ಮೈಸೂರು: ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರೆದಿದ್ದರೂ ಜನರ ಜ್ಞಾನದಾಹ ಪೂರೈಸುವಲ್ಲಿ ಪುಸ್ತಕಕ್ಕಿಂತ ಅಗತ್ಯವಾದ ವಸ್ತು ಬೇರೊಂದಿಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ತಿಳಿಸಿದರು.
ಕನ್ನಡ ಸಾಹಿತ್ಯ ಕಲಾಕೂಟ, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಪತ್ರಕರ್ತರ ಭವನದಲ್ಲಿ ಆಯೋಜಿಸಲಾಗಿದ್ದ ವಿಶ್ವ ಪುಸ್ತಕ ದಿನಾಚರಣೆಯಲ್ಲಿ ವಿವಿಧ ಶಾಲೆಗಳಿಗೆ ಪುಸ್ತಕಗಳ ವಿತರಣೆ ಹಾಗೂ ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ದಾಖಲೆಗಳನ್ನು ಶಾಶ್ವತವಾಗಿಡಲು ಕೇವಲ ಪುಸ್ತಕದಿಂದ ಮಾತ್ರ ಸಾಧ್ಯ. ಪುಸ್ತಕ ಓದುವ ಸಂಸ್ಕೃತಿಯನ್ನು ಯುವ ಜನತೆ ಬೆಳೆಸಿಕೊಳ್ಳಬೇಕು ಎಂದರು.
ಕುವೆಂಪು ಭಾಷಾ ಭಾರತಿ ಮಾಜಿ ಅಧ್ಯಕ್ಷ ಡಾ.ಪ್ರಧಾನ ಗುರುದತ್ ಮಾತನಾಡಿ, ಪುಸ್ತಕವನ್ನು ಬಹಳ ಹಿಂದಿನ ಕಾಲದಿಂದಲೂ ಸರಸ್ವತಿ ಎಂದು ಪೂಜಿಸಲಾಗುತ್ತದೆ. ಆಧುನಿಕ ಯುಗದಲ್ಲಿ ಜ್ಞಾನಾರ್ಜನೆಗೆ ಪುಸ್ತಕಗಳು ವಿಶ್ವಾಸಾರ್ಹವಾಗಿದೆ. ವೈದ್ಯ ಸಾಹಿತ್ಯದಂತೆ ಹಲವು ಸಾಹಿತ್ಯಗಳ ಸಂಸ್ಕೃತಿಯನ್ನು ತಿಳಿಯಲು ಪುಸ್ತಕದ ಓದುವಿಕೆ ಅಗತ್ಯವಾಗಿದೆ ಎಂದು ತಿಳಿಸಿದರು.
ಈ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಮಾನಸ ಮಾತನಾಡಿ, ಪುಸ್ತಕವನ್ನು ಓದುವ ಸಂಸ್ಕೃತಿಯೂ ಎಂದಿಗೂ ಅಳಿಯುವುದಿಲ್ಲ . ಪ್ರತಿ ಮನೆಗಳಲ್ಲೂ ಒಂದಾದರೂ ಪುಸ್ತಕಗಳಿರಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ಸಂದರ್ಭದಲ್ಲಿ ವಿವಿಧ ಶಾಲೆಗಳಿಗೆ ಡಾ. ಎಂ.ಜಿ.ಆರ್. ಅರಸ್ ಅವರು ಪುಸ್ತಕಗಳನ್ನು ವಿತರಿಸಿದರು.
ಪತ್ರಕರ್ತ ಎಸ್.ಟಿ.ರವಿಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು. ಕನ್ನಡ ಸಾಹಿತ್ಯ ಕಲಾಕೂಟ ಅಧ್ಯಕ್ಷ ಎಂ.ಚಂದ್ರಶೇಖರ್, ಪ್ರಮತಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಚ್.ವಿ. ರಾಜೀವ್, ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ಅಧ್ಯಕ್ಷರಾದ ಡಾ.ರತ್ನ ಹಾಲಪ್ಪಗೌಡ ಹಾಗೂ ಕಸಾಪ ಜಿಲ್ಲಾ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಬೆಳಗಾವಿ: ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ…
ಮೈಸೂರು: ಮೈಸೂರು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಎಸ್.ಎನ್.ಹೆಗ್ಡೆ ಅವರು ಇಂದು ಮೈಸೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಪ್ರೊ.ಎಸ್.ಎನ್.ಹೆಗ್ಡೆ…
ಮೈಸೂರು: ಎರಡು ದಿನಗಳ ಹಿಂದೆ ಮೈಸೂರಿನ ಅಶೋಕ ಪುರಂ ರೈಲ್ವೆ ವರ್ಕ್ ಶಾಪ್ ಬಳಿ ಇರುವ ಮರದ ಕೊಂಬೆ ಮೇಲೊಂದು…
ಶಿವಮೊಗ್ಗ: ಜಿಲ್ಲೆಯಲ್ಲಿ ಮತ್ತೆ ಮಂಗನ ಕಾಯಿಲೆ ಕಾಣಿಸಿಕೊಂಡಿದ್ದು, ಮಲೆನಾಡು ಭಾಗದ ಕಾಡಂಚಿನ ಗ್ರಾಮಗಳಲ್ಲಿ ಆತಂಕ ಶುರುವಾಗಿದೆ. ಪಾಸಿಟಿವ್ ಕೇಸ್‌ಗಳು ಮತ್ತಷ್ಟು…
ಬೆಳಗಾವಿ: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಕೆಲ ತಿಂಗಳಿಂದ ಹಣ ಜಮೆಯಾಗಿದಿರುವುದು ರಾಜ್ಯಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದನ್ನು ಓದಿ: ಗೃಹ…
ಕೊಡಗು: ಸೋಮವಾರಪೇಟೆ ವಿದ್ಯುತ್ ವಿತರಣಾ ಉಪ ಕೇಂದ್ರದಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಫೀಡರ್ ನಿರ್ವಹಣೆ ಕಾಮಗಾರಿ…