ಮೈಸೂರು: ಅಬಕಾರಿ ಇಲಾಖೆ ಭ್ರಷ್ಟಾಚಾರ ಖಂಡಿಸಿ ನವೆಂಬರ್ 20 ರಂದು ಕರೆ ನೀಡಿರುವ ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಚಂದ್ರಶೇಖರ್ ಸ್ಪಷ್ಟನೆ ನೀಡಿದ್ದಾರೆ.
ಖಾಸಗಿ ಹೊಟೇಲ್‌ನಲ್ಲಿ ಶುಕ್ರವಾರ ಕರ್ನಾಟಕ ರಾಜ್ಯ ಲಿಕ್ಕರ್ ಮರ್ಚೆಂಟ್ಸ್ ಡೆವಲಪ್ ಮೆಂಟ್ ಕೋ ಆಪರೇಟಿವ್ ಸೊಸೈಟಿಯಿಂದ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮುಂದುವರೆದು ಮಾತನಾಡಿದ ಚಂದ್ರಶೇಖರ್, ನವೆಂಬರ್ 20 ರಂದು ಮದ್ಯ ಮಾರಾಟ ಬಂದ್‌ಗೆ ನಮ್ಮ ಬೆಂಬಲ ಇಲ್ಲ. ನಾವು ಎಂದಿನಂತೆ ನಮ್ಮ ವ್ಯಾಪಾರ ವಹಿವಾಟು ಮಾಡುತ್ತೇವೆ. ಅಬಕಾರಿ ಇಲಾಖೆಯಲ್ಲಿ ಯಾವುದೇ ಲಂಚ ನೀಡಿದ್ರೆ ಅದಕ್ಕೆ ದಾಖಲೆ ನೀಡಲಿ. ನವೆಂಬರ್ 20 ರ ಮದ್ಯ ಮಾರಾಟ ಬಂದ್ ಗೆ ನಮ್ಮ ವಿರೋಧ ಇದೆ ಎಂದರು.
ನಮ್ಮ ಅಂಗಡಿಗಳನ್ನ ಬಲವಂತವಾಗಿ ಬಂದ್ ಮಾಡಿಸಲು ಮುಂದಾದ್ರೆ ನಾವು ಪೊಲೀಸರಿಗೆ ದೂರು ನೀಡುತ್ತೇವೆ ಎಂದು ಚಂದ್ರಶೇಖರ್ ಎಚ್ಚರಿಕೆ ನೀಡಿದರು.
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…