ಮೈಸೂರು

ಮಣ್ಣಿನ ಫಲವತ್ತತೆಗೆ ಎಣ್ಣೆಕಾಳುಗಳು ಬೆಳೆ ಉತ್ತಮ : ಮಮತಾ ಎಸ್.ಬಿ

ಮೈಸೂರು: ರೈತರು ತಾವು ಬೆಳೆಯುವ ಬೆಳೆಗಳ ಜೊತೆಗೆ ಸಮಾಜದ ಆರೋಗ್ಯ ಮತ್ತು ಮಣ್ಣಿನ ಫಲವತ್ತತೆಗಾಗಿ ಎಣ್ಣೆಕಾಳುಗಳನ್ನು ಬೆಳೆಯಬೇಕು ಎಂದು ಸಹಾಯಕ ಕೃಷಿ ನಿರ್ದೇಶಕಿ ಮಮತಾ ಎಸ್.ಬಿ. ತಿಳಿಸಿದರು.

ಜಿಲ್ಲಾ ಕೃಷಿ ತರಬೇತಿ ಕೇಂದ್ರ ನಾಗನಹಳ್ಳಿ ವತಿಯಿಂದ ಶುಕ್ರವಾರ ಮತ್ತು ಶನಿವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಎಣ್ಣೆಕಾಳು ಬೆಳೆಗಳ ಉತ್ಪಾದನಾ ತಾಂತ್ರಿಕತೆಗಳು ಮತ್ತು ಮೌಲ್ಯವರ್ಧನೆಗೆ ಇರುವ ಅವಕಾಶ ಕುರಿತ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬರಗಾಲದ ಸನ್ನಿವೇಶದಲ್ಲಿ ತೇವಾಂಶದ ಕೊರತೆ ನೀಗಿಸುವುದರ ಜೊತೆಗೆ ಉತ್ತಮ ಇಳುವರಿ ಪಡೆಯಲು ರೈತರು ಸಾವಯವ ಕೃಷಿ, ಬೆಳೆ ಪರಿವರ್ತನೆ ಮತ್ತು ಮಿಶ್ರ ಬೆಳೆ ಪದ್ದತಿಗಳನ್ನು ಅಳವಡಿಸಬೇಕೆಂದು ತಿಳಿಸಿದರು.

ಮಂಡ್ಯ ವಲಯ ಕೃಷಿ ಸಂಶೋಧನಾ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ.ಪಿ. ತಿಮ್ಮೇಗೌಡ, ಎರಡು ದಿನಗಳ ಈ ಕಾರ್ಯಾಗಾರದಲ್ಲಿ ವಿವಿಧ ಎಣ್ಣೆಕಾಳು ಬೆಳೆಗಳ ಸುಧಾರಿತ ತಳಿಗಳು ಮತ್ತು ಬೇಸಾಯ ಕ್ರಮಗಳ ಬಗ್ಗೆ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು.

ಮೈಸೂರು ಸಿ.ಎಫ್.ಟಿ.ಆರ್.ಐ. ಹಿರಿಯ ವಿಜ್ಣಾನಿಗಳಾದ ಡಾ.ಗೋವಿಂದರಾಜು ಕೆ, ಪ್ರಾತ್ಯಕ್ಷತೆ ಮೂಲಕ ಎಣ್ಣೆಕಾಳು ಬೆಳೆಗಳಲ್ಲಿ ಮೌಲ್ಯವರ್ಧನೆ ಮತ್ತು ಕಲಬೆರೆಕೆ ಎಣ್ಣೆ ಕಂಡುಹಿಡಿಯುವ ವಿಧಾನಗಳ ಕುರಿತು ರೈತರಿಗೆ ತೋರಿಸಿಕೊಟ್ಟರು. ನಂತರ ರೋಗತಜ್ಞೆ ಡಾ. ಆರ್.ಎನ್. ಪುಷ್ಪ ಬೀಜೋಪಚಾರ, ಸಮಗ್ರ ರೋಗ – ಕೀಟ ನಿರ್ವಹಣೆ ಮತ್ತು ದಾಸ್ತಾನು ಕೀಟಗಳ ನಿರ್ವಹಣೆ ಕುರಿತು ತಾಂತ್ರಿಕ ಉಪನ್ಯಾಸ ನೀಡಿದರು.

ತೆಂಗಿನ ಹಾಲಿನಿಂದ ಐಸ್‌ಕ್ರೀಮ್ ತಯಾರಿಕೆ ಮತ್ತು ಮೌಲ್ಯವರ್ಧನೆ ಕುರಿತು ಪ್ರಗತಿಪರ ರೈತರಾದ ಸುರೇಶ್ ಭಟ್, ಕೂರ್ಗಳ್ಳಿ, ಅನುಭವ ಹಂಚಿಕೊoಡರು. ಸಹಾಯಕ ಕೃಷಿ ನಿರ್ದೇಶಕಿ ಮಧುಲತಾ ಹೆಚ್.ಬಿ. ಜೈವಿಕ ಗೊಬ್ಬರಗಳ ಮಹತ್ವ ಮತ್ತು ಬೆಳೆವಿಮೆ ಮತ್ತು ಬೆಳೆ ಸಮೀಕ್ಷೆ ಬಗ್ಗೆ ಮಾಹಿತಿ ನೀಡಿದರು.

ಸಹಾಯಕ ಕೃಷಿ ನಿರ್ದೇಶಕಿ ವಜ್ರೇಶ್ವರಿ ಎಸ್, ಮಣ್ಣು ಮಾದರಿಗಳ ಸಂಗ್ರಹಣೆ ಮತ್ತು ಫಲಿತಾಂಶ ಆಧಾರಿತ ರಸಗೊಬ್ಬರಗಳ ಬಳಕೆ ಬಗ್ಗೆ ಮಾಹಿತಿ ನೀಡಿದರು. ಉದಯೋನ್ಮೂಖ ಉದ್ಯಮಿ ಮೋಹನ್ ಕುಮಾರ್ ಬಿ.ಸಿ  ಗಾಣದ ಮೂಲಕ ಎಣ್ಣೆ ತೆಗೆದು ಆರೋಗ್ಯ ಯುಕ್ತ ಅಡುಗೆ ಎಣ್ಣೆ ಉತ್ಪಾದನೆ ಮತ್ತು ಮಾರುಕಟ್ಟೆಗಿರುವ ಅವಕಾಶಗಳ ಕುರಿತು ಅನುಭವ ಹಂಚಿಕೊoಡರು.

ತರಬೇತಿ ಸಂಯೋಜಕ ಹಾಗೂ ಕೃಷಿ ಅಧಿಕಾರಿ ಮಂಜುಳ ಅವರು ಪಿ.ಎಂ.ಕಿಸಾನ್ ಯೋಜನೆ ಬಗ್ಗೆ ತಿಳಿಸಿದರು. ತರಬೇತಿ ಮುಕ್ತಾಯದ ನಂತರ 25 ಅಂಕಗಳಿಗೆ ಪರೀಕ್ಷೆ ನೆಡೆಸಲಾಗಿ ತರಬೇತಿಯಲ್ಲಿ ಸಕ್ರೀಯವಾಗಿ ಭಾಗವಹಿಸಿ ಹೆಚ್ಚಿನ ಅಂಕ ಪಡೆದ ರೈತರಾದ ದೇವಮ್ಮ ಕೆ.ಎಂ, ರತ್ನೇಶ್ವರ ಕೆ.ಎನ್. ರವರಿಗೆ ಪುಸ್ತಕಗಳನ್ನು ನೀಡಿ ಅಭಿನಂದಿಸಲಾಯಿತು.

ಕಾರ್ಯಕ್ರಮದಲ್ಲಿ ರಾಜಶೇಖರ ಹೆಚ್.ಆರ್, ಶಿಲ್ಪ ಜಿ.ಕೆ. ಹಾಗೂ ಜಿಲ್ಲೆಯ ವಿವಿಧ ಗ್ರಾಮಗಳ 30 ಜನ ರೈತರು ಭಾಗವಹಿಸಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೈಕೊಟ್ಟ ಮುಂಗಾರು: 126 ವರ್ಷಗಳಲ್ಲೇ ಮೂರನೇ ಬಾರಿ ದೇಶದಲ್ಲಿ ಮಳೆ ಕೊರತೆ

ನವದೆಹಲಿ: ದೇಶದಲ್ಲಿ ಈ ಬಾರಿ ಮುಂಗಾರು ಮಳೆ ಸಂಪೂರ್ಣವಾಗಿ ಕೈಕೊಟ್ಟಿದ್ದು, ಕಳೆದ 126 ವರ್ಷಗಳ ಇತಿಹಾಸದಲ್ಲೇ ಜೂನ್‌ ತಿಂಗಳಿನಲ್ಲಿ ಮೂರನೇ…

14 mins ago

ಅಪ್ಪಟ ಸಮಾಜವಾದಿ, ಗುಡಿಸಲೂ ಇರದಿದ್ದ ಜೋಗಿ ಕಿಶನ್ ಪಟ್ನಾಯಕ್

ಪ್ರೊ.ರವಿವರ್ಮಕುಮಾರ್, ಸಮಾಜವಾದಿ ಚಿಂತಕರು ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಇಂದು ಕಿಶನ್ ಜನ್ಮದಿನ; ಅವರ ನೆನಪು ನಮ್ಮೊಡನೆ ಸದಾ ಹಸಿರಾಗಿರಲಿ.…

8 hours ago

ಶೀಘ್ರವೇ ಆಟೋ ಬಾಡಿಗೆ ಪರಿಷ್ಕೃತ ದರ ಪ್ರಕಟ

ನವೀನ್ ಡಿಸೋಜ ಮಡಿಕೇರಿಯಲ್ಲಿ ನಡೆದ ಸಾರಿಗೆ ಪ್ರಾಧಿಕಾರದ ಸಭೆಯಲ್ಲಿ ದರ ಹೆಚ್ಚಳಕ್ಕೆ ನಿರ್ಧಾರ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆಟೋ ರಿಕ್ಷಾ…

9 hours ago

ಜೇನು ಕೃಷಿಗೆ ಸರ್ಕಾರದ ಬಲ

ಎಚ್.ಎಸ್.ದಿನೇಶ್‌ಕುಮಾರ್ ಮೈಸೂರು: ಕುರಿ ಸಾಕಾಣಿಕೆ, ಹೈನುಗಾರಿಕೆ ಹೀಗೆ ರೈತರಿಗೆ ಉಪಯೋಗವಾಗುವಂತಹ ಹಲವಾರು ಯೋಜನೆಗಳನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಇದೀಗ ರೈತರು…

9 hours ago

ಜು.20ಕ್ಕೆ ವಿಧಾನಪರಿಷತ್ ಐದು ಸ್ಥಾನ ತೆರವು

ಕೆ.ಬಿ.ರಮೇಶನಾಯಕ ಮೈಸೂರು: ರಾಜ್ಯದಲ್ಲಿ ಜುಲೈ ೨೦ಕ್ಕೆ ತೆರವಾಗಲಿರುವ ವಿಧಾನಪರಿಷತ್‌ನ ಐದು ನಾಮನಿರ್ದೇಶಿತ ಸ್ಥಾನಗಳಿಗೆ ಸದಸ್ಯರನ್ನು ನೇಮಕ ಮಾಡುವುದಕ್ಕೆ ದಿನಗಣನೆ ಶುರುವಾಗಿದೆ.…

9 hours ago