ಮೈಸೂರು

ಮೈಸೂರಿನ ಭಾಗದಲ್ಲಿ ಈ ದಿನದಂದು ಲೋಕಯುಕ್ತ ಅಧಿಕಾರಿಗಳಿಂದ ದೂರು ಸ್ವೀಕಾರ ಸಭೆ

ಮೈಸೂರು:  ಅಧಿಕಾರಿಗಳು ಸರ್ಕಾರಿ ಕಛೇರಿಗಳಲ್ಲಿ ಸಾರ್ವಜನಿಕರ ಅಧಿಕೃತ ಕೆಲಸಗಳ ಅನಗತ್ಯ ವಿಳಂಬ, ಲಂಚದ ಬೇಡಿಕೆ ಇತ್ಯಾದಿ ತೊಂದರೆಗಳನ್ನು ನೀಡುತ್ತಿರುವ ಬಗ್ಗೆ  ಸಂಬoಧಪಟ್ಟವರು ಅಗತ್ಯ ಮಾಹಿತಿಯೊಂದಿಗೆ ಲೋಕಯುಕ್ತ ಅಧಿಕಾರಿಗಳಿಗೆ ಜೂನ್‌ 12 ರಂದು ದೂರು ನೀಡಬಹುದು.

ಈ ಬಗ್ಗೆ ಮಾಹಿತಿ ನೀಡಿರುವ ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ  ಅಧಿಕಾರಿಗಳು,  ಸರ್ಕಾರಿ ಅಧಿಕಾರಿ, ನೌಕರರ ವಿರುದ್ಧ ಕ್ರಮಬದ್ಧವಾಗಿ ಭರ್ತಿಮಾಡಿದ ದೂರುಗಳನ್ನು ಪ್ರಮಾಣಪತ್ರಗಳನ್ನು ಅಗತ್ಯ ದಾಖಲಾತಿಗಳೊಡನೆ ದೂರು ಸ್ವೀಕರಿಸುವ ಕಾರ್ಯಕ್ರಮವನ್ನು ಜೂ.12 ರಂದು ಬೆಳಗ್ಗೆ 11 ಗಂಟೆಯಿoದ ಮದ್ಯಾಹ್ನ 1 ಗಂಟೆಯವರೆಗೆ ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ತಾಲ್ಲೂಕು ಪಂಚಾಯಿತಿ ಕಾರ್ಯಾಲಯ, ಚಾಮಾರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತಾಲ್ಲೂಕು ಕಚೇರಿ ಹಾಗೂ  ಕೊಡಗು ಜಿಲ್ಲೆಯ ಸೋಮವಾರ ಪೇಟೆ ತಾಲ್ಲೂಕು ಮತ್ತು ಮಡಿಕೇರಿ ತಾಲ್ಲೂಕು ಕಚೇರಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಈ ಹಿನ್ನೆಲೆ ಸಾರ್ವಜನಿಕರು, ಕರ್ತವ್ಯ ಲೋಪವೆಸಗುವ ಭ್ರಷ್ಟ ಸರ್ಕಾರಿ ಅಧಿಕಾರಿಗಳು ಅಥವಾ ನೌಕರರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಈ ಅವಕಾಶವನ್ನು ಉಪಯೋಗಿಸಿಕೊಂಡು ದೂರುಗಳನ್ನು ನೀಡಬಹುದು ಎಂದು ಕರ್ನಾಟಕ ಲೋಕಾಯುಕ್ತ ಮೈಸೂರು ವಿಭಾಗದ ಪೊಲೀಸ್ ಅಧಿಕ್ಷಕರಾದ ಸಜೀತ್ ವಿ ಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

BJP ಎಂಎಲ್‌ಸಿ ಸಿ.ಟಿ ರವಿ ಬಂಧನ

ಬೆಳಗಾವಿ: ಸುವರ್ಣ ಸೌಧದಲ್ಲಿ ಗುರುವಾರ ನಡೆದ ವಿಧಾನ ಪರಿಷತ್‌ ಕಲಾಪದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳಕರ…

15 mins ago

ಸಿ. ಟಿ ರವಿ ಅವಾಚ್ಯ ಪದ ಬಳಕೆ ; ಸಭಾಪತಿ ಹಾಗೂ ಪೊಲೀಸರಿಗೆ ಸಚಿವೆ ದೂರು ನೀಡಿದ್ದಾರೆ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಯವರ ವಿರುದ್ಧ…

28 mins ago

ಅಂಬೇಡ್ಕರ್‌ಗೆ ಅವಮಾನ | ಮೈಸೂರಲ್ಲಿ ಅಮಿತ್‌ ಶಾ ವಿರುದ್ಧ ವಿದ್ಯಾರ್ಥಿಗಳ ಆಕ್ರೋಶ

ಮೈಸೂರು: ಸಂಸತ್‌ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಎಸಗಿರುವುದನ್ನು ಖಂಡಿಸಿ ಮೈಸೂರು ವಿಶ್ವವಿದ್ಯಾನಿಲಯದ…

60 mins ago

ಸಿ.ಟಿ. ರವಿಗೆ ಮುತ್ತಿಗೆ ಹಾಕಿ ಹಲ್ಲೆಗೆ ಯತ್ನಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬೆಂಬಲಿಗರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರ ಬಗ್ಗೆ ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ…

2 hours ago

ಕಾಂಗ್ರೆಸ್‌ನವರು ನಕಲಿ ಹೋರಾಟಗಾರರು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್‌…

4 hours ago

ಮೈಸೂರು ಮುಡಾ ಕೇಸ್:‌ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ ಎಂ.ಲಕ್ಷ್ಮಣ್‌

ಮೈಸೂರು: ಸ್ನೇಹಮಯಿ ಕೃಷ್ಣಗೆ ಫಂಡಿಂಗ್‌ ಮಾಡುತ್ತಿರುವವರು ಯಾರು ಅನ್ನೋದು ಗೊತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್‌ ಕಿಡಿಕಾರಿದ್ದಾರೆ. ಮುಡಾ ಪ್ರಕರಣಕ್ಕೆ…

4 hours ago