ಮೈಸೂರು : ಬೆಂಗಳೂರು ಮೈಸೂರು ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಹಾಗೂ ಇತರ ಸಣ್ಣ ವಾಹನಗಳ ಸಂಚಾರಕ್ಕೆ ನಿರ್ಬಂಧ ವಿಧಿಸಿರುವುದನ್ನು ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸಮರ್ಥಿಸಿಕೊಂಡಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಕ್ಸ್‌ಪ್ರೆಸ್ ಹೆದ್ದಾರಿಯ ಅಪಘಾತದಲ್ಲಿ ಮೃತಪಟ್ಟ ಬಹುತೇಕರು ಬೈಕ್ ಸವಾರರು. 150 ಸಿಸಿ ವಾಹನಗಳಲ್ಲಿ ಹೆಚ್ಚು ವೇಗದಲ್ಲಿ ಹೋಗಲು ಸಾಧ್ಯವಿಲ್ಲ. ಆಟೋ ರಿಕ್ಷಾದಂತಹ ವಾಹನಗಳ ವೇಗ ಇನ್ನೂ ಕಡಿಮೆ ಇರುತ್ತದೆ. ಎತ್ತಿನಗಾಡಿ, ಕುದುರೆಗಾಡಿಯಂತಹ ಮೋಟಾರ್ ರಹಿತ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲು ಸಾಧ್ಯವೇ ಇಲ್ಲ ಎಂದು ಹೇಳಿದ್ದಾರೆ.
ನಿರ್ಬಂಧಕ್ಕೆ ಸಂಬಂಧಿಸಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಿಂದೆಯೇ ಅವಕಾಶ ಮಾಡಿಕೊಂಡಿದೆ. ಈ ಸಂಬಂಧ ಜುಲೈ 12ರಂದು ಅಧಿಸೂಚನೆ ಕೂಡ ಹೊರಡಿಸಲಾಗಿದೆ. ಆಗಸ್ಟ್ 1ರಿಂದ ನಿಯಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಹೆದ್ದಾರಿಯಲ್ಲಿ ಗ್ರಿಲ್, ವಿದ್ಯುತ್ ಕಂಬಗಳ ಕಳ್ಳತನ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಕುರಿತು ಎನ್‌ಎಚ್‌ಎಐ ಅಧಿಕಾರಿಗಳು ಒಂದೇ ಒಂದು ದೂರು ಕೊಟ್ಟಿಲ್ಲ. ತಡೆಗೋಡೆ ಕಬ್ಬಿಣ ಕಳ್ಳತನದಿಂದ ಹಸು, ಪಾದಚಾರಿಗಳು ರಸ್ತೆಗೆ ಬರುತ್ತಿದ್ದಾರೆ. ಇದರಿಂದಾಗಿ ಅಪಘಾತ ಆಗುತ್ತಿವೆ ಎಂದು ಹೇಳುತ್ತಿದ್ದಾರೆ. ಆದರೆ ಪೊಲೀಸರಿಗೆ ದೂರು ಕೊಟ್ಟಿಲ್ಲ. ದರೋಡೆ ಪ್ರಕರಣಗಳ ವಿಚಾರವನ್ನೂ ನಮ್ಮ ಗಮನಕ್ಕೆ ತಂದಿಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…
ಈ ವರ್ಷದ ದಸರಾ ಮಹೋತ್ಸವದಲ್ಲಿನ ವಿದ್ಯುತ್ ದೀಪಾಲಂಕಾರಗಳು ಪ್ರತಿ ವರ್ಷದಂತೆ ಈ ವರ್ಷವೂ ಜನರ ಮನಸ್ಸನ್ನು ಆಕರ್ಷಿಸುತ್ತಿದೆ. ಅದರಲ್ಲೂ ದೇವರಾಜ…
‘ಮತ್ತೆ ಹಾರ್ಟ್ ಸರ್ಜರಿ ಮಾಡಿಸಿಕೊಳ್ಳಬೇಕಾಗುತ್ತದೆ’- ಇದು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಹೆಚ್. ಡಿ. ಕುಮಾರಸ್ವಾಮಿ ಅವರ ಕುರಿತು…