ಮೈಸೂರು

ಮೈಸೂರಿನಲ್ಲಿ ನಾಳೆ ಅಧಿಕೃತ ಭಾಷಾ ಸಮ್ಮೇಳನ

ಮೈಸೂರು: ಅಧಿಕೃತ ಭಾಷೆ ಹಿಂದಿಯ ಪ್ರಾದೇಶಿಕ ಸಮ್ಮೇಳನ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜನವರಿ 4 ರಂದು ಬೆಳಿಗ್ಗೆ 10.15ಕ್ಕೆ ಕೆಎಸ್‌ಒಯು ಘಟಿಕೋತ್ಸವ ಭವನದಲ್ಲಿ ನಡೆಯಲಿದೆ ಎಂದು ಕೇಂದ್ರ ಗೃಹ ಸಚಿವಾಲಯದ ಅಧಿಕೃತ ಭಾಷಾ ವಿಭಾಗದ ಜಂಟಿ ನಿರ್ದೇಶಕ ರಾಜೇಶ್ ಕುಮಾರ್ ಶ್ರೀವಾಸ್ತವ್ ತಿಳಿಸಿದರು.

ಇಂದು ನಗರದ ಭಾರತೀಯ ಭಾಷಾ ಸಂಸ್ಥಾನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾರಂಭವನ್ನು ಬಿಹಾರದ ನೂತನ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಉದ್ಘಾಟಿಸುವರು. ಗೃಹ ಖಾತೆ ರಾಜ್ಯ ಸಚಿವ ನಿತ್ಯಾನಂದ ರೈ ಅಧ್ಯಕ್ಷತೆ ವಹಿಸಲಿದ್ದು, ಮೈಸೂರು-ಕೊಡಗು ಲೋಕಾಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್‌ ಸೇರಿದಂತೆ ಇನ್ನಿತರರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಸರ್ಕಾರಿ ಕೆಲಸಗಳಲ್ಲಿ ಹಿಂದಿಯ ಪ್ರಗತಿಪರ ಬಳಕೆಯನ್ನು ಉತ್ತೇಜಿಸಲು ಅಧಿಕೃತ ಭಾಷಾ ಇಲಾಖೆಯು ನಿರಂತರ ಪ್ರಯತ್ನಗಳನ್ನು ಮಾಡುತ್ತದೆ ಮತ್ತು ಈ ಅನುಕ್ರಮದಲ್ಲಿ ಪ್ರತಿ ಆರ್ಥಿಕ ವರ್ಷದಲ್ಲಿ ನಾಲ್ಕು ಪ್ರಾದೇಶಿಕ ಅಧಿಕೃತ ಭಾಷಾ ಸಮ್ಮೇಳನಗಳನ್ನು ಆಯೋಜಿಸಲಾಗುತ್ತದೆ. ಇದು 2024-25 ನೇ ಸಾಲಿನ ಮೊದಲ ಕಾರ್ಯಕ್ರಮವಾಗಿದೆ. ದಕ್ಷಿಣ ಮತ್ತು ನೈಋತ್ಯ ಪ್ರದೇಶಗಳಲ್ಲಿ ನೆಲೆಗೊಂಡಿರುವ ವಿವಿಧ ಬ್ಯಾಂಕ್‌ಗಳು/ಉದ್ಯಮಗಳು/ಕಚೇರಿಗಳು ಅಧಿಕೃತ ಭಾಷೆಯ ಅನುಷ್ಠಾನಕ್ಕಾಗಿ ಮಾಡಿದ ಅತ್ಯುತ್ತಮ ಕೆಲಸಗಳಿಗಾಗಿ ವೇದಿಕೆಯಲ್ಲಿರುವ ಗಣ್ಯರಿಂದ ಪ್ರಶಸ್ತಿಯನ್ನು ನೀಡಲಾಗುವುದು.

ಮಾಹಿತಿ ನಿರ್ವಹಣಾ ವ್ಯವಸ್ಥೆಯ ಮೂಲಕ ಪಡೆದ ತ್ರೈಮಾಸಿಕ ಪ್ರಗತಿ ವರದಿಗಳ ಆಧಾರದ ಮೇಲೆ ಈ ಪ್ರಶಸ್ತಿಗಳನ್ನು ಆಯ್ಕೆ ಮಾಡಲಾಗುತ್ತದೆ. ನಾಳೆ ಪ್ರಶಸ್ತಿ ವಿಜೇತರಿಗೆ ದಕ್ಷಿಣ ಮತ್ತು ನೈಋತ್ಯ ಪ್ರದೇಶಗಳಲ್ಲಿ ಅಧಿಕೃತ ಭಾಷಾ ಕ್ಷೇತ್ರದಲ್ಲಿ ಅವರ ಅತ್ಯುತ್ತಮ ಕೆಲಸಕ್ಕಾಗಿ ಪ್ರಮಾಣಪತ್ರಗಳನ್ನು ನೀಡಿ ಗೌರವಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

2 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

2 hours ago

ಓದುಗರ ಪತ್ರ: ಕಾವೇರಿ: ರಾಜ್ಯಕ್ಕೆ ನ್ಯಾಯ ಸಿಗುವಂತೆ ನೋಡಿಕೊಳ್ಳಬೇಕು

ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟ ಕಾರಣ, ರಾಜ್ಯದಲ್ಲಿ ತೀವ್ರ ಸ್ವರೂಪದ ಬರ ಕಾಣಿಸಿಕೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಸುಮಾರು ೧೭೦…

2 hours ago

ಓದುಗರ ಪತ್ರ: ವಿಷಗಳಿಗೆ ಬರದಂತೆ ತಡೆಯೋಣ

ತಮ್ಮ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದ ಮಹಾತ್ಮಗಾಂಧಿಯವರನ್ನುಬ್ರಿಟಿಷರು ಬಂಧಿಸಲಿಲ್ಲ . ಏಕೆಂದರೆ ಗಾಂಧಿಜಿ ಯವರು ನ್ಯಾಯಯುತವಾಗಿ ಅಹಿಂಸಾ ತ್ಮಕವಾಗಿ ಸ್ವಾತಂತ್ರ್ಯ ಕೇಳುತ್ತಿದ್ದರು,…

2 hours ago

ಅಂಬಾರಿ ಹೊರುವ ಗಜರಾಜನ ಮೇಲೆ ದಯೆ ಇರಲಿ

ವಸಂತಕುಮಾರ್ ಮೈಸೂರಮಠ್, ಪರಿಸರವಾದಿ ಮತ್ತು ಸಾಮಾಜಿಕ ಕಾರ್ಯಕರ್ತ, ಮೈಸೂರು ಹೊರೆಯನ್ನು ಕಡಿಮೆ ಮಾಡಲು ಪರ್ಯಾಯ ಮಾರ್ಗವಿಲ್ಲವೇ? ಮೈಸೂರಿನ ಮಹಾನ್ ಯದುಕುಲ…

2 hours ago

ಮೀಸಲಾತಿ ಪ್ರಕಟ: ಗರಿಗೆದರಿದ ರಾಜಕೀಯ

ಕೆ.ಬಿ.ರಮೇಶ ನಾಯಕ ಮೈಸೂರು: ಐದು ವರ್ಷಗಳಿಗೂ ಹೆಚ್ಚು ಕಾಲದಿಂದ ಚುನಾಯಿತ ಪ್ರತಿನಿಧಿಗಳಿಲ್ಲದ ಜಿಪಂ, ತಾಪಂ ಸದಸ್ಯ ಸ್ಥಾನಗಳಿಗೆ ಚುನಾವಣೆ ನಡೆಸಲು…

2 hours ago