ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ.
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ ಮಹೋತ್ಸವಕ್ಕೆ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಚಾಲನೆ ನೀಡಿದರು.
ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಇಂದು ಬೆಳಿಗ್ಗೆ 11:50ರಿಂದ 12:13ರವರೆಗಿನ ಶುಭ ಧನುರ್ ಲಗ್ನದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ದಸರಾ ಮಹೋತ್ಸವಕ್ಕೆ ವಿಧ್ಯುಕ್ತ ಚಾಲನೆ ನೀಡಲಾಯಿತು.
ಇದಕ್ಕೂ ಮುನ್ನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ತಮ್ಮ ಪತ್ನಿ ಉಷಾ ಅವರೊಂದಿಗೆ ಚಾಮುಂಡಿ ಬೆಟ್ಟಕ್ಕೆ ಆಗಮಿಸಿದರು. ಈ ವೇಳೆ ಮುಖ್ಯಮಂತ್ರಿಗಳಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಾಂಪ್ರದಾಯಿಕ ನಂದಿಧ್ವಜ ಕಂಬಕ್ಕೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಜಾನಪದ ಕಲಾತಂಡಗಳ ವಾದ್ಯಮೇಳಗಳೊಂದಿಗೆ ಮೆರವಣಿಗೆಯಲ್ಲಿ ಚಾಮುಂಡೇಶ್ವರಿ ದೇವಸ್ಥಾನದತ್ತ ಸಾಗಿದರು.
ದೇವಾಲಯದ ಮುಂಭಾಗದಲ್ಲಿ ಮುಖ್ಯಮಂತ್ರಿ ನಾಲ್ಕು ಈಡುಗಾಯಿಗಳನ್ನು ಒಡೆದು ಭಕ್ತಿ ಸಮರ್ಪಿಸಿದರು.
ಈ ಮೂಲಕ ನಾಡಿನ ಸಾಂಸ್ಕೃತಿಕ ವೈಭವದ ಪ್ರತೀಕವಾಗಿರುವ ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತವಾಗಿ ಚಾಲನೆ ದೊರೆತಿದೆ.
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…
ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…