ಮೈಸೂರು

ಹಳೆ ಮರ ಕಡಿಯುವ ಪಾಲಿಕೆ ಯತ್ನಕ್ಕೆ ವಿರೋಧ

ಮೈಸೂರು: ನಗರದ ನಂಜರಾಜ ಬಹದ್ದೂರ್ ಛತ್ರದ ಆವರಣದಲ್ಲಿರುವ ನೂರಕ್ಕೂ ಹೆಚ್ಚು ವರ್ಷದ ಹಳೆಯ ಮರದ ಸುತ್ತ ಇದ್ದ ಕಟ್ಟೆ ದುರಸ್ತಿಯ ನೆಪದಲ್ಲಿ ಮರವನ್ನೇ ಕಡಿಯಲು ಮಹಾನಗರ ಪಾಲಿಕೆ ಅಧಿಕಾರಿಗಳು ಮುಂದಾಗಿದ್ದಾರೆ ಎಂದು ಆರೋಪಿಸಿ ಪರಿಸರ ಪ್ರೇಮಿಗಳು ಹಾಗೂ ಕರ್ನಾಟಕ ಹಿತರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಕತ್ತರಿಸಿದ ಮರದ ಬೇರನ್ನು ಹಿಡಿದ ಪ್ರತಿಭಟನಾಕಾರರು, ನಗರಪಾಲಿಕೆ ಅಽಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಕರ್ನಾಟಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್‌ಕುಮಾರ್ ಮಾತನಾಡಿ, ಅಭಿವೃದ್ಧಿ ನೆಪದಲ್ಲಿ ಇತಿಹಾಸವಿರುವ ಬೃಹದಾಕಾರದ ಮರದ ಬುಡಕ್ಕೆ ಕೊಡಲಿ ಪೆಟ್ಟು ನೀಡಿರುವುದು ಅತ್ಯಂತ ಬೇಸರದ ಸಂಗತಿ. ಈ ಬಗ್ಗೆ ಕೇಳಲು ಹೋದರೆ ಅಧಿಕಾರಿಗಳು ಬೇಜವಾಬ್ದಾರಿ ಉತ್ತರ ನೀಡಿದ್ದಾರೆ. ಇದನ್ನು ಪಾರಂಪರಿಕ ವೃಕ್ಷ ಎಂದು ಘೋಷಿಸಬೇಕು. ಅನಾವಶ್ಯಕ ಕಾಮಗಾರಿಗಳನ್ನು ಕೈಬಿಟ್ಟು ಮರಗಳ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಸಾಮಾಜಿಕ ಹೋರಾಟಗಾರ ವಿಕ್ರಂ ಅಯ್ಯಂಗಾರ್, ಜೀವಧಾರ ರಕ್ತ ನಿಧಿ ಕೇಂದ್ರದ ಗಿರೀಶ್, ಯುವ ಮುಖಂಡರಾದ ಹರೀಶ್‌ಗೌಡ, ಮಂಜುನಾಥ್ ಗೌಡ , ಸಂದೇಶ್, ರವಿಚಂದ್ರ, ಎಸ್.ಎನ್.ರಾಜೇಶ್, ನೀತು, ಸಂತೋಷ್ ಇನ್ನಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

1 hour ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

5 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

5 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

5 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

8 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

8 hours ago