ಮೈಸೂರು: ಪವಿತ್ರ ರಂಜಾನ್ ಹಬ್ಬದ ಅಂಗವಾಗಿ ಇಂದು ವಕ್ಫ್ ಮಸೂದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಜಿಲ್ಲೆಯ ಟಿ. ಟಿ.ನರಸೀಪುರದ ಸೋಸಲೆ ಗ್ರಾಮದ ಮಸೀದಿ ಬಳಿ ಮುಸ್ಲಿಂ ಬಾಂಧವರು ಕಪ್ಪು ಪಟ್ಟಿ ಧರಿಸಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ್ದಾರೆ.
ಟಿ.ನರಸೀಪುರ ತಾಲ್ಲೂಕಿನ ಸೋಸಲೆ, ಬೆನಕನಹಳ್ಳಿ, ವ್ಯಾಸರಾಜಪುರ ಸೇರಿದಂತೆ ಇನ್ನಿತರೆ ಗ್ರಾಮದವರು ಈದ್ಗಾ ಮೈದಾನದಲ್ಲಿ ಕಪ್ಪು ಪಟ್ಟಿ ಧರಿಸಿ ವಕ್ಫ್ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿದ್ದಾರೆ.
ಇನ್ನು ಮುಸ್ಲಿಂಮರ ಪವಿತ್ರ ರಂಜಾನ್ ಹಬ್ಬವನ್ನು ಜಿಲ್ಲೆಯಾದ್ಯಂತ ಸಂಭ್ರಮ-ಸಡಗರದೊಂದಿಗೆ ಶ್ರದ್ಧಾ ಭಕ್ತಿಯೊಂದಿಗೆ ಆಚರಣೆ ಮಾಡಲಾಗಿದೆ. ಒಂದು ತಿಂಗಳ ಉಪವಾಸದ ಬಳಿಕ ಚಂದ್ರನ ದರ್ಶನ ಪಡೆದ ಮುಸ್ಲಿಂ ಸಮುದಾಯದವರು ಇಂದು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.





