ಎಂಬುದನ್ನು ಗಮನಿಸಬೇಕು ಎಂದರು.

ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಆದರೆ ಅವರ ಬದಲಾವಣೆ ಬಗ್ಗೆ ಎಲ್ಲಿಯೂ ಕೂಡ ಮಾತನಾಡಿಲ್ಲ. ವರಿಷ್ಠರು ಅಗತ್ಯ ಇದ್ದಾಗ ಮಾತನಾಡುತ್ತಾರೆ. ಹೈಕಮಾಂಡ್ ಏನಾದರೂ ಹೇಳಿದರೆ ಅದನ್ನು ನಾವು ಪಾಲಿಸುತ್ತೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಕುರ್ಚಿಯ ಬಗ್ಗೆ ಗೊಂದಲ ಇದ್ದಿದ್ದರೆ ಶಾಸಕರು ಸಿಎಲ್‌ಪಿ ಸಭೆಯಲ್ಲಿ ಹೇಳುತ್ತಿದ್ದರು. ಅಲ್ಲಿ ಯಾರು ಕೂಡ ಈ ಬಗ್ಗೆ ಮಾತನಾಡಿಲ್ಲ. ಅಲ್ಲಿಗೆ ಯಾವ ಗೊಂದಲವೂ ಇಲ್ಲ ಎಂದರ್ಥ. ಸಿದ್ದರಾಮಯ್ಯ ಸಿಎಂ ಎನ್ನುವುದನ್ನು ಹೈಕಮಾಂಡ್ ಘೋಷಣೆ ಮಾಡಿದೆ. ಹೈಕಮಾಂಡ್ ಎಲ್ಲಾದರೂ ಸಿದ್ದರಾಮಯ್ಯ ಬೇಡ ಎಂದು ಹೇಳಿದೆಯಾ? ಇಲ್ಲ ತಾನೇ, ಹೈಕಮಾಂಡ್‌ಗೆ ಕರ್ನಾಟಕದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಗೊಂದಲ ಅಂತ ಅನ್ನಿಸಿಲ್ಲ ಎಂದು ನುಡಿದರು.

ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಐದು ವರ್ಷಗಳ ಕಾಲ ಮುಂದುವರಿಯಬಹುದೆಂದು ಡಾ.ಯತೀಂದ್ರ ಅವರು ಹೇಳಿದ್ದಾರೆ. ಯತೀಂದ್ರ ಅವರಿಗೆ ಅವರದೇ ಮಾಹಿತಿ ಇರಬಹುದು. ಅದನ್ನೇ ಹೇಳಿರುತ್ತಾರೆ ಎಂದು ಸಮರ್ಥಿಸಿಕೊಂಡರು.

ಮುಂದಿನ ಸಿಎಂ ಎಂದು ಕಾರ್ಯಕರ್ತರು ಜೈಕಾರ ಕೂಗಿದ ಕೂಡಲೇ ಸಿಎಂ ಆಗಲು ಸಾಧ್ಯನಾ? ನನಗೂ ಬಹಳಷ್ಟು ಜನರು ಮುಂದಿನ ಸಿಎಂ ಎನ್ನುವ ರೀತಿಯಲ್ಲಿ ಕೂಗುತ್ತಾರೆ. ನಾನು ಹೋದ ಮೇಲೆ ಮತ್ತೊಬ್ಬರನ್ನು ಕೂಗುತ್ತಾರೆ. ಹೀಗಾಗಿ ಘೋಷಣೆಗಳಿಗೆ ಹೆಚ್ಚಿನ ಮಹತ್ವ ಕೊಡಬೇಡಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಟಾಂಗ್ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೆಕೆಆರ್‌ಗೆ ಮುಖಭಂಗ ; ಮೊದಲ ಗೆಲುವು ದಾಖಲಿಸಿದ ಎಸ್‌ಆರ್‌ಎಚ್‌

ಕೋಲ್ಕತ್ತಾ : ಹೆನ್ರಿಚ್ ಕ್ಲಾಸೆನ್ ಅರ್ಧಶತಕದಾಟ ಹಾಗೂ ನಿತೀಶ್ ಕುಮಾರ್ ರೆಡ್ಡಿ ಅವರ ಆಲ್‌ರೌಂಡರ್ ಆಟದ ನೆರವಿನಿಂದ ಅತಿಥೇಯ ಕೋಲ್ಕತ್ತಾ…

1 hour ago

ಮೈಸೂರು ಫಾಲ್ಕನ್ ಟೈರ್ಸ್‌ನ ಮಾಜಿ ಮಾಲೀಕ ರುಹಿಯಾ ಬಂಧನ

315 ಕೋಟಿ ಸೈಬರ್ ವಂಚನೆ ಪ್ರಕರಣದಲ್ಲಿ ಬಂಧನ ಕೋಲ್ಕತ್ತಾ : ಶೆಲ್‌ ಕಂಪನಿಗಳು ಮತ್ತು ಕ್ರಿಪ್ಟೋಕರೆನ್ಸಿ ಆಧಾರಿತ ಹಣ ವರ್ಗಾವಣೆಯ…

3 hours ago

ಹೊರ್ಮುಜ್ ಕುರಿತು ಬ್ರಿಟನ್ ನೇತೃತ್ವದ ಸಭೆಯಲ್ಲಿ ಭಾರತ ಭಾಗವಹಿಸಲಿದೆ

ಲಂಡನ್‌ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಫೆಬ್ರವರಿ 28ರಿಂದ ಮುಚ್ಚಲ್ಪಟ್ಟಿರುವ ಹೊರ್ಮುಜ್ ಜಲಸಂಧಿಯನ್ನು ಮತ್ತೆ ತೆರೆಯುವ ಬಗ್ಗೆ ಚರ್ಚಿಸಲು ಬ್ರಿಟನ್…

3 hours ago

ಸಂವಿಧಾನ ಬದಲಾವಣೆ ಅಸಾಧ್ಯ : ಮುಖ್ಯಮಂತ್ರಿ ಚಂದ್ರು

ಮೈಸೂರು : ಕೆಲವರು ಸಂವಿಧಾನ ಬದಲಿಸುವ ಮಾತನಾಡುತ್ತಾರೆ, ಖಂಡಿತ ಇದು ಅಸಾಧ್ಯ. ಸಂವಿಧಾನಕ್ಕೆ ತಿದ್ದುಪಡಿ ಮಾಡಬಹುದೇ ಹೊರತು ಮೂಲ ತತ್ವಗಳನ್ನು…

4 hours ago

KSOU | ಕುಲಪತಿ ಹುದ್ದೆಗೆ ಅರ್ಜಿ ಆಹ್ವಾನ

ಮೈಸೂರು : ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU) ಕುಲಪತಿ ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ…

4 hours ago

ನಕ್ಸಲ್ ಮುಕ್ತ ಮಾಡಿದ ಮೊದಲ ರಾಜ್ಯ ಕರ್ನಾಟಕ : ಗೃಹ ಸಚಿವ ಡಾ.ಜಿ.ಪರಮೇಶ್ವರ್

ಬೆಂಗಳೂರು : ಬಹಳ ವರ್ಷಗಳ ಹಿಂದೆಯೇ ನಕ್ಸಲ್ ನಿಗ್ರಹ ಪಡೆ (ಎಎನ್‌ಎಫ್‌) ಸ್ಥಾಪಿಸುವ ಮೂಲಕ ದೇಶದಲ್ಲೇ ಮೊದಲು ಕರ್ನಾಟಕವನ್ನು ನಾವು…

5 hours ago