Mysore
21
clear sky

Social Media

ಗುರುವಾರ, 29 ಜನವರಿ 2026
Light
Dark

MYSURU | ಆಷಾಢ ಮಾಸದ ಈ ದಿನಗಳಂದು ಚಾಮುಂಡಿ ಬೆಟ್ಟಕ್ಕೆ ವಾಹನ ನಿಷೇಧ

ಮೈಸೂರು : ಆಷಾಡ ಮಾಸದ ಶುಕ್ರವಾರಗಳ ಆಚರಣೆಗೆ ಮೈಸೂರು ಜಿಲ್ಲಾಡಳಿತ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರತಿವರ್ಷದಂತೆ ಈ ವರ್ಷವೂ ಆಷಾಢ ಮಾಸದ ವೇಳೆ ಅಸಂಖ್ಯಾತ ಸಾರ್ವಜನಿಕರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಕೆಲ ಸೂಚನೆಗಳನ್ನು ಹೊರಡಿಸಿದೆ.

ಇಂತಿವೆ ಸೂಚನೆ……
ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ.

ಸಾರ್ವಜನಿಕರು ವಾಹನಗಳನ್ನು ಲಲಿತಾ ಮಹಲ್‌ ಹೋಟೆಲ್‌ ಪಾರ್ಕಿಂಗ್‌ ಸ್ಥಳದಲ್ಲಿ ನಿಲ್ಲಿಸಿ, ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು.

ಜೂನ್‌ 27, ಜುಲೈ 04, 11 ಮತ್ತು 18 ರಂದು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿಯ ವರ್ಧಂತಿ ನಡೆಯಲಿದೆ.

ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ, ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತ

ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300ರೂ. ನಿಗದಿ ಪಡಿಸಲಾಗಿದೆ.

ಇನ್ನೂ ಪೊಲೀಸ್‌ ಇಲಾಖೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಟ್ರಾಫಿಕ್‌ ಪೊಲೀಸರು ಸಂಚಾರ ಸುಗಮಕ್ಕೆ ಅಗತ್ಯ ಕ್ರಮಕೈಗೊಂಡಿದ್ದಾರೆ.

Tags:
error: Content is protected !!