ಮೈಸೂರು

ಖಾತೆ ಮಾಡಿಕೊಡದ ಅಧಿಕಾರಿಗಳು : ರೈತನಿಂದ ವಿಷ ಸೇವನೆ ಯತ್ನ

ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ ಕಚೇರಿ ಮುಂದೆ ವಿಷ ಸೇವಿಸಿ ರೈತರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆಯ ಬುಧವಾರ ನಡೆದಿದೆ.

ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದ ರಂಗೇಗೌಡ (70) ಎಂಬುವರು ಆತ್ಮಹತ್ಯೆಗೆ ಯತ್ನಿಸಿದ ರೈತರಾಗಿದ್ದು, ಮೈಸೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಸಾವು ಬದುಕಿನ ಹೋರಾಟ ಮಾಡುತ್ತಿದ್ದಾರೆ.

ಇವರಿಗೆ ಪತ್ನಿ ಹಾಗೂ ಇಬ್ಬರು ಗಂಡು ಮಕ್ಕಳು ಹಾಗೂ ಒರ್ವ ಪುತ್ರಿ ಇದ್ದಾರೆ.

ಚಿಕ್ಕನಾಯಕನಹಳ್ಳಿ ಗ್ರಾಮದ ರೈತ ರಂಗೇಗೌಡ ತಮ್ಮ ಜಮೀನಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ನೀಡಿ ಖಾತೆ ಮಾಡಿ ಕೊಡಿ ಎಂದು ಸಾಲಿಗ್ರಾಮದಲ್ಲಿರುವ ನಾಡಕಚೇರಿಯಲ್ಲಿ ಎರಡು ವರ್ಷಗಳ ಹಿಂದೆ ಅರ್ಜಿ ಸಲ್ಲಿಸಿದ್ದರು. ಸಂಬಂದಪಟ್ಟವರು ಖಾತೆ ಮಾಡದೇ ಸತಾಯಿಸಿ ಅಲೆದಾಡಿಸಿದ್ದಾರೆ. ಈ ಬಗ್ಗೆ ತಹಸೀಲ್ದಾರ್ ಗಮನಕ್ಕೂ ತಂದರೂ ಪ್ರಯೋಜನವಾಗದ ಹಿನ್ನೆಲೆಯಲ್ಲಿ ಮನನೊಂದಿದ್ದಾರೆ. ಮನೆಯಲ್ಲಿ ಯಾರಿಗೂ ಹೇಳದ ತಾವೇ ಸ್ವತಃ ನಾಡಕಚೇರಿಗೆ ದಿನ ನಿತ್ಯ ಅಲೆದಾಡಿ ಬೇಸತ್ತಿ ಕೊನೆಗೆ ಗಳಿಗೆಯಲ್ಲಿ ಕ್ರಿಮಿನಾಶಕ ಔಷಧ ಕುಡಿದು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧಾರ ಮಾಡಿ ಸಾಲಿಗ್ರಾಮ ಪಟ್ಟಣದಲ್ಲಿರುವ ನಾಡ ಕಚೇರಿಯ ಮುಂದೆ ಸಾರ್ವಜನಿಕರ ಎದುರಿನಲ್ಲಿ ಕ್ರಿಮಿನಾಶಕ ಔಷಧ ಕುಡಿದಿದ್ದಾರೆ.

ಈ ಘಟನೆಯನ್ನು ಕಂಡ ಮುಖಂಡರೊಬ್ಬರು ಸ್ಥಳೀಯರ ಸಹಕಾರದೊಂದಿಗೆ ರಂಗೇಗೌಡರನ್ನು ಸಾಲಿಗ್ರಾಮ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಿದ್ದಾರೆ. ಬಳಿಕ ರಂಗೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಸಾವು ಬದುಕಿನ ಹೋರಾಟ ನಡೆಸುತ್ತಿದ್ದಾರೆ.

ಖಂಡನೆ
ಸಾಲಿಗ್ರಾಮ ತಾಲೂಕು ಕೇಂದ್ರವಾದರೂ ರೈತರು ಹಾಗೂ ಸಾರ್ವಜನಿಕರು ಜಮೀನಿನ ದಾಖಲೆಗಾಗಿ ಅಥವಾ ಖಾತೆಗೆ ಮತ್ತು ಜನನ, ಮರಣ ಪ್ರಮಾಣ ಪತ್ರಕ್ಕಾಗಿ ಅಲೆದಾಟ ತಪ್ಪಿಲ್ಲ, ತಾಲೂಕು ಆಡಳಿತ ಸೌಧದ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು ಸೇರಿದಂತೆ ಎಲ್ಲರೂ ದಾಖಲೆಗಳನ್ನು ನೀಡಲು ಹಿಂದೇಟು ಹಾಕುತ್ತಾರೆ, ಸಾಲಿಗ್ರಾಮ ತಾಲೂಕು ಆಡಳಿತ ವ್ಯವಸ್ಥೆ ಹದಗೆಟ್ಟಿದೆ ಎಷ್ಟೋ ಬಾರಿ ಸಂಬಂದಪಟ್ಟ ಶಾಸಕರು, ಜಿಲ್ಲಾಧಿಕಾರಿ‌ಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡರೊಬ್ಬರು ಆಂದೋಲನಕ್ಕೆ ತಿಳಿಸಿದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

12 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

12 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

14 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

16 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

19 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

19 hours ago