ನಂಜನಗೂಡು: ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ನೀವು ಬಿಜೆಪಿಯವರು ಎಂದು ನೆಪವೊಡ್ಡಿ ಹಳೆ ದ್ವೇಷ ತೀರಿಸಿಕೊಳ್ಳಲು ಗುಂಪೊಂದು 5 ಮಂದಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಘಟನೆ ನಂಜನಗೂಡು ತಾಲೂಕು ಹೊಸಕಡಜಟ್ಟಿ ಗ್ರಾಮದಲ್ಲಿ ನಡೆದಿದೆ.
ಘಟನೆಗೆ ಸಂಭಂಧಿಸಿದಂತೆ 6 ಮಂದಿ ವಿರುದ್ದ ಹುಲ್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಲ್ಲೆಗೊಳಗಾದ 5 ಮಂದಿಯಲ್ಲಿ ನಾಲ್ವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದರ್ಶನ್, ಸುರೇಶ್, ಮಹೇಶ್, ಪ್ರಕಾಶ್, ಸುದೀಪ್ ಮತ್ತು ಚೇತನ್ ಎಂಬುವರ ಮೇಲೆ ಹುಲ್ಲಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಗ್ರಾಮ ಪಂಚಾಯ್ತಿ ಚುನಾವಣೆ ವೇಳೆ ಸೋಲು ಗೆಲುವಿನ ವಿಚಾರದಲ್ಲಿ ಇದೇ ಗುಂಪು ಹಲ್ಲೆ ನಡೆಸಿತ್ತು. ಈ ಸಂಬಂಧ ಪ್ರಕರಣ ಅಗಲೂ ದಾಖಲಾಗಿ ವಿಚಾರಣೆ ನಡೆಯುತ್ತಲೆ ಇದೆ. ಏಪ್ರಿಲ್ 26 ರಂದು ನಡೆದ ಲೋಕಸಭಾ ಚುನಾವಣೆಯಲ್ಲಿ ಮತ ಚಲಾಯಿಸಿ ಬರುತ್ತಿದ್ದ ಸಿದ್ದೇಗೌಡ, ಬಸವರಾಜು, ಗುರುಮಲ್ಲೇಶ, ಬಸವರಾಜು, ಮಲ್ಲೇಶ ಈ ಐವರನ್ನ ಅಡ್ಡಗಟ್ಟಿ ನೀವು ಬಿಜೆಪಿಯವರು ಕಾಂಗ್ರೆಸ್ ಗೆ ಓಟ್ ಹಾಕಿಲ್ಲ ಎಂದು ಕ್ಯಾತೆ ತೆಗೆದು ಜಗಳ ಶುರುಮಾಡಿ ಹಿಂದೆ ಹಾಕಿರುವ ಪ್ರಕರಣವನ್ನ ರಾಜಿ ಮಾಡಿಕೊಳ್ಳುವಂತೆ ಧಂಕಿ ಹಾಕಿ ಮಾರಕಾಸ್ತ್ರಗಳಿಂದ ಹಿಗ್ಗಾ ಮುಗ್ಗ ಥಳಿಸಿದ್ದಾರೆ.
ಈ ಕುರಿತು ಹುಲ್ಲಹಳ್ಳಿ ಪೊಲೀಸ್ ಠಾಣೆಗೆ ಬಂದವರಿಗೆ ಸೂಕ್ತ ನ್ಯಾಯ ದೊರೆತಿಲ್ಲ ಎಂದು ಈಗ ದೂರುದಾರರು ನೇರವಾಗಿ ಜಿಲ್ಲಾ ಪೋಲೀಸ್ ವರಿಷ್ಠಾದಿಕಾರಿಗಳಿಗೆ ನ್ಯಾಯ ಕೋರಿ ದೂರು ದಾಖಲಿಸಿದ್ದಾರೆ. ಈ ಘಟನೆಯಲ್ಲಿ ಇಬ್ಬರಿಗೆ ಕೈ ಮೂಳೆ ಮುರಿದಿದೆ. ಗಾಯಗೊಂಡವರಿಗೆ ನಂಜನಗೂಡಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…