ಮೈಸೂರು

ಮೀನಾಕ್ಷಿಪುರ ಹಿನ್ನೀರಿನ ದುರಂತದ ಸ್ಥಳ ಪರಿಶೀಲಿಸಿದ ಅಧಿಕಾರಿಗಳು

ಮೈಸೂರು: ಮೂವರು ನರ್ಸಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ದುರಂತದ ಸ್ಥಳವನ್ನು ಅಧಿಕಾರಿಗಳು ಪರಿಶೀಲಿಸಿದರು.

ಗುಂಗ್ರಾಲ್ ಛತ್ರ ಗ್ರಾಮ ಸಮೀಪದ ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶದಲ್ಲಿ ಈಜಲು ನೀರಿಗಿಳಿದಿದ್ದ ಆರು ಮಂದಿ ವಿದ್ಯಾರ್ಥಿಗಳಲ್ಲಿ ಮೂವರು ಮೃತಪಟ್ಟಿದ್ದರು. ಪೊಲೀಸರು, ಅಗ್ನಿಶಾಮಕದಳದ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರ ತೆಗೆದಿದ್ದರು. ಹೀಗಾಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಜಿಲ್ಲಾಽಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಹಣಾದಧಿಕಾರಿ ಎಸ್. ಯುಕೇಶ್ ಕುಮಾರ್ ದುರಂತದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಇಲವಾಲ ಪೊಲೀಸ್‌ಠಾಣೆಯ ಇನ್‌ಸ್ಪೆಕ್ಟರ್ ಅವರು ಅಧಿಕಾರಿಗಳಿಗೆ ಘಟನೆಯ ಬಗ್ಗೆ ಮಾಹಿತಿ ನೀಡಿದರು. ಮೀನಾಕ್ಷಿಪುರದ ಕೆಆರ್‌ಎಸ್ ಹಿನ್ನೀರಿನ ಪ್ರದೇಶಕ್ಕೆ ನಿತ್ಯ ನೂರಾರು ಜನರು ಬರುತ್ತಿದ್ದಾರೆ. ಪೊಲೀಸರು ಇದನ್ನು ತಡೆದರೂ ಕೆಲವರು ಒಳಗೆ ಬರುತ್ತಿದ್ದಾರೆ. ಹಾಗಾಗಿ, ಇದನ್ನು ನಿಷೇಧಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಹೇಳಿದರು. ಈ ಜಾಗದಲ್ಲಿ ಪಾರ್ಟಿ ಮಾಡಲು ಬರುವವರು ಈಜಲು ನೀರಿಗೆ ಧುಮುಕಿ ನೀರಿನ ಸೆಲೆಗೆ ಕೊಚ್ಚಿ ಹೋಗುತ್ತಾರೆ. ಕೆಲವರು ಬೋಟ್‌ಗಳನ್ನು ಇಟ್ಟುಕೊಂಡು ಪ್ರವಾಸಿಗರನ್ನು ಕರೆದೊಯ್ಯುತ್ತಾರೆ ಎಂದು ವಿವರಿಸಿದರು. ಇದನ್ನು ಪರಿಗಣಿಸಿದ ಉಸ್ತುವಾರಿ ಕಾರ್ಯದರ್ಶಿ ಎಸ್.ಸೆಲ್ವಕುಮಾರ್, ಸ್ಥಳದಲ್ಲಿರುವ ಎಲ್ಲಾ ಬೋಟಿಂಗ್‌ಗಳನ್ನು ಸೀಜ್ ಮಾಡಬೇಕು. ಮುಂದಿನ ದಿನಗಳಲ್ಲಿ ಈ ಜಾಗಕ್ಕೆ ಯಾರಿಗೂ ಅವಕಾಶ ಕೊಡಬಾರದು ಎಂದು ಸೂಚನೆ ನೀಡಿದರು. ಕಾನೂನು ಬಾಹಿರವಾಗಿ ಹಿನ್ನೀರಿನ ಪ್ರದೇಶಕ್ಕೆ ಬಂದರೆ ಅಂತಹವರ ಮೇಲೆ ಕ್ರಮ ಜರುಗಿಸಬೇಕು. ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು ಎಂದರು.

ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಕಾಲೇಜು ವಿದ್ಯಾರ್ಥಿಗಳು ಬಿಡುವಿನ ಸಮಯದಲ್ಲಿ ಸಮಯ ಕಳೆಯಲು ಬರುತ್ತಾರೆ. ಆದರೆ, ದುರಂತದ ಸ್ಥಳವನ್ನು ಗಮನಿಸಬೇಕು. ಮೂವರು ಅಮಾಯಕ ವಿದ್ಯಾರ್ಥಿಗಳ ಸಾವಿನ ವಿಚಾರ ಬೇಸರ ತಂದಿದೆ. ಮುಂದಿನ ದಿನಗಳಲ್ಲಿ ಯಾರೇ ಬಂದರೂ ಅವಕಾಶ ಕೊಡಬಾರದು. ಈ ಪ್ರದೇಶವನ್ನು ನಿರ್ಬಂಧಿತ ಪ್ರದೇಶವೆಂದು ಘೋಷಿಸುವ ಬಗ್ಗೆ ಚರ್ಚಿಸಿ ನಿರ್ಧಾರ ಮಾಡಲಾಗುವುದು ಎಂದರು.

ತಹಸಿಲ್ದಾರ್ ಮಹೇಶ್ ಕುಮಾರ್, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಸ್.ಅರುಣಕುಮಾರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

9 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

9 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

15 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

15 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

16 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

16 hours ago