Mysore
21
overcast clouds
Light
Dark

ಹೊಟ್ಟೆ ತುಂಬಾ ಊಟ ಕೊಡುವಂತೆ ವಿದ್ಯಾರ್ಥಿನಿಯರ ಅಳಲು

ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ಪಟ್ಟಣದಲ್ಲಿರುವ ಕಸ್ತೂರಿ ಬಾ ಗಾಂಧಿ ಬಾಲಕಿಯರ ವಸತಿ ನಿಲಯದಲ್ಲಿ ಸರಿಯಾಗಿ ಊಟ ಕೊಡುವಂತೆ ವಿದ್ಯಾರ್ಥಿನಿಯರು ಒತ್ತಾಯಿಸಿದ್ದಾರೆ.

ಕಳೆದ 15 ದಿನಗಳಿಂದ ಇಲ್ಲಿ ಸರಿಯಾಗಿ ಊಟ ನೀಡುತ್ತಿಲ್ಲ. ಇಲ್ಲಿ ಆಹಾರ ಪದಾರ್ಥಗಳು ಇಲ್ಲದಿರುವುದೇ ಈ ಸಮಸ್ಯೆಗೆ ಪ್ರಮುಖ ಕಾರಣವಾಗಿದೆ. ಇದರ ಜೊತೆಗೆ ಕಾಫಿ, ಟೀ ಕೂಡ ಸರಿಯಾಗಿ ಸಿಗುತ್ತಿಲ್ಲ. 65 ವಿದ್ಯಾರ್ಥಿನಿಯರಿಗೆ ಕೇವಲ 1 ಲೀಟರ್‌ ಹಾಲನ್ನು ನೀಡಲಾಗುತ್ತಿದೆ. ಇಷ್ಟೆಲ್ಲಾ ವಿದ್ಯಾರ್ಥಿನಿಯರಿದ್ದರೂ ಊಟಕ್ಕೆ ಕೇವಲ 5.5 ಕೆಜಿ ಸೊಸೈಟಿ ಅಕ್ಕಿ ಕೊಡಲಾಗುತ್ತಿದೆ ಎಂದು ವಿದ್ಯಾರ್ಥಿಗಳು ಅಳಲು ತೋಡಿಕೊಂಡಿದ್ದಾರೆ.

ಮೇಲ್ವಿಚಾರಕಿ ಕೂಡ ಅಸಹಾಯಕತೆ ವ್ಯಕ್ತಪಡಿಸಿದ್ದು, ಗುತ್ತಿಗೆದಾರರು ಕೊಡುವ ಆಹಾರ ಪದಾರ್ಥಗಳಿಂದ ಮಾತ್ರ ನಾನು ವಿದ್ಯಾರ್ಥಿನಿಯರಿಗೆ ಆಹಾರ ತಯಾರಿಸಿ ಕೊಡಬೇಕು. ಗುತ್ತಿಗೆದಾರರು ಎಲ್ಲಾ ಪದಾರ್ಥಗಳನ್ನು ಸ್ವಲ್ಪ ಸ್ವಲ್ಪ ಕೊಟ್ಟು ಹೋಗುತ್ತಾರೆ. ಅದರಲ್ಲಿ ಎಲ್ಲಾ ವಿದ್ಯಾರ್ಥಿನಿಯರಿಗೆ ಅಡುಗೆ ತಯಾರಿಸಲು ಆಗಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಎಚ್ಚೆತ್ತುಕೊಂಡು ವಿದ್ಯಾರ್ಥಿನಿಯರಿಗೆ ಸರಿಯಾದ ಊಟದ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದರೆ ಈ ವಸತಿ ಶಾಲೆಗೆ ಮುಂದಿನ ದಿನಗಳಲ್ಲಿ ಯಾವೊಬ್ಬ ವಿದ್ಯಾರ್ಥಿನಿಯೂ ಕೂಡ ದಾಖಲಾಗುವುದಿಲ್ಲ ಎಂದು ಹೇಳಲಾಗುತ್ತಿದೆ.