Mysore
24
scattered clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ನ.20ಕ್ಕೆ ಬಾರ್‌ ಬಂದ್‌ಗೆ ನಮ್ಮ ಬೆಂಬಲ ಇಲ್ಲ: ಚಂದ್ರಶೇಖರ್‌ ಸ್ಪಷ್ಟನೆ

ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.

ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಮುಂದುವರೆದು ಮಾತನಾಡಿದ ಚಂದ್ರಶೇಖರ್, ನವೆಂಬರ್ 20 ರಂದು ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲ ಇಲ್ಲ. ನಾವು ಎಂದಿನಂತೆ ನಮ್ಮ ವ್ಯಾಪಾರ ವಹಿವಾಟು ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾವುದೇ ಲಂಚ ನೀಡಿದ್ರೆ ಅದಕ್ಕೆ ದಾಖಲೆ ನೀಡಲಿ. ನವೆಂಬರ್ 20 ರ ಮದ್ಯ ಮಾರಾಟ ಬಂದ್ ಗೆ ನಮ್ಮ ವಿರೋಧ ಇದೆ ಎಂದರು.

ನಮ್ಮ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸಲು ಮುಂದಾದ್ರೆ ನಾವು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.

Tags:
error: Content is protected !!