ಕೊಡಗು: ಕಳೆದ ನಾಲ್ಕು ದಿನಗಳಿಂದ ಕೊಡಗು ಸೇರಿದಂತೆ ಮಲೆನಾಡು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸುರಿಯುತ್ತಿದ್ದ ಭಾರೀ ಮಳೆ ಇಂದಿನಿಂದ ಕೊಂಚ ಇಳಿಕೆ ಕಂಡಿದೆ.
ಈ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜನತೆ ಕೊಂಚ ನಿರಾಳರಾಗಿದ್ದಾರೆ. ಜಿಲ್ಲೆಯಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಆರೆಂಜ್ ಅಲರ್ಟ್ ಇರಲಿದ್ದು, ನಾಲ್ಕು ದಿನಗಳ ಬಳಿಕ ಮಳೆಯ ರಭಸ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಿದೆ.





