ಮೈಸೂರು

ಹಳೆ ಜಗಳ: ಲೋಕ ಚುನಾವಣೆ ನೆಪವೊಡ್ಡಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಗುಂಪು!

ನಂಜನಗೂಡು: ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ನೀವು ಬಿಜೆಪಿಯವರು ಎಂದು ನೆಪವೊಡ್ಡಿ ಹಳೆ ದ್ವೇಷ ತೀರಿಸಿಕೊಳ್ಳಲು ಗುಂಪೊಂದು 5 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಹೊಸಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.

ಘಟ‌ನೆಗೆ ಸಂಭಂಧಿಸಿದಂತೆ 6 ಮಂದಿ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಲ್ಲೆಗೊಳಗಾದ 5 ಮಂದಿಯಲ್ಲಿ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್, ಸುರೇಶ್, ಮಹೇಶ್, ಪ್ರಕಾಶ್, ಸುದೀಪ್ ಮತ್ತು ಚೇತನ್ ಎಂಬುವರ ಮೇಲೆ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ಗ್ರಾಮ ಪಂಚಾಯ್ತಿ ಚುನಾವಣೆ ವೇಳೆ ಸೋಲು ಗೆಲುವಿನ ವಿಚಾರದಲ್ಲಿ ಇದೇ ಗುಂಪು ಹಲ್ಲೆ ನಡೆಸಿತ್ತು. ಈ ಸಂಬಂಧ ಪ್ರಕರಣ ಅಗಲೂ ದಾಖಲಾಗಿ ವಿಚಾರಣೆ ನಡೆಯುತ್ತಲೆ ಇದೆ. ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬರುತ್ತಿದ್ದ ಸಿದ್ದೇಗೌಡ, ಬಸವರಾಜು, ಗುರುಮಲ್ಲೇಶ, ಬಸವರಾಜು, ಮಲ್ಲೇಶ ಈ ಐವರನ್ನ ಅಡ್ಡಗಟ್ಟಿ ನೀವು ಬಿಜೆಪಿಯವರು ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರುಮಾಡಿ ಹಿಂದೆ ಹಾಕಿರುವ ಪ್ರಕರಣವನ್ನ ರಾಜಿ ಮಾಡಿಕೊಳ್ಳುವಂತೆ ಧಂಕಿ ಹಾಕಿ ಮಾರಕಾಸ್ತ್ರಗಳಿಂದ ಹಿಗ್ಗಾ ಮುಗ್ಗ ಥಳಿಸಿದ್ದಾರೆ.

ಈ ‌ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಬಂದವರಿಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಈಗ ದೂರುದಾರರು ನೇರವಾಗಿ ಜಿಲ್ಲಾ ಪೋಲೀಸ್ ವರಿಷ್ಠಾದಿಕಾರಿಗಳಿಗೆ ನ್ಯಾಯ ಕೋರಿ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಕೈ ಮೂಳೆ ಮುರಿದಿದೆ. ಗಾಯಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

59 mins ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಿಎಂ ಶಿಶಿರ್ ಚಂದ್ರ ಏಕೆ ಕೆಳಗಿಳಿಯುತ್ತಿಲ್ಲ?

ಜನನಾಯಕ ಅನ್ನಿಸಿಕೊಂಡವರ ಅಧಿಕಾರ ಬದಲಿಸುವುದು ಅಷ್ಟು ಸುಲಭದ ಕೆಲಸವಲ್ಲ  ಅವತ್ತು ವಿಧಾನಸಭೆಯ ಮೊಗಸಾಲೆಗೆ ಪ್ರವೇಶ ಮಾಡುತ್ತಿದ್ದಂತೆಯೇ ಪತ್ರಕರ್ತ ರಾಕೇಶನ ಮುಖದಲ್ಲಿ…

1 hour ago

ರಂಗನತಿಟ್ಟು ಸಮೀಪ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ: ಪರ-ವಿರೋಧ ಅಭಿಪ್ರಾಯ

ಪರಿಸರ ಪ್ರೇಮಿಗಳು, ಸಾರ್ವಜನಿಕರ ಪರ-ವಿರೋಧ ಅಭಿಪ್ರಾಯ ಮಂಡ್ಯ: ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ ೨೭೫ರ ವಿಸ್ತೃತ ಮಾರ್ಗವಾದ…

1 hour ago

ಅಳಿವಿನತ್ತ ರಾಜ್ಯದ ಮೊದಲ ಬಾಲಕಿಯರ ಶಾಲೆ

ವರಹಳ್ಳಿ ಆನಂದ, ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ಮೈಸೂರು: ಹೆಣ್ಣುಮಕ್ಕಳಿಗಾಗಿ ರಾಜ್ಯದಲ್ಲಿ ಸ್ಥಾಪಿಸಿದ ಮೊದಲ ಶಾಲೆ ಇದು. ಶತೋತ್ತರ ಅರ್ಧ…

1 hour ago

2ನೇ ಮದುವೆಗೆ ಸಜ್ಜಾಗಿದ್ದ ವರ : ಕಲ್ಯಾಣ ಮಂಟಪಕ್ಕೆ ಬಂದು ಮದುವೆ ನಿಲ್ಲಿಸಿದ ಮೊದಲ ಹೆಂಡತಿ!

ತುಮಕೂರು : ಈಗಾಗಲೇ ಮದುವೆಯಾಗಿ ಹೆಂಡತಿಯಿದ್ದರೂ 2ನೇಯ ಮದುವೆಗೆ ತಯಾರಿ ನಡೆಸಿ ಕಲ್ಯಾಣ ಮಂಟಪದಲ್ಲಿ ಇನ್ನೇನು ಮಾಂಗಲ್ಯ ಧಾರಣೆ ನಡೆಯಬೇಕು…

7 hours ago