ಮೈಸೂರು : ಖಾಸಗಿ ಕಂಪನಿಯ ಮಹಿಳಾ ಉದ್ಯೋಗಿ ಬಗ್ಗೆ ಅಸಭ್ಯ ಹಾಗೂ ಅಶ್ಲೀಲವಾಗಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ ಆರೋಪದ ಮೇಲೆ ಮಹಿಳೆಯೊಬ್ಬರ ಮೇಲೆ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕ್ರಾಪಿನ್ ಕಂಪನಿಗೆ ಸೇರಿದ ಸಾಮಾಜಿಕ ಜಾಲತಾಣದಲ್ಲಿ ಮೃಣಾಲಿನಿ ಮನೋಹರ್ ಎಂಬುವರು ತಮ್ಮ ಬಗ್ಗೆ ಅಶ್ಲೀಲವಾಗಿ ಪೋಸ್ಟ್ ಮಾಡಿದ್ದಾರೆಂದು ನೊಂದ ಉದ್ಯೋಗಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ವ್ಯಕ್ತಿಯೊಬ್ಬರ ಜೊತೆ ಸಂಭಂಧ ಇದೆ ಎಂದು ಸುಳ್ಳು ಮಾಹಿತಿ ಹಾಕಿದ್ದಾರೆ. ಫೇಸ್ ಬುಕ್ ಮೆಸೆಂಜರ್ ನಲ್ಲಿ ಕ್ಕೈಂಟ್ಸ್ ಗಳನ್ನ ಗುರಿಯಾಗಿಸಿಕೊಂಡು ನನ್ನ ವಿರುದ್ದ ಅಶ್ಲೀಲವಾಗಿ ಕೆಟ್ಟಪದಗಳನ್ನ ಬಳಸಿ ತೇಜೋವಧೆ ಮಾಡಿದ್ದಾರೆಂದು ಆರೋಪಿಸಿದ್ದಾರೆ. ನನ್ನ ಬಗ್ಗೆ ಪ್ರಾಸ್ಟಿಟ್ಯೂಟ್ ಎಂದು ಉಲ್ಲೇಖಿಸಿರುವುದಾಗಿ ದೂರಿದ್ದಾರೆ.
ನನ್ನ ಅಜ್ಜಿಯ ಬಗ್ಗೆಯೂ ತಪ್ಪಾಗಿ ಮಾಹಿತಿ ನೀಡಿದ್ದಾರೆ. ಇದೇ ಸಂಧರ್ಭದಲ್ಲಿ ತಾಯಿ ಮೃತಪಟ್ಟಿದ್ದಾರೆಂದು ಆರೋಪಿಸಿದ್ದಾರೆ. ನನ್ನ ಬಗ್ಗೆ ಕೆಟ್ಟದಾಗಿ ಅಸಭ್ಯವಾಗಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ ಮೃಣಾಲಿನಿ ಮನೋಹರ್ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ನೊಂದ ಮಹಿಳಾ ಉದ್ಯೋಗಿ ದೂರು ದಾಖಲಿಸಿದ್ದಾರೆ.