ಮೈಸೂರು : ಆಷಾಡ ಮಾಸದ ಶುಕ್ರವಾರಗಳ ಆಚರಣೆಗೆ ಮೈಸೂರು ಜಿಲ್ಲಾಡಳಿತ ಈಗಾಗಲೇ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದೆ. ಪ್ರತಿವರ್ಷದಂತೆ ಈ ವರ್ಷವೂ ಆಷಾಢ ಮಾಸದ ವೇಳೆ ಅಸಂಖ್ಯಾತ ಸಾರ್ವಜನಿಕರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುತ್ತಾರೆ. ಈ ಹಿನ್ನೆಲೆ ಜಿಲ್ಲಾಡಳಿತ ಕೆಲ ಸೂಚನೆಗಳನ್ನು ಹೊರಡಿಸಿದೆ.
ಇಂತಿವೆ ಸೂಚನೆ……
ಆಷಾಢ ಶುಕ್ರವಾರ ಹಾಗೂ ವರ್ಧಂತಿ ದಿನಗಳಂದು ಯಾವುದೇ ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ಪ್ರವೇಶವಿರುವುದಿಲ್ಲ.
ಸಾರ್ವಜನಿಕರು ವಾಹನಗಳನ್ನು ಲಲಿತಾ ಮಹಲ್ ಹೋಟೆಲ್ ಪಾರ್ಕಿಂಗ್ ಸ್ಥಳದಲ್ಲಿ ನಿಲ್ಲಿಸಿ, ಸರ್ಕಾರಿ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಬಹುದು.
ಜೂನ್ 27, ಜುಲೈ 04, 11 ಮತ್ತು 18 ರಂದು ಆಷಾಢ ಶುಕ್ರವಾರಗಳು ಹಾಗೂ ಜುಲೈ 17 ರಂದು ಚಾಮುಂಡೇಶ್ವರಿಯ ವರ್ಧಂತಿ ನಡೆಯಲಿದೆ.
ಆಷಾಢ ಶುಕ್ರವಾರ ಹಾಗೂ ಆಷಾಢ ಮಾಸದ ಶನಿವಾರ, ಭಾನುವಾರಗಳಂದು ಸಾಮಾನ್ಯ ದರ್ಶನ ಉಚಿತ
ಪ್ರವೇಶ ದರ್ಶನಕ್ಕೆ 50 ರೂ. ಹಾಗೂ ವಿಶೇಷ ದರ್ಶನಕ್ಕೆ 300ರೂ. ನಿಗದಿ ಪಡಿಸಲಾಗಿದೆ.
ಇನ್ನೂ ಪೊಲೀಸ್ ಇಲಾಖೆ ಅಗತ್ಯ ಸಿದ್ದತೆಗಳನ್ನು ಮಾಡಿಕೊಂಡಿದ್ದು, ಟ್ರಾಫಿಕ್ ಪೊಲೀಸರು ಸಂಚಾರ ಸುಗಮಕ್ಕೆ ಅಗತ್ಯ ಕ್ರಮಕೈಗೊಂಡಿದ್ದಾರೆ.
ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…
ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…
ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರ ನಡುವೆ ನಾಟಿ ಕೋಳಿಯ ಬಗ್ಗೆ ಚರ್ಚೆ…
ಬೆಂಗಳೂರು : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ…
ಬೆಳಗಾವಿ (ಸುವರ್ಣಸೌಧ) : ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಕೇಬಲ್ ಟಿವಿ ಆಪರೇಟರ್‌ಗಳಿಗೆ ವಿಧಿಸಲಾಗುತ್ತಿರುವ ಶುಲ್ಕವನ್ನು ಶೇ.50ರಷ್ಟು ಕಡಿಮೆ ಮಾಡಲಾಗುವುದು…