ಮೈಸೂರು: ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ ಜೂನ್ 12 ರಂದು ದೂರು ನೀಡಬಹುದು.
ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಅಧಿಕಾರಿಗಳು, ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಪ್ರಮಾಣಪತ್ರಗಳನ್ನು ಅಗತ್ಯ ದಾಖಲಾತಿಗಳೊಡನೆ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಜೂ.12 ರಂದು ಬೆಳಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚಾಮಾರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತಾಲ್ಲೂಕು ಕಚೇರಿ ಹಾಗೂ ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕು ಮತ್ತು ಮಡಿಕೇರಿ ತಾಲ್ಲೂಕು ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ಹಿನ್ನೆಲೆ ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿಗಳು ಅಥವಾ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ಅವಕಾಶವನ್ನು ಉಪಯೋಗಿಸಿಕೊಂಡು ದೂರುಗಳನ್ನು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧಿಕ್ಷಕರಾದ ಸಜೀತ್ ವಿ ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.