Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

೨೮ರಂದು ವಿದ್ಯಾವರ್ಧಕ ಕಾಲೇಜಿನಲ್ಲಿ ಓಪನ್ ಡೇ !

ಮೈಸೂರು: ನಗರದ ಗೋಕುಲಂ ೩ನೇ ಹಂತದಲ್ಲಿರುವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಏ.೨೮ ರಂದು ಬೆಳಿಗ್ಗೆ ೧೦.೩೦ಕ್ಕೆ ಸಿಇಟಿ ಬರೆದಿರುವ ಪಿಯುಸಿ ವಿದ್ಯಾರ್ಥಿಗಳಿಗಾಗಿ ಯಾವ ವಿಭಾಗದ ವಿದ್ಯಾಭ್ಯಾಸ ಮುಂದುವರಿಸಬೇಕು, ಯಾವ ವಿಭಾಗಕ್ಕೆ ಹೆಚ್ಚಿನ ಆದ್ಯತೆ ಇದೆ ಎಂಬ ಬಗ್ಗೆ ಮಾಹಿತಿ ನೀಡಲು ‘ಓಪನ್ ಡೇ-೨೦೨೪’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸದಾಶಿವೇಗೌಡ ತಿಳಿಸಿದರು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಕಾರಣಗಳಿಂದಾಗಿ ತಾವು ಬಯಸಿದ ಕಾಲೇಜಿನಲ್ಲಿ ಇಷ್ಟಪಟ್ಟಿರುವ ಕೋರ್ಸ್ ಸಿಗದೇ ಹಲವು ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ಇನ್ಫೋಸಿಸ್, ಇಂಟೆಲ್ ಮೊದಲಾದ ಕಂಪನಿಗಳಲ್ಲಿ ಉನ್ನತ ಸ್ಥಾನದಲ್ಲಿರುವವರು ಆಗಮಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿದ್ದಾರೆ ಎಂದರು.

ಕಾರ್ಯಕ್ರಮ ನಿಮಿತ್ತ ಅಂದು ವಸ್ತುಪ್ರದರ್ಶನವನ್ನೂ ಆಯೋಜಿಸಿದ್ದು, ಹೊಸ ಆವಿಷ್ಕಾರದ ಬಗ್ಗೆ ವಿವರಿಸಲಾಗುವುದು. ಸಿಇಟಿ ಆಪ್ಶನ್ ಎಂಟ್ರಿ ಎಂಬ ಪ್ರಾತ್ಯಕ್ಷಿಕೆಯೂ ಇರಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಳ್ಳಬಹುದಾಗಿದೆ. ಆಸಕ್ತರು https://tinyurl.com/vvce-open-day-2024  ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.

ಕಾರ್ಯಕ್ರಮ ಸಂಯೋಜಕರಾದ ಡಾ.ಮಧುಸೂದನ್, ಡಾ.ಅರುಣ್ ದೀಕ್ಷಿತ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.

 

 

 

 

 

 

Tags:
error: Content is protected !!