ಮೈಸೂರು : ಇನ್ನು ಮುಂದೆ ಮೈಸೂರಿನ ವ್ಯಾಪಾರಸ್ಥರು ಟ್ರೇಡ್ ಲೈಸನ್ಸ್ ನವೀಕರಣ ಮಾಡಲು ಪಾಲಿಕೆ ಕಚೇರಿಗೆ ಅಲೆಯಬೇಕಿಲ್ಲ. ತಾವಿರುವ ಸ್ಥಳದಲ್ಲಿಯೇ ಕುಳಿತು ಆನ್‌ಲೈನ್ ಮೂಲಕ ವ್ಯಾಪಾರ ಪರವಾನಗಿ ಪಡೆಯಬಹುದಾಗಿದ್ದು, ಈ ಹೊಸ ಸೇವೆಯನ್ನು ಮೈಸೂರು ಮಹಾನಗರ ಪಾಲಿಕೆ ಆರಂಭಿಸಿದೆ.
ವ್ಯಾಪಾರಸ್ಥರಿಗೆ ಪರವಾನಗಿ ಶುಲ್ಕ ಪಾವತಿಸಲು ಅನುಕೂಲವಾಗಲು ತೆರಿಗೆ ಪಾವತಿಯ ವ್ಯವಸ್ಥೆಯ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರು ಸೇರಿದಂತೆ ನಾನಾ ಸಂಘಟನೆಗಳ ಪ್ರತಿನಿಧಿಗಳಿಗೆ ಜಾಗೃತಿ ಮೂಡಿಸುವ ಕಾರ್ಯ ನಡೆಯಿತು.
ಪಾಲಿಕೆಯ ಕೌನ್ಸಿಲ್ ಸಭಾಂಗಣದಲ್ಲಿ ಸೋಮವಾರ ಬೆಳಗ್ಗೆ ಮೇಯರ್ ಶಿವಕುಮಾರ್ ಅವರು, ಆನ್‌ಲೈನ್ ವ್ಯವಸ್ಥೆ ಮೂಲಕ ಟ್ರೇಡ್ ಲೈಸನ್ಸ್ ಸರಳೀಕರಣಗೊಳಿಸಿರುವ ಬಗ್ಗೆ ವ್ಯಾಪಾರಸ್ಥರ ಸಂಘಟನೆಗಳ ಪ್ರತಿನಿಧಿಗಳಿಗೆ ಮಾಹಿತಿ ನೀಡಿ. ಆನ್‌ಲೈನ್ ಮೂಲಕ ತೆರಿಗೆ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು. ಕೆಲ ವ್ಯಾಪಾರಸ್ಥರಿಗೆ ಆನ್‌ಲೈನ್ ಮೂಲಕ ತೆರಿಗೆ ಪಾವತಿಯ ಪ್ರತಿಯನ್ನು ಸಭೆಯಲ್ಲಿ ನೀಡಲಾಯಿತು.
ಸಭೆಯಲ್ಲಿಉಪಮೇಯರ್ ಡಾ.ರೂಪಾ ಯೋಗೇಶ್, ಮಾಜಿ ಮೇಯರ್ ಅಯೂಬ್ ಖಾನ್, ಪಾಲಿಕೆ ಸದಸ್ಯೆ ಅಶ್ವಿನಿ ಅನಂತು, ಆಯುಕ್ತ ಜಿ.ಲಕ್ಷೀಕಾಂತ ರೆಡ್ಡಿ, ಆರೋಗ್ಯಾಧಿಕಾರಿ ಡಾ.ನಾಗರಾಜು, ಹೊಟೇಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣಗೌಡ, ಸಂಘ-ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷ ಪ್ರಶಾಂತ್, ಮೈಸೂರು ಟ್ರೇಡರ್ಸ್ ಸುರಕ್ಷಾ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಪಿ. ಪ್ರಶಾಂತ್‌ಗೌಡ, ಮೈಸೂರು ಕಲ್ಯಾಣ ಮಂಟಪಗಳ ಮಾಲೀಕರ ಸಂಘದ ಅಧ್ಯಕ್ಷ ಸತ್ಯ ನಾರಾಯಣ್ ಸೇರಿದಂತೆ ನಾನಾ ವ್ಯಾಪಾರಿ ಸಂಘಟನೆಗಳ ಪ್ರತಿನಿಧಿಗಳು ಭಾಗವಹಿಸಿದ್ದರು.
ಇನ್ನೂ ಮುಂದೆ ವ್ಯಾಪಾರಸ್ಥರು, ಪಾಲಿಕೆ ಕಚೇರಿಗೆ ಬಾರದೇ ತಾವಿರುವ ಸ್ಥಳದಲ್ಲಿಯೇ ತಮ್ಮ ಟ್ರೇಡ್ ಲೈಸನ್ಸ್ ಸಂಖ್ಯೆ ನಮೂದಿಸಿ, ತೆರಿಗೆ ಪಾವತಿಸಬಹುದು. ಪಾವತಿಯ ರಸೀದಿಯ ಪ್ರಿಂಟ್ ಕೂಡ ಪಡೆಯಬಹುದಾಗಿದೆ ಎಂದು ಮೇಯರ್ ಶಿವಕುಮಾರ್ ಹೇಳಿದರು.
ಹನೂರು : ತಾಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ದೊಡ್ಡಸಂಪಿಗೆ ಅರಣ್ಯ ಪ್ರದೇಶದ ಕೂಳಿಹಟ್ಟಿ ಭಾಗದ ಬೆಳ್ಳಾಜಿ…
ಉತ್ತರ ಪ್ರದೇಶ: ಉತ್ತರ ಪ್ರದೇಶದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ರಾಜ್ಯದ 63 ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚಿನ…
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಹಂಗಾಮಿನಲ್ಲಿ ಉಂಟಾಗಿರುವ ಬರ ಪರಿಸ್ಥಿತಿ ಹಾಗೂ ಬೆಳೆ ಹಾನಿ ಪರಿಶೀಲಿಸಲು ಕೇಂದ್ರ ಸರ್ಕಾರದ ತಂಡ ರಾಜ್ಯಕ್ಕೆ…
ಮೈಸೂರು: ವಿದ್ಯುತ್ ಕೊರತೆ ಹಾಗೂ ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಮಾತನಾಡಿರುವ ಸಚಿವ ಕೆ.ಜೆ.ಜಾರ್ಜ್ ರಾಜ್ಯದಲ್ಲಿ ಸದ್ಯಕ್ಕೆ ಲೋಡ್ ಶೆಡ್ಡಿಂಗ್…
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…