ಮೈಸೂರು

ಎಲ್ಲಾ ಹಾವು ವಿಷಕಾರಿಯಲ್ಲ ; ಭಯಬೇಡ : ಉರಗ ರಕ್ಷಕ ಸ್ನೇಕ್‌ ಶ್ಯಾಮ್‌

ಮೈಸೂರು : ಹಾವುಗಳ ಬಗ್ಗೆ ಅನಗತ್ಯ ಭಯದಿಂದ ಅವುಗಳನ್ನು ಸಾಯಿಸಲಾಗುತ್ತಿದೆ. ಎಲ್ಲಾ ಹಾವುಗಳು ವಿಷಕಾರಿಯಲ್ಲ ಎಂದು ಉರಗ ರಕ್ಷಕ ಸ್ನೇಕ್ ಶ್ಯಾಮ್ ಹೇಳಿದರು.

ನಗರದ ತ್ಯಾಗರಾಜ ರಸ್ತೆಯಲ್ಲಿರುವ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಆಶ್ರಯದಲ್ಲಿ ಹಾವುಗಳ ದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಾವುಗಳ ಬಗ್ಗೆ ಜಾಗೃತಿ ಮೂಡಿಸಿದರು.

ಅರಣ್ಯ ಇಲಾಖೆ ಪರಿಸರ ಹಾಗೂ ವನ್ಯಜೀವಿಗಳ ಸಂರಕ್ಷಣೆಗೆ ಮುಂದಾಗಿರುವುದಕ್ಕೆ ಸಾರ್ವಜನಿಕರು ಸಹಕರಿಸಬೇಕು. ನಾಗರಹಾವು, ಕಾಳಿಂಗ ಸರ್ಪ ವಿಷಕಾರಿಯಾಗಿದ್ದು, ಹಪ್ಪಟೆ, ಕೇರೆ ಹಾವು, ಹಸಿರು ಹಾವು ಮುಂತಾದವು ವಿಷಕಾರಿಯಲ್ಲ. ಕೆಲವು ಹಾವುಗಳು ಹೆಚ್ಚು ವಿಷಕಾರಿಯಲ್ಲದಿದ್ದರೂ, ಹಪ್ಪಟೆ ಹಾವು ಕಚ್ಚಿದರೆ ವೈದ್ಯರ ಬಳಿ ತೆರಳಿ ಚಿಕಿತ್ಸೆ ಪಡೆಯಬೇಕು. ಹಾವುಗಳ ಬಗ್ಗೆ ಅನಗತ್ಯ ಭಯ ಬೇಡ ಎಂದು ಸಲಹೆ ನೀಡಿದರು.

ಹಾವು ಕಚ್ಚಿದಾಗ ಬಹುತೇಕ ಜನರು ಭಯದಿಂದ ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪುತ್ತಾರೆ. ಹಾವು ಕಚ್ಚಿದಾಗ ವ್ಯಕ್ತಿಗೆ ಧೈರ್ಯ ತುಂಬಬೇಕು ಮತ್ತು ಸಾಧ್ಯವಾದಷ್ಟು ಬೇಗ ಸಮೀಪದ ಆಸ್ಪತ್ರೆಗೆ ಕರೆದೊಯ್ಯಬೇಕು ಎಂದರು.

ಸಮಾಜಸೇವಕ ಕೆ.ರಘುರಾಮ್ ವಾಜಪೇಯಿ ಮಾತನಾಡಿ, ಹಾವನ್ನ ನಾವು ಜೀವಭಯದಿಂದ ಹಿಡಿಯಬಾರದು. ವೈಜ್ಞಾನಿಕವಾಗಿ ಜೀವರಕ್ಷಣೆಯಿಂದ ಹಿಡಿಯಬೇಕು, ಹಬ್ಬ ಹರಿದಿನ ಇತಿಹಾಸದಲ್ಲೂ ಸಹ ಪ್ರತಿಯೊಂದು ಪ್ರಾಣಿ-ಪಕ್ಷಿಗಳಿಗೂ ಸಹ ನಮ್ಮ ಪೂರ್ವಜರು ಪೂಜ್ಯ ಸ್ಥಾನ ನೀಡಿದ್ದಾರೆ, ಮಕ್ಕಳು ಸಣ್ಣ ವಯಸ್ಸಿನಲ್ಲೇ ಪರಿಸರ ಸಂರಕ್ಷಣೆ ಬಗ್ಗೆ ಕಾಳಜಿ ಬೆಳೆಸಿಕೊಳ್ಳಲು ಮುಂದಾಗಬೇಕು ಎಂದರು.

ಕಾಂಗ್ರೆಸ್ ಮುಖಂಡ ಎನ್.ಎಂ. ನವೀನ್ ಕುಮಾರ್ ಮಾತನಾಡಿ, ಕೋವಿಡ್ ನಂತಹ ಕಷ್ಟಕಾಲದಲ್ಲೂ ಮನೆಗಳಿಗೆ ಹಾವು ಬಂದಾಗ ಸ್ನೇಕ್ ಶ್ಯಾಮ್ ಅವರು ಹಾವನ್ನ ಸಂರಕ್ಷಿಸಿದ್ದಾರೆ, ಅಂತಾರಾಷ್ಟ್ರೀಯ ಉರಗತಜ್ಞ ಸ್ನೇಕ್ ಶ್ಯಾಮ್ ರವರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ, ಅಷ್ಟೇ ಅಲ್ಲದೇ 85 ಸಾವಿರಕ್ಕೂ ಹೆಚ್ಚು ಹಾವನ್ನ ಸಂರಕ್ಷಿಸಿದ್ದಾರೆ. ಪರಿಸರ ಸಂರಕ್ಷಣೆ ಜೊತೆಯಲ್ಲೆ ಧಾರ್ಮಿಕ ಕೇಂದ್ರವನ್ನ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.

ಈ ಸಂದರ್ಭದಲ್ಲಿ 90000 ಸಾವಿರಕ್ಕೂ ಹೆಚ್ಚು ಹಾವುಗಳನ್ನು ಸಂರಕ್ಷಿಸಿದ ಉರಗ ರಕ್ಷಕ ಸ್ನೇಕ್ ಶ್ಯಾಮ್ ಅವರನ್ನು ಅಭಿನಂದಿಸಲಾಯಿತು.

ಇದೆ ಸಂದರ್ಭದಲ್ಲಿ ಮೈಸೂರು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ಸಿ.ನಾರಾಯಣಗೌಡ, ಜೀವಧಾರ ರಕ್ತ ನಿಧಿ ಕೇಂದ್ರದ ನಿರ್ದೇಶಕ ಗಿರೀಶ್, ಶಾಲೆಯ ಮುಖ್ಯೋಪಾಧ್ಯಾಯರಾದ ಸುಗುಣಾವತಿ, ಕೆಎಂಪಿಕೆ ಟ್ರಸ್ಟ್ ಅಧ್ಯಕ್ಷ ವಿಕ್ರಂ ಅಯ್ಯಂಗಾರ್, ಜಿ.ರಾಘವೇಂದ್ರ, ಎಸ್.ಎನ್. ರಾಜೇಶ್, ಶ್ರೀನಿವಾಸ್, ಪ್ರವೀಣ್ ಕುಮಾರ್ ಇನ್ನಿತರರು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಐಪಿಎಲ್‌ ಶುರು : ಅಧಿಕಾರಿಗಳ ಜತೆ ಸಿಎಸ್‌ ಸುದೀರ್ಘ ಸಭೆ

ಬೆಂಗಳೂರು : ನಾಳೆಯಿಂದ ಐಪಿಎಲ್ ಪಂದ್ಯಾವಳಿಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಂಬಂಧಪಟ್ಟ…

2 hours ago

ಮದ್ದೂರು ಬಳಿ ಭೀಕರ ಅಪಘಾತ : 14 ಶಾಲಾ ಮಕ್ಕಳು ಸೇರಿದಂತೆ 20 ಮಂದಿಗೆ ಗಾಯ

ಮದ್ದೂರು : ಖಾಸಗಿ ಶಾಲೆ ಬಸ್ ಮತ್ತು ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿ, 14 ವಿದ್ಯಾರ್ಥಿಗಳ ಜತೆಗೆ 6…

2 hours ago

ಮಹದೇಶ್ವರ ಬೆಟ್ಟ | 23 ದಿನದಲ್ಲಿ 2 ಕೋಟಿ ಒಡೆಯನಾದ ಮಾದಪ್ಪ

ಹನೂರು : ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ನಡೆದ ಹುಂಡಿ ಹಣ ಎಣಿಕೆಯಲ್ಲಿ ಈ ಬಾರಿ…

2 hours ago

ಜನಪರ ಆಡಳಿತ ನೀಡುವಲ್ಲಿ ಸರ್ಕಾರ ವಿಫಲ : ನಿಖಿಲ್‌ ಕಿಡಿ

ಎಚ್.ಡಿ.ಕೋಟೆ : ರಾಜ್ಯದಲ್ಲಿ ಜಾತ್ಯತೀತ ಜನತಾದಳ-ಬಿಜೆಪಿಯ ಮೈತ್ರಿಯ ಸರ್ಕಾರ ಅಧಿಕಾರಕ್ಕೆ ಬಂದು ಜನಪರ ಆಡಳಿತ ನೀಡುವ ದಿನಗಳು ಹತ್ತಿರವಾಗುತ್ತಿವೆ ಎಂದು…

3 hours ago

ದಾವಣಗೆರೆ ದಕ್ಷಿಣ ಉಪಚುನಾವಣೆ : ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್‌

ಬೆಂಗಳೂರು : ದಾವಣಗೆರೆ ಉಪಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಸಾದಿಕ್ ಪೈಲ್ವಾನ್ ತಾವು ಕಣದಿಂದ ಹಿಂದೆ ಸರಿದಿರುವುದಾಗಿ ಘೋಷಿಸಿದ್ದಾರೆ.…

3 hours ago

SSLC | ಪರೀಕ್ಷೆ ಅಂಕ 625ರ ಬದಲಿಗೆ 525ಕ್ಕೆ ಇಳಿಕೆ ; ಲೆಕ್ಕಕ್ಕಿಲ್ಲ ತೃತೀಯ ಭಾಷೆ

ಬೆಂಗಳೂರು : ಕರ್ನಾಟಕದ ಶೈಕ್ಷಣಿಕ ಇತಿಹಾಸದಲ್ಲಿ ರಾಜ್ಯ ಸರ್ಕಾರವು ಅತ್ಯಂತ ಮಹತ್ವದ ತೀರ್ಮಾನವೊಂದನ್ನು ಕೈಗೊಂಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪದ್ಧತಿಯಲ್ಲಿ ಆಮೂಲಾಗ್ರ…

3 hours ago