ಮೈಸೂರು

ಮೈಸೂರು-ಚಾಮರಾಜನಗರದಲ್ಲಿ ಆಪರೇಷನ್‌ ಹಸ್ತ : ಇಂದು ಸಂಸದ ಶ್ರೀನಿವಾಸ ಪ್ರಸಾದ್‌ ಸೋದರ ʼಕೈʼ ಸೇರ್ಪಡೆ !

ಮೈಸೂರು : ಮೈಸೂರು ಚಾಮರಾಜನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಲೋಕಸಭಾ ಪ್ರಚಾರ ಕಾರ್ಯ ಬಿರುಸಿನಿಂದ ಸಾಗಿದೆ. ಈ ವೇಳೆ ಇತರೆ ಪಕ್ಷದ ನಯಕರು ʼಕೈʼ ಹಿಡಿಯಲು ಮುಂದಾಗಿದ್ದಾರೆ.

ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಯಲ್ಲಿ ಆಪರೇಷನ್ ಹಸ್ತದ ಭರಾಟೆ ಜೋರಾಗಿದೆ. ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ ಅವರಿಗೆ ಕಾಂಗ್ರೆಸ್ ಗಾಳ ಹಾಕಿದ್ದು ಇಂದು ​​​​​ರಾಮಸ್ವಾಮಿ ಸೇರಿ 30 ಮುಖಂಡರು BJP ತೊರೆದು ಕಾಂಗ್ರೆಸ್ ಸೇರಲಿದ್ದಾರೆ.

ಇಂದು ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ಸಮ್ಮುಖದಲ್ಲಿ 30 ಜನ ಕಾಂಗ್ರೆಸ್​ ಸೇರ್ಪಡೆಯಾಗಲಿದ್ದಾರೆ. ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ಸೋದರ ವಿ.ರಾಮಸ್ವಾಮಿ, ಪುತ್ರ ಭರತ್​​​​​ ರಾಮಸ್ವಾಮಿ ಸೇರಿ 30 ಮುಖಂಡರು ಕಾಂಗ್ರೆಸ್ ಸೇರಲಿದ್ದಾರೆ. ಇನ್ನು ಮೈಸೂರು ಕ್ಷೇತ್ರವನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರೋ ಸಿಎಂ ಸಿದ್ದರಾಮಯ್ಯ, ಮೂರು ದಿನ ಠಿಕಾಣಿ ಹೂಡಿ, ಆಪರೇಷನ್ ಅಸ್ತ್ರ ಹೂಡಿದ್ದಾರೆ. ಮೈಸೂರು ಜಿಲ್ಲೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರವಾಸ ಮುಂದುವರೆದಿದೆ. ಮೈಸೂರು-ಕೊಡಗು, ಚಾಮರಾಜನಗರ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ಸಿಎಂ ಭಾರಿ ಕಸರತ್ತು ನಡೆಸುತ್ತಿದ್ದಾರೆ.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

7 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

19 mins ago

ಪುಸ್ತಕ ಮೇಳದಲ್ಲಿ ‘ಕವಿತೆ ಹೇಳಿ, ಗಿಡ ಪಡೆಯಿರಿ’

ಚಿರಂಜೀವಿ ಸಿ.ಹುಲ್ಲಹಳ್ಳಿ ಸಾಹಿತ್ಯ, ಪರಿಸರ ಸಂರಕ್ಷಣೆ ಕಾರ್ಯಕ್ಕೆ ಮುಂದಾಗಿರುವ ಸಂತೋಷ್ ಸಂಬಳದ ಹಣವೇ ವಿನಿಯೋಗ; ಬಿಎಂಟಿಸಿಯಲ್ಲಿ ಮೆಕ್ಯಾನಿಕ್ ಆಗಿ ಸೇವೆ…

32 mins ago

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

19 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

20 hours ago