Siddaramaiah. Photo: PTI
ಮೈಸೂರು : ಮೈಸೂರು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಈ ವೇಳೆ ಇತರೆ ಪಕ್ಷದ ನಯಕರು ʼಕೈʼ ಹಿಡಿಯಲು ಮುಂದಾಗಿದ್ದಾರೆ.
ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ.
ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ, ಪುತ್ರ ಭರತ್ ರಾಮಸ್ವಾಮಿ ಸೇರಿ 30 ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಇನ್ನು ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರೋ ಸಿಎಂ ಸಿದ್ದರಾಮಯ್ಯ, ಮೂರು ದಿನ ಠಿಕಾಣಿ ಹೂಡಿ, ಆಪರೇಷನ್ ಅಸ್ತ್ರ ಹೂಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮುಂದುವರೆದಿದೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ ಭಾರಿ ಕಸರತ್ತು ನಡೆಸುತ್ತಿದ್ದಾರೆ.
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಾಕು ಅಮಾನವೀಯ ಘಟನೆ ನಡೆದಿದ್ದು, ಸಾಕು ಪ್ರಾಣಿಗಳನ್ನು ಚಿತ್ರಹಿಂಸೆ ನೀಡಿ ಕೊಂದು ವಿಕೃತಿ ಮೆರೆದಿರುವ…
ಬೆಳಗಾವಿ: ರಾಜ್ಯದ ನಾಯಕತ್ವದಲ್ಲಿ ಯಾವುದೇ ಬದಲಾವಣೆ ಇಲ್ಲ. ಹೈಕಮಾಂಡ್ ಕ್ಲಿಯರ್ ಆಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಹೇಳಿಕೆ…
ಬೆಂಗಳೂರು: ಮನೆ ಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಒಳಗಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ…
ಬೆಳಗಾವಿ: ಪೊಲೀಸ್ ಇಲಾಖೆಯಲ್ಲಿ 14 ಸಾವಿರ ಹುದ್ದೆಗಳು ಖಾಲಿಯಿದ್ದು, ಈ ಪೈಕಿ 3 ಸಾವಿರ ಹುದ್ದೆಗಳ ಭರ್ತಿಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ…
ಬೆಳಗಾವಿ: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಇಲ್ಲ ಎಂದು ಹೈಕಮಾಂಡ್ ಸ್ಪಷ್ಟವಾಗಿ ಹೇಳಿದೆ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಮತ್ತೊಮ್ಮೆ ಬಾಂಬ್…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಜನೌಷಧಿ ಕೇಂದ್ರ ಮುಚ್ಚುವ ರಾಜ್ಯ ಸರ್ಕಾರದ ಆದೇಶಕ್ಕೆ ಧಾರವಾಡ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಸರ್ಕಾರಿ ಆಸ್ಪತ್ರೆಯ…