ಮೈಸೂರು

ಒಣಗಾಂಜಾ ಮಾರಾಟ : ಓರ್ವ ಬಂಧನ

ಎಚ್.ಡಿ.ಕೋಟೆ : ಪಟ್ಟಣದ ಗದ್ದಿಗೆ ಸರ್ಕಲ್ ಬಳಿ ಅಕ್ರಮವಾಗಿ ಒಣಗಾಂಜಾ ಸೊಪ್ಪು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ವ್ಯಕ್ತಿಯನ್ನು ಕೋಟೆ ಪೊಲೀಸರು ಬಂಧಿಸಿ, ಗಾಂಜಾ ಸೊಪ್ಪು ಮತ್ತು ಮಾರಾಟ ಮಾಡಲು ಬಳಸುತ್ತಿದ್ದ ಪ್ಯಾಸೆಂಜರ್ ಆಟೋವನ್ನು ವಶಕ್ಕೆ ಪಡೆದಿದ್ದಾರೆ.

ಪಟ್ಟಣದ ನಿವಾಸಿ ದೇವರಾಜು ಕುಮಾರ್ ಅಲಿಯಾಸ್ ಅಪ್ಪು ಕುಮಾರ್ ಬಂಧಿತ ಆರೋಪಿ. ೧೭೫ ಗ್ರಾಂ ಗಾಂಜಾ ಸೊಪ್ಪನ್ನು ಬಿಡಿಬಿಡಿಯಾಗಿ ಪ್ಯಾಕ್ ಮಾಡಿ ಮಾರಾಟ ಮಾಡುತ್ತಿದ್ದಾಗ ಸಿಕ್ಕಿ ಬಿದ್ದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಡಿವೈಎಸ್‌ಪಿ ಮಲ್ಲಿಕ್, ನಾಗೇಶ್, ಹುಣಸೂರು ಉಪ ವಿಭಾಗದ ಡಿವೈಎಸ್ಪಿ ಗೋಪಾಲಕೃಷ್ಣ ಅವರ ಮಾರ್ಗದರ್ಶನದಲ್ಲಿ ಇನ್‌ಸ್ಪೆಕ್ಟರ್ ಗಂಗಾಧರ್ ನೇತೃತ್ವದಲ್ಲಿ ಎಸ್‌ಐ ಚಿಕ್ಕನಾಯಕ, ಗುಪ್ತ ಮಾಹಿತಿ ಸಿಬ್ಬಂದಿ ಸೈಯದ್ ಕಬೀರುದ್ದಿನ್, ಯೋಗೇಶ್, ಮೋಹನ್, ಮಹೇಶ್, ಮಹದೇವ, ಡ್ರೈವರ್ ನಾಗರಾಜು ಅವರು ದಾಳಿ ನಡೆಸಿ ಆರೋಪಿ ಮತ್ತು ಮಾಲನ್ನು ವಶಕ್ಕೆ ಪಡೆದು ಪ್ರಕರಣ ದಾಖಲು ಮಾಡಿದ್ದಾರೆ. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಆಂದೋಲನ ಡೆಸ್ಕ್

Recent Posts

ಕೆಪಿಎಸ್‌ಸಿ ಮುಚ್ಚುವ ಬಗ್ಗೆ ಚಿಂತನೆ: ಸಿಎಂ ಡಿ.ಕೆ.ಶಿವಕುಮಾರ್‌

ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…

8 hours ago

ನಂಜನಗೂಡು: ಬೋನಿಗೆ ಬಿದ್ದ ಚಿರತೆ

ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…

8 hours ago

ವಂದೇ ಮಾತರಂ ಅರ್ಧಕ್ಕೆ ಕಡಿತ: ಆದೇಶ ಮರುಪರಿಶೀಲನೆಗೆ ರಾಜ್ಯಪಾಲರ ಸೂಚನೆ

ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…

8 hours ago

ಮದ್ದೂರಿನಲ್ಲಿ ನಿವೃತ್ತ ಹಾಸ್ಟೆಲ್ ಅಧೀಕ್ಷಕನ ಮನೆ ಮೇಲೆ ಲೋಕಾಯುಕ್ತ ದಾಳಿ

ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…

10 hours ago

ಮಂಡ್ಯದಲ್ಲಿ ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ

ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…

12 hours ago

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

18 hours ago