ಮೈಸೂರು : ಪ್ರಸ್ತುತ ಸಂದರ್ಭದಲ್ಲಿ ಸಂವಿಧಾನದಲ್ಲಿ ಸಾಂದರ್ಭಿಕ ಬದಲಾವಣೆ ಆಗಬೇಕು ಎಂದು ಆಮ್ ಆದ್ಮಿ ಪಾರ್ಟಿಯ ನಾಯಕರೂ ಆದ ನಟ ಮುಖ್ಯಮಂತ್ರಿ ಚಂದ್ರು ಹೇಳಿದರು.
ನಗರದ ಯುವರಾಜ ಕಾಲೇಜಿನ ಅಮೃತ ಮಹೋತ್ಸವ ಸಭಾಂಗಣದಲ್ಲಿ ಶುಕ್ರವಾರ ನಡೆದ ʼಭವಿಷ್ಯದಲ್ಲಿ ಪ್ರಜಾಪ್ರಭುತ್ವದ ರಕ್ಷಣೆ ಜವಾಬ್ದಾರಿ ಯುವಶಕ್ತಿಯ ಕೈಯಲ್ಲಿ’ ಮುಕ್ತ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಬಸವರಾಜು ಬೊಮ್ಮಾಯಿ, ಶಾಮನೂರು ಶಿವಶಂಕರಪ್ಪ, ಮೈಸೂರಿನ ಮಹಾರಾಜರಿಗೆ ಮೀಸಲಾತಿ ಯಾಕೇ ಬೇಕು. ದಿನಗೂಲಿಯಲ್ಲಿ ಬದುಕುತ್ತಿರುವರಿಗೆ ಮೀಸಲಾತಿ ಬೇಕಿದೆ. ಜಾತಿಯ ಆಧಾರದಲ್ಲಿ ಮೀಸಲಾತಿ ಕೊಡುವುದಾದರೆ ಅಯಾ ಸಮುದಾಯದಲ್ಲಿ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದವರಿಗೆ ಮೀಸಲಾತಿ ಕಲ್ಪಿಸಬೇಕು. ಮೀಸಲಾತಿ ಅನುಕೂಲ ಪಡೆದು ಉನ್ನತ ಮಟ್ಟಕ್ಕೆ ಏರಿದವರು, ಲಕ್ಷಾಂತರ ರೂಪಾಯಿ ಸಂಬಳ ತೆಗೆದುಕೊಳ್ಳುವವರಿಗೆ ಮೀಸಲಾತಿ ಕೊಡುವುದಾದರೆ ಬೇರೆಯವರ ಗತಿ ಏನಾಗಬೇಕು ಎಂದು ಪ್ರಶ್ನಿಸಿದರು.
ಜೊತೆಗೆ, ೧೦ ವರ್ಷ ಜೈಲು ಶಿಕ್ಷೆ ಅನುಭವಿಸಿದವ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ. ಶಿಕ್ಷಣ ಇಲ್ಲದವರು ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲ್ಲುತ್ತಿದ್ದಾರೆ. ಸಂವಿಧಾನ ಈ ಮಟ್ಟಕ್ಕೆ ಬಂದು ತಲುಪಿದೆ. ಹೀಗಾಗಿ ಸಾಂದರ್ಭಿಕವಾಗಿ ಸಂವಿಧಾನದಲ್ಲಿ ಬದಲಾವಣೆ ತರಬೇಕಿದೆ. ಆಗಿರುವ ಅನಾಹುತಗಳನ್ನು ಸರಿಪಡಿಸಬೇಕಿದೆ ಎಂದು ಹೇಳಿದರು.
ಇದನ್ನು ಓದಿ: ಟ್ರಂಪ್ ಕಸರತ್ತು ವ್ಯರ್ಥ ; ಮರಿಯಾ ಕೊರಿನಾ ಮಚಾದೊಗೆ ಒಲಿದ ನೊಬೆಲ್ ಶಾಂತಿ ಪ್ರಶಸ್ತಿ..
ಹನ್ನೇರಡನೇ ಶತಮಾನದಲ್ಲಿ ಬಸವಣ್ಣನವರ ಅನುಭವ ಮಂಟಪವೇ ಇಂದಿನ ಸಂಸತ್ತು ಎಂದು ಹೇಳುತ್ತೇವೆ. ಆದರೆ ಬಸವಣ್ಣನವರು ಹೇಳಿದ್ದ ಕಲಬೇಡ, ಕೊಲಬೇಡ,. ಹುಸಿಯ ನುಡಿಯಲು ಬೇಡ.. ಈ ವಚನದ ಎಲ್ಲಾ ಸಾಲುಗಳನ್ನು ಅನುಸರಿಸಿದ್ದರೆ ಯಾವುದೇ ಸಮಸ್ಯೆ ಎದುರಾಗುತ್ತಿರಲಿಲ್ಲ. ಈಗ ಪ್ರಜಾಪ್ರಭುತ್ವದ ಹೆಸರಿನಲ್ಲಿ ಸರ್ವಾಧಿಕಾರಿ ನಡೆಯುತ್ತಿದೆ. ಇಡಿ, ಸಿಬಿಐ, ಚುನಾವಣಾ ಆಯೋಗದ ದುರುಪಯೋಗ ನಡೆಯುತ್ತಿದೆ. ಎಲ್ಲಾ ಪಕ್ಷಗಳಲ್ಲೂ ಕುಟುಂಬ ರಾಜಕಾರಣ ನಡೆಯುತ್ತಿದೆ ಎಂದು ಅವರು ವಿಷಾದಿಸಿದರು.
ಪ್ರಜಾಪ್ರಭುತ್ವ ಉಳಿಯಬೇಕಾದರೆ ಚುನಾವಣೆಗಳಲ್ಲಿ ಯೋಗ್ಯರನ್ನು ಆಯ್ಕೆ ಮಾಡಬೇಕು. ಸ್ಥಳೀಯ ಸಂಸ್ಥೆಗಳಿಂದ ಹಿಡಿದು ವಿಧಾನಸಭೆ, ಲೋಕಸಭೆವರೆಗೆ ಯೋಗ್ಯರೇ ಆಯ್ಕೆಯಾಗಬೇಕು. ಯಾವುದೇ ರಾಜಕೀಯ ಪಕ್ಷದವರು ಯೋಗ್ಯರಿಗೆ ಟಿಕೆಟ್ ನೀಡಲಿಲ್ಲ ಎಂದರೇ ಸ್ಥಳೀಯರೇ ಉತ್ತಮ ಅಭ್ಯರ್ಥಿಯನ್ನು ನಿಲ್ಲಿಸಿ, ಗೆಲ್ಲಿಸಬೇಕು. ಮತದಾನ ಕಡ್ಡಾಯ ಮಾಡಬೇಕು. ಆತ್ಮಸಾಕ್ಷಿಗೆ ಅನುಗುಣವಾಗಿ ಮತ ಚಲಾಯಿಸಬೇಕು ಎಂದು ಅವರು ಸಲಹೆ ಮಾಡಿದರು.
ಜಾತಿ ವಿರೋಧಿಸಬಾರದು: ಜಾತಿ ಗಣತಿಗೆ ವಿರೋಧ ಸರಿಯಲ್ಲ. ದೇಶದಲ್ಲಿ ಸಾವಿರಾರು ಜಾತಿಗಳಿವೆ. ಹೀಗಿರುವಾಗ ಸಮಾನತೆ ತರಬೇಕಾದರೆ ಯಾವ್ಯಾವ ಜಾತಿಯವರು ಎಷ್ಟೆಷ್ಟು ಇದ್ದಾರೆ ಎಂಬುದನ್ನು ಪತ್ತೆ ಮಾಡಿ, ಅದರ ಪ್ರಕಾರ ಸೌಲಭ್ಯ ಕಲ್ಪಿಸಬೇಕಾಗಿದೆ. ಇಂದಿಗೂ ಹಲವು ಸಮುದಾಯಗಳಲ್ಲಿ ಒಬ್ಬ ಒಬ್ಬೇ ಶಾಸಕ, ಸಂಸದನಾಗಿಲ್ಲ. ಗ್ರಾಮಪಂಚಾಯಿತಿ ಸದಸ್ಯನೂ ಆಗಿಲ್ಲ. ಸರ್ಕಾರದ ಸೌಲಭ್ಯಗಳು ತಲುಪುತ್ತಿಲ್ಲ. ಇವರಿಗೆ ಸರ್ಕಾರ ಹೀಗಾಗಿ ಜಾತಿ ಗಣತಿಯನ್ನು ವಿರೋಧಿಸುವುದು ಸರಿಯಲ್ಲ ಎಂದು ಅವರು ಹೇಳಿದರು.
ವಕೀಲರು ಹಾಗೂ ನೋಟರಿ ಎಂ.ಎನ್. ಸುಮನಾ ಮಾತನಾಡಿ, ಪ್ರತಿಯೊಬ್ಬರಿಗೂ ಮಹಾತ್ಮಗಾಂಧೀಜಿ ಅವರ ಅಹಿಂಸೆ, ಡಾ.ಬಿ.ಆರ್. ಅಂಬೇಡ್ಕರ್ ಅವರ ಸಮಾನತೆ, ಬಸವಣ್ಣನವರ ಮಾನವ ಧರ್ಮ ಮುಖ್ಯವಾಗಬೇಕು ಎಂದರು.
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…
ನವದೆಹಲಿ: ನಾಗರಿಕ ವಿಮಾನಯಾನ ಸಚಿವಾಲಯವು ಇಂಡಿಗೋದ ಬಾಕಿ ಇರುವ ಎಲ್ಲಾ ಪ್ರಯಾಣಿಕರ ಮರುಪಾವತಿಗಳನ್ನು ವಿಳಂಬವಿಲ್ಲದೇ ಪಾವತಿಸಲು ಆದೇಶಿಸಿದೆ. ರದ್ದಾದ ಅಥವಾ…
ತುಮಕೂರು: ರಾಜ್ಯದಲ್ಲಿ ಸಿಎಂ ಸ್ಥಾನ ಬದಲಾವಣೆ ಚರ್ಚೆ ಬೆನ್ನಲ್ಲೇ ಮಾಜಿ ಸಚಿವ ಕೆ.ಎನ್.ರಾಜಣ್ಣ ಮಹತ್ವದ ಹೇಳಿಕೆ ಕೊಟ್ಟಿದ್ದಾರೆ. ಈ ಕುರಿತು…
ಹಾಸನ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ದೆಹಲಿ ಪೊಲೀಸರು ನೋಟಿಸ್ ಕೊಟ್ಟ ವಿಚಾರಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು…
ಹಾಸನ: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದೊಳಗೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಜಾರಿಗೊಳಿಸಿದ್ದು, ಕರ್ನಾಟಕದ ಇತಿಹಾಸದಲ್ಲಿಯೇ ಕಾಂಗ್ರೆಸ್…
ನಂಜನಗೂಡು: ಜಮೀನಿನಲ್ಲಿ ಭಾರೀ ಗಾತ್ರದ ಹೆಬ್ಬಾವು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗಳು ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ. ಜಿಲ್ಲೆಯ ನಂಜನಗೂಡು…