ಮೈಸೂರು: ನಗರದ ಗೋಕುಲಂ ೩ನೇ ಹಂತದಲ್ಲಿರುವ ವಿದ್ಯಾವರ್ಧಕ ಇಂಜಿನಿಯರಿಂಗ್ ಕಾಲೇಜಿನ ಸಭಾಂಗಣದಲ್ಲಿ ಏ.೨೮ ರಂದು ಬೆಳಿಗ್ಗೆ ೧೦.೩೦ಕ್ಕೆ ಸಿಇಟಿ ಬರೆದಿರುವ ಪಿಯುಸಿ ವಿದ್ಯಾರ್ಥಿಗಳಿಗಾಗಿ ಯಾವ ವಿಭಾಗದ ವಿದ್ಯಾಭ್ಯಾಸ ಮುಂದುವರಿಸಬೇಕು, ಯಾವ ವಿಭಾಗಕ್ಕೆ ಹೆಚ್ಚಿನ ಆದ್ಯತೆ ಇದೆ ಎಂಬ ಬಗ್ಗೆ ಮಾಹಿತಿ ನೀಡಲು ‘ಓಪನ್ ಡೇ-೨೦೨೪’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ.ಬಿ.ಸದಾಶಿವೇಗೌಡ ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಣ್ಣಪುಟ್ಟ ಕಾರಣಗಳಿಂದಾಗಿ ತಾವು ಬಯಸಿದ ಕಾಲೇಜಿನಲ್ಲಿ ಇಷ್ಟಪಟ್ಟಿರುವ ಕೋರ್ಸ್ ಸಿಗದೇ ಹಲವು ವಿದ್ಯಾರ್ಥಿಗಳು ಅವಕಾಶ ವಂಚಿತರಾಗುತ್ತಿದ್ದಾರೆ. ಹೀಗಾಗಿ ಇನ್ಫೋಸಿಸ್, ಇಂಟೆಲ್ ಮೊದಲಾದ ಕಂಪನಿಗಳಲ್ಲಿ ಉನ್ನತ ಸ್ಥಾನದಲ್ಲಿರುವವರು ಆಗಮಿಸಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿದ್ದಾರೆ ಎಂದರು.
ಕಾರ್ಯಕ್ರಮ ನಿಮಿತ್ತ ಅಂದು ವಸ್ತುಪ್ರದರ್ಶನವನ್ನೂ ಆಯೋಜಿಸಿದ್ದು, ಹೊಸ ಆವಿಷ್ಕಾರದ ಬಗ್ಗೆ ವಿವರಿಸಲಾಗುವುದು. ಸಿಇಟಿ ಆಪ್ಶನ್ ಎಂಟ್ರಿ ಎಂಬ ಪ್ರಾತ್ಯಕ್ಷಿಕೆಯೂ ಇರಲಿದೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಉಚಿತ ಪ್ರವೇಶವಿದ್ದು, ವಿದ್ಯಾರ್ಥಿಗಳು, ಪೋಷಕರು ಪಾಲ್ಗೊಳ್ಳಬಹುದಾಗಿದೆ. ಆಸಕ್ತರು https://tinyurl.com/vvce-open-day-2024 ವೆಬ್‌ಸೈಟ್ ಮೂಲಕ ನೋಂದಾಯಿಸಿಕೊಳ್ಳಬಹುದು ಎಂದು ತಿಳಿಸಿದರು.
ಕಾರ್ಯಕ್ರಮ ಸಂಯೋಜಕರಾದ ಡಾ.ಮಧುಸೂದನ್, ಡಾ.ಅರುಣ್ ದೀಕ್ಷಿತ್ ಸುದ್ದಿಗೋಷ್ಠಿಯಲ್ಲಿ ಹಾಜರಿದ್ದರು.
ನವದೆಹಲಿ: ವಂದೇ ಮಾತರಂ ಗೀತೆಯ 150ನೇ ವಾರ್ಷಿಕೋತ್ಸವದ ಹಿನ್ನೆಲೆಯಲ್ಲಿ ಲೋಕಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಷಣ ಮಾಡಿದರು. ಈ ಕುರಿತು…
ನವದೆಹಲಿ: ಚುನಾವಣಾ ಅಕ್ರಮ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಅವರಿಗೆ ಸುಪ್ರೀಂಕೋರ್ಟ್ ನೋಟಿಸ್ ನೀಡಿದೆ. ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇತ್ತೀಚೆಗೆ ನಿಧನರಾದ ಗಣ್ಯರಿಗೆ ಸಂತಾಪ ಸೂಚಿಸಿದರು. ವಿಧಾನಸಭೆಯಲ್ಲಿ ವಂದೇಮಾತರಂ ಗೀತೆ…
ನವದೆಹಲಿ: ದೇಶದ ಅತಿದೊಡ್ಡ ವಿಮಾನಯಾನ ಸಂಸ್ಥೆಯಾದ ಇಂಡಿಗೋದ ಸಂಚಾರ ವ್ಯತ್ಯಯ, ವಿಮಾನ ವಿಳಂಬ ಸಮಸ್ಯೆ ಮುಂದುವರಿದಿದೆ. ಬೆಂಗಳೂರಿನಲ್ಲಿ ಇಂದು 127…
ಕೇರಳ: ಸುಮಾರು ಎಂಟು ವರ್ಷಗಳ ಕಾಲ ನಡೆದ ಕಾನೂನು ಹೋರಾಟದ ನಂತರ, 2017ರಲ್ಲಿ ನಟಿಯ ಮೇಲಿನ ಹಲ್ಲೆ ಪ್ರಕರಣದಲ್ಲಿ ಮಲಯಾಳಂ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಜೈಲಿನ ಕಠಿಣ ನಿಯಮಗಳಿಗೆ ತತ್ತರಿಸಿ ಹೋಗಿದ್ದಾರೆ ಎನ್ನಲಾಗಿದೆ.…