caste census g parameshwara
ನಂಜನಗೂಡು: ಗೃಹ ಸಚಿವ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿರುವುದು ಖಂಡನೀಯ ಎಂದು ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್ ಆಕ್ರೋಶ ವ್ಯಕ್ತಪಡಿಸಿದರು.
ನಂಜನಗೂಡು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದ ಗೃಹ ಸಚಿವರಾದ ಸರಳ ಸಜ್ಜನಿಕೆಯ ರಾಜಕಾರಣಿ ಡಾ.ಜಿ ಪರಮೇಶ್ವರ್ ರವರ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ನಡೆಸಿದೆ. ಉದ್ದೇಶಪೂರ್ವಕವಾಗಿ ದಾಳಿ ಮಾಡಲಾಗಿದ್ದು, ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ಪದೇಪದೇ ಇಡಿ ದಾಳಿ ನಡೆಸುತ್ತಿರುವುದು ಖಂಡನೀಯ. ಮುಂದಿನ ಮುಖ್ಯಮಂತ್ರಿಗಳು ಆಗುತ್ತಾರೆ ಅದಕ್ಕೆ ಅವರನ್ನು ಕುಗ್ಗಿಸಲು ಈ ರೀತಿ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದ್ದಾರೆ. ಇದಕ್ಕೆಲ್ಲ ಅವರು ಕುಗ್ಗುವುದಿಲ್ಲ. ಇಡಿ ದಾಳಿಯು ರಾಜಕೀಯ ಪ್ರೇರಿತವಾಗಿದೆ. ಬೇರೆಬೇರೆ ನಾಯಕರ ಶಿಕ್ಷಣ ಸಂಸ್ಥೆಗಳು ಇದ್ದರು, ಅವರ ಮೇಲೆ ದಾಳಿ ಆಗುತ್ತಿಲ್ಲ. 2019ರಲ್ಲಿಯೂ ಪರಮೇಶ್ವರ್ ರವರ ಮೇಲೆ ಇಡಿ ದಾಳಿ ನಡೆಸಿತ್ತು. ಆ ಸಂದರ್ಭದಲ್ಲಿ ಅವರಿಗೆ ಏನು ಸಿಗಲಿಲ್ಲ. ಅವರನ್ನೇ ಯಾಕೇ ಟಾರ್ಗೆಟ್ ಮಾಡಲಾಗುತ್ತಿದೆ. ಬಿಜೆಪಿ ನಾಯಕರನ್ನು ಬಿಟ್ಟು ಕಾಂಗ್ರೆಸ್ ನಾಯಕರ ಮೇಲೆ ದಾಳಿ ನಡೆಸುತ್ತಿರುವುದನ್ನು ನೋಡಿದರೆ ನಮಗೆ ಅನುಮಾನ ವ್ಯಕ್ತವಾಗುತ್ತಿದೆ.
ಕಳೆದ ಬಾರಿಯೂ ಮುಖ್ಯಮಂತ್ರಿ ಸಿದ್ದರಾಮಯ್ಯರವರ ಮೇಲೆ ನೀಡಿ ಇಡಿ ದಾಳಿ ನಡೆಸಿತ್ತು. ಹಿರಿಯ ದಲಿತ ರಾಜ್ಯ ನಾಯಕರು ಹಾಗೂ ಕರ್ನಾಟಕ ರಾಜ್ಯದ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ ಎಂದು ಅವರ ಗೌರವಕ್ಕೆ ಧಕ್ಕೆ ತರಲಾಗುತ್ತಿದೆ ಇದನ್ನು ಸಮುದಾಯ ತೀರವಾಗಿ ಖಂಡಿಸುತ್ತದೆ. ಯಾವುದೇ ರೀತಿ ಕಪ್ಪು ಚುಕ್ಕೆ ಇಲ್ಲದೆ ಡಾ. ಜಿ ಪರಮೇಶ್ವರ್ ಅವರು ಆಡಳಿತ ಮಾಡಿದ್ದಾರೆ. ಅವರ ಗೌರವಕ್ಕೆ ಧಕ್ಕೆ ತಂದರೆ ನಾವು ಸುಮ್ಮನಿರುವುದಿಲ್ಲ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಡಾ. ಜಿ ಪರಮೇಶ್ವರ್ ಯುವ ಸೈನ್ಯದ ವತಿಯಿಂದ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಡಾ.ಜಿ ಪರಮೇಶ್ವರ್ ಯುವ ಸೈನ್ಯದ ಮೈಸೂರು ಜಿಲ್ಲಾಧ್ಯಕ್ಷ ಸಿ. ಮಂಜುನಾಥ್, ಜಿಲ್ಲಾ ಉಪಾಧ್ಯಕ್ಷ ಮುಳ್ಳೂರು ಮಹೇಂದ್ರ ಹಾಜರಿದ್ದರು.
ಮೈಸೂರು ನಗರದಲ್ಲಿ ಮಳೆನೀರು ಕೊಯ್ಲು ಥೀಮ್ ಪಾರ್ಕ್ ಸ್ಥಾಪಿಸುವ ಹಿಂದಿನ ಹಾಗೂ ಈಗಿನ ಸರ್ಕಾರಗಳ ಭರವಸೆ ಇನ್ನೂ ಕನ್ನಡಿಯೊಳಗಿನ ಗಂಟಾಗಿಯೇ…
ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಹರಳಹಳ್ಳಿಯ ಪುಸ್ತಕ ಪ್ರೇಮಿ ೭೮ ವರ್ಷದ ಅಂಕೇಗೌಡ ಅವರಿಗೆ ಪದ್ಮಶ್ರೀ ಪ್ರಶಸ್ತಿ ಲಭಿಸಿರುವುದು ಕನ್ನಡ…
ಮೈಸೂರಿನ ರಾಮಕೃಷ್ಣನಗರ ಮಾರ್ಗಕ್ಕೆ ಪ್ರತಿದಿನ ನಗರ ಸಾರಿಗೆ ಬಸ್ಸುಗಳು ಸಂಚರಿಸುತ್ತವೆ. ಆದರೆ ಈ ಮಾರ್ಗದಲ್ಲಿ ಓಡಾಡುವ ಬಸ್ಸುಗಳ ಸಂಖ್ಯೆ ಮಾತ್ರ…
ಸರಗೂರು: ಪಟ್ಟಣದಲ್ಲಿ ಗ್ರಾಮದೇವತೆ ಶ್ರೀ ಸಂತೆ ಮಾಸ್ತಮ್ಮನವರ ೩೧ನೇ ಜಾತ್ರಾ ಮಹೋತ್ಸವ ಹಾಗೂ ಕೊಂಡೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು. ಜಾತ್ರಾ…
ರೆಸಾರ್ಟ್‌ಗಳು, ಹೋಂಸ್ಟೇಗಳಿಗೆ ಅಕ್ರಮ ರೆಸಾರ್ಟ್‌ಗಳ ತನಿಖಾ ಸಮಿತಿಯವರ ದಿಢೀರ್ ಭೇಟಿ ಹೆಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಹಿನ್ನೀರಿನ ನಾಗರಹೊಳೆ ಮತ್ತು ಬಂಡೀಪುರ…
ಕೆ.ಬಿ.ಶಂಶುದ್ಧೀನ್ ಗ್ರಾಮಕ್ಕೆ ಹುಲಿ, ಚಿರತೆಗಳು ಲಗ್ಗೆಯಿಡುವ ಆತಂಕ; ಹೋರಾಟದ ಎಚ್ಚರಿಕೆ ನೀಡಿದ ಹಕ್ಕೆ ಗ್ರಾಮಸ್ಥರು ಕುಶಾಲನಗರ: ಬೀದಿ ನಾಯಿಗಳ ಹಾವಳಿ…