No Revolution in State Politics: Minister Hebbalkar
ಮೈಸೂರು : ರಾಜ್ಯ ರಾಜಕೀಯದಲ್ಲಿ ಸೆಪ್ಟಂಬರ್ ಬಳಿಕ ಯಾವುದೇ ಕ್ರಾಂತಿ ಇರುವುದಿಲ್ಲ. ಎಲ್ಲವೂ ಶಾಂತವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.
ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೇ ಪದೆ ಮಾತನಾಡುವುದು ಸರಿ ಇಲ್ಲ ಎಂದರು.
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳಿದರು.
ಮೂರು ತಿಂಗಳಿಗೊಮ್ಮೆ ಗೃಹಲಕ್ಷ್ಮೀ ಯೋಜನೆಯ ಹಣ ಕೊಡಲಾಗುತ್ತಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ನಾವು ಪ್ರತಿ ತಿಂಗಳು ಹಣ ಹಾಕುತ್ತಿದ್ದೇವೆ. ಮೇ ತಿಂಗಳವರೆಗೂ ಹಣ ಹಾಕಲಾಗಿದೆ. ಜೂನ್ ತಿಂಗಳ ಹಣದ ಪ್ರಕ್ರಿಯೆ ನಡೆಯುತ್ತಿದೆ. ನಮಗೆ ಹಣ ಹಾಕಲು ಯಾವ ತೊಡಕುಗಳೂ ಇಲ್ಲ. ಎಚ್.ಎಂ ರೇವಣ್ಣ ಯಾಕೆ ಆ ರೀತಿ ಹೇಳಿದ್ದಾರೆ ಗೊತ್ತಿಲ್ಲ ಎಂದರು.
ಟೆಹರಾನ್: ಯುಎಸ್ ಮಿಲಿಟರಿ ಬಳಸುತ್ತಿದ್ದ ಸೌದಿ ಅರೇಬಿಯಾದ ಅಲ್ ಖಾರ್ಜ್ ವಾಯುನೆಲೆಯ ಮೇಲೆ ಇರಾನ್ ಕ್ಷಿಪಣಿ ದಾಳಿ ನಡೆಸಿದೆ. ಕೆಲವು…
ಬೆಂಗಳೂರು: ನಗರದಲ್ಲಿ ವಾಣಿಜ್ಯ ಎಲ್‌ಪಿಜಿ ಕೊರತೆ ಮುಂದುವರಿದಿದ್ದು, ಸ್ವಲ್ಪ ಮಟ್ಟಿಗೆ ಹೋಟೆಲ್‌ಗಳಿಗೆ ಎಲ್‌ಪಿಜಿ ನೀಡಲು ಚರ್ಚಿಸುತ್ತೇವೆ ಎಂದು ಸಚಿವ ಮುನಿಯಪ್ಪ…
ಚಾಮರಾಜನಗರ: ಗೂಡ್ಸ್ ಆಟೋ ಪಲ್ಟಿಯಾಗಿ 13 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದ ಬೈಪಾಸ್ ರಸ್ತೆಯಲ್ಲಿ ನಡೆದಿದೆ. ಮಲೆ ಮಹದೇಶ್ವರ…
ಬೆಂಗಳೂರು: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಅಡುಗೆ ಅನಿಲ ಸಿಲಿಂಡರ್ ಪೂರೈಕೆಯಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.…
ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…
ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…