ಮೈಸೂರು

ಆಪರೇಷನ್‌ ಕಮಲ ಪರಿಚಯವಾದದ್ದೇ ಕರ್ನಾಟಕ ಬಿಜೆಪಿಯಿಂದ : ಸಿದ್ದರಾಮಯ್ಯ

ಮೈಸೂರು : ಕಾಂಗ್ರೆಸ್‌ ಪಕ್ಷ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದೆ, ಹೀಗಾಗಿ ಕಾಂಗ್ರೆಸ್‌ ಗೆ ಬಹುಮತ ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಪತ್ರಕರ್ತರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 2008ರಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣ ಆದಾಗ ಬಿಜೆಪಿಯವರು ಆಗ ಗೆದ್ದಿದ್ದ ಸ್ವತಂತ್ರ ಅಭ್ಯರ್ಥಿಗಳನ್ನು ಸೇರಿಸಿಕೊಂಡು ಸರ್ಕಾರ ಮಾಡಿದರು. ಆ ಸರ್ಕಾರದಲ್ಲಿ 3 ಜನ ಮುಖ್ಯಮಂತ್ರಿಗಳಾದರು, ಕೆಲವು ಸ್ವತಂತ್ರ ಅಭ್ಯರ್ಥಿಗಳು ಸರ್ಕಾರದ ವಿರುದ್ಧ ತಿರುಗಿ ಬಿದ್ದರು. 2018ರಲ್ಲಿ ಕೂಡ ಬಿಜೆಪಿ ಹೆಚ್ಚು ಸ್ಥಾನ ಪಡೆದ ಪಕ್ಷವಾಯಿತೇ ಹೊರತು ಬಹುಮತ ಸಾಬೀತು ಮಾಡಲು ಬೇಕಾಗುವಷ್ಟು ಸ್ಥಾನಗಳು ಬರಲಿಲ್ಲ. ಮತ್ತೆ ಯಡಿಯೂರಪ್ಪ ಅವರು ಮೂರೇ ದಿನಕ್ಕೆ ರಾಜೀನಾಮೆ ನೀಡಬೇಕಾಯಿತು, ನಂತರ ಕಾಂಗ್ರೆಸ್‌ ಮತ್ತು ಜೆಡಿಎಸ್‌ ನ ಸಮ್ಮಿಶ್ರ ಸರ್ಕಾರ ಬಂದಿತು. ಕುಮಾರಸ್ವಾಮಿ ಅವರು ಒಂದು ವರ್ಷ ಎರಡು ತಿಂಗಳು ಮಾತ್ರ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ರು. ಆಮೇಲೆ ಆಪರೇಷನ್‌ ಕಮಲದ ಮೂಲಕ ಬಿಜೆಪಿ ಸರ್ಕಾರ ಬಂತು. ಈ ಆಪರೇಷನ್‌ ಕಮಲ ಎಂಬುದು ಪರಿಚಯವಾದದ್ದೇ ಕರ್ನಾಟಕ ಬಿಜೆಪಿಯಿಂದ. ಶಾಸಕರಿಗೆ ಹಣ ಕೊಟ್ಟು ಖರೀದಿಸಿ, ಅವರಿಂದ ರಾಜೀನಾಮೆ ಕೊಡಿಸಿ ಉಪಚುನಾವಣೆಯಲ್ಲಿ ಕೋಟ್ಯಂತರ ರೂಪಾಯಿ ಹಣ ಖರ್ಚು ಮಾಡಿ ಗೆಲ್ಲಿಸುವುದು ಆಪರೇಷನ್‌ ಕಮಲ. ಇಂಥ ದ್ವಂದ್ವ ನಿಲುವು ಇರುವಂತವರನ್ನು ಸೇರಿಸಿಕೊಂಡು ಸರ್ಕಾರ ರಚನೆ ಮಾಡಿದರೆ ಯಾವ ಸರ್ಕಾರ ಕೂಡ ಜನಪರವಾಗಿರಲು ಸಾಧ್ಯವಿಲ್ಲ ಎಂದರು.

ಬಿಜೆಪಿ ವಿರುದ್ಧ ಜನ ಇಂದು ಬೇಸತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಅವರ ಭ್ರಷ್ಟಾಚಾರ. ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಪ್ರಧಾನಿಗಳಿಗೆ ಪತ್ರ ಬರೆದು, ಬಸವರಾಜ ಬೊಮ್ಮಾಯಿ ಅವರ ನೇತೃತ್ವದ ಸರ್ಕಾರ 40% ಕಮಿಷನ್‌ ಸರ್ಕಾರ ಎಂದು ದೂರಿದ್ದಾರೆ. ಪ್ರಧಾನಿ ಮೋದಿ ಅವರು ದೇಶದ ಜನರಿಗೆ ‘ನ ಖಾವೂಂಗ ನ ಖಾನೇದೂಂಗ’ ಎಂದಿದ್ದರು, ಆದರೆ ಪತ್ರ ಬರೆದು ಇಷ್ಟು ಕಾಲ ಆದರೂ ಯಾವುದೇ ಕ್ರಮ ಕೈಗೊಂಡಿಲ್ಲ. ಮೋದಿ ಅವರ ಈ ಭರವಸೆ ಕೇವಲ ಪ್ರಚಾರಕ್ಕಾಗಿ ನೀಡಿದ್ದ ಹೇಳಿಕೆ ಮಾತ್ರ. ರುಪ್ಸಾ (ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ) ದವರು ಪ್ರಧಾನಿಗಳಿಗೆ ಪತ್ರ ಬರೆದು ಈ ಸರ್ಕಾರ 40% ಕಮಿಷನ್‌ ಕೇಳುತ್ತಿದ್ದೆ ಎಂದರು. ಬೊಮ್ಮಾಯಿ ಅವರು ತಮ್ಮ ಭ್ರಷ್ಟಾಚಾರಗಳಿಗೆ ದಾಖಲೆ ಕೇಳುತ್ತಾರೆ, ಈ ಪತ್ರಗಳು ದಾಖಲಾತಿಗಳಲ್ವಾ ಎಂದು ಪ್ರಶ್ನಿಸಿದ್ದಾರೆ.

ಪಿಎಸ್‌ ಐ ನೇಮಕಾತಿಯಲ್ಲಿ ಎಡಿಜಿಪಿ ಸಹಿತವಾಗಿ ಸುಮಾರು 70 ಜನ ಜೈಲಿಗೆ ಹೋದರು, ಇದು ಸಾಕ್ಷಿ ಅಲ್ಲವಾ? ಸಂತೋಷ್‌ ಪಾಟೀಲ್‌ ಎಂಬ ಬಿಜೆಪಿ ಕಾರ್ಯಕರ್ತ ಗ್ರಾಮೀಣಾಭಿವೃದ್ದಿ ಇಲಾಖೆಯಲ್ಲಿ ಗುತ್ತಿಗೆ ಕೆಲಸಗಳನ್ನು ಮಾಡಿ, ಲಂಚ ಕೊಡದ ಕಾರಣಕ್ಕೆ ಬಿಲ್‌ ಹಣ ನೀಡಲಿಲ್ಲ ಎಂದು ಉಡುಪಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಾನೆ. ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಅವರೇ ನನ್ನ ಸಾವಿಗೆ ಕಾರಣ ಎಂದು ಡೆತ್‌ ನೋಟ್‌ ಬರೆದಿಟ್ಟಿದ್ದರು. ಇದು ಸಾಕ್ಷಿ ಅಲ್ಲವಾ? ನಾವು ಸದನದ ಒಳಗೆ ಮತ್ತು ಹೊರಗೆ ಹಗಲು ರಾತ್ರಿ ಹೋರಾಟವನ್ನು ಮಾಡಿದ್ದೆವು, ಧರಣಿ ಮಾಡಿದ್ದೆವು. ಇದರಿಂದ ಈಶ್ವರಪ್ಪ ರಾಜೀನಾಮೆ ನೀಡಬೇಕಾಯಿತು. ಬಿಜೆಪಿ ಶಾಸಕ ವಿರೂಪಾಕ್ಷಪ್ಪ ಮಾಡಾಳ್‌ ಅವರು ಸೋಪ್‌ ಮತ್ತು ಡಿಟರ್ಜೆಂಟ್‌ ನಿಗಮದ ಅಧ್ಯಕ್ಷರಾಗಿದ್ದವರು. ಅವರ ಮಗ ಅಪ್ಪನ ಪರವಾಗಿ ಲಂಚ ಪಡೆಯಲು ಹೋಗಿ ಸಿಕ್ಕಿಬಿದ್ದಿದ್ದಾನೆ. ಮನೆಯನ್ನು ಶೋಧ ಮಾಡಿದಾಗ ಸುಮಾರು 8 ಕೋಟಿ ಭ್ರಷ್ಟ ಹಣ ಸಿಗುತ್ತದೆ. ಈ ರೀತಿ ರೆಡ್‌ ಹ್ಯಾಂಡಾಗಿ ಸಿಕ್ಕಿಬೀಳುವುದು ದಾಖಲೆಗಳಿಗಿಂತ ಪ್ರಬಲ ಸಾಕ್ಷಿಗಳು. ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಸಾಬೀತಾಗಲು ಇದಕ್ಕಿಂತ ಬೇರೆ ಯಾವ ಸಾಕ್ಷಿ ಬೇಕು ಎಂದರು.

lokesh

Recent Posts

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

3 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

9 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

29 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

38 mins ago

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

18 hours ago