ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ ಇರಾನ್ ಅಗತ್ಯವಿದ್ದರೆ ನಾವು ದೀರ್ಘಕಾಲ ಯುದ್ಧ ಮುಂದುವರಿಸಲು ಸಿದ್ಧವಿದ್ದೇವೆ ಎಂದು ಹೇಳಿದೆ.
ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ ಅಮೆರಿಕ ಹೇಳಿಕೆಯನ್ನು ಇರಾನ್ ದೇಶದ ಭಾರತದ ಪ್ರತಿನಿಧಿ ಅಬ್ದುಲ್ ಮಜೀದ್ ಹಕೀಂ ಇಲಾಹಿ ತಳ್ಳಿಹಾಕಿದ್ದು, ಇರಾನ್ ಯುದ್ಧಕ್ಕೆ ಸಿದ್ಧವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸುದ್ದಿಸಂಸ್ಥೆ ಎಎನ್‌ಐ ಸಂದರ್ಶನದಲ್ಲಿ ಮಾತನಾಡಿರು ಅವರು, “ನಾವು ಯುದ್ಧ ಬಯಸಲಿಲ್ಲ…ಮಾತುಕತೆ ನಡೆಯುತ್ತಿದ್ದಾಗ ಅಮೆರಿಕ ನಮ್ಮ ಮೇಲೆ ದಾಳಿ ನಡೆಸಿ ಯುದ್ಧ ಆರಂಭಿಸಿತು” ಎಂದು ಇಲಾಹಿ ಆರೋಪಿಸಿದ್ದಾರೆ.
ಇನ್ನು ಮುಂದೆ ಅಮೆರಿಕದೊಂದಿಗೆ ಮಾತುಕತೆ ನಡೆಸಲು ಇರಾನ್ ಯಾವುದೇ ಆಸಕ್ತಿ ಹೊಂದಿಲ್ಲ. ಖಾರ್ಗ್ ದ್ವೀಪದ ಮೇಲೆ ಅಮೆರಿಕ ದಾಳಿ ನಡೆಸಿದ್ದು, ಇರಾನ್ ಪ್ರತಿಕ್ರಿಯೆಯಾಗಿ ದಾಳಿಗಳನ್ನು ಮುಂದುವರೆಸಿದೆ. ಈ ಯುದ್ಧ ಯಾವಾಗ ಮುಕ್ತಾಯವಾಗಲಿದೆ ಎಂಬುದು ನನಗೆ ತಿಳಿದಿಲ್ಲ, ಆದರೆ ಇರಾನ್ ಎಂದಿಗೂ ಶರಣಾಗುವುದಿಲ್ಲ ಕೊನೆಯವರೆಗೂ ಹೋರಾಡಲು ಸಿದ್ಧ ಎಂದು ಅವರು ಒತ್ತಿ ಹೇಳಿದ್ದಾರೆ.
ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…
ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…
ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…
ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…
ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…
ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…