ಮೈಸೂರು: 2024-25 ನೇ ಸಾಲಿನ ಜಲವರ್ಷದಲ್ಲಿ ಕಬಿನಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆಯು ಪ್ರಾರಂಭವಾಗಿದ್ದು, ಕಬಿನಿ ಜಲಾಶಯಕ್ಕೆ ಒಳಹರಿವು ಬರುತ್ತಿದೆ. ಒಳಹರಿವಿನ ನೀರಿನ ಪ್ರಮಾಣ ಹಾಗೂ ಒಟ್ಟಾರೆ ಜಲಾಶಯದಲ್ಲಿ ಸಂಗ್ರಹವಾಗಿರುವ ನೀರಿನ ಲಭ್ಯತೆ ಮೇರೆಗೆ ಕಬಿನಿ ಎಡದಂಡೆ ಮತ್ತು ಬಲದಂಡೆ ನಾಲೆಗಳ ಮುಖಾಂತರ ಜನ ಜಾನುವಾರುಗಳಿಗೆ ಕುಡಿಯಲು ಅನುಕೂಲವಾಗುವಂತೆ ಕೆರೆ ಕಟ್ಟೆಗಳಿಗೆ ಜುಲೈ 10 ರಿಂದ 25 ರವರೆಗೆ ನೀರು ಹರಿಸಲು ಉದ್ದೇಶಿಸಲಾಗಿದೆ.
ಕಬಿನಿ ಜಲಾಶಯದ ವ್ಯಾಪ್ತಿಗೆ ಬರುವ ಅಚ್ಚುಕಟ್ಟುದಾರರು ನೀರಾವರಿ ಅಧಿಕಾರಿಗಳೊಡನೆ ಸಹಕರಿಸಿ ಕೆರೆ ಕಟ್ಟೆಗಳಿಗೆ ಕುಡಿಯುವ ಮತ್ತು ಜನ ಜಾನುವಾರುಗಳ ಉಪಯೋಗಕ್ಕಾಗಿ ಮಾತ್ರ ನೀರನ್ನು ಬಳಸಬೇಕು. ಮುಂದಿನ ದಿನಗಳಲ್ಲಿ ಜಲಾಶಯಕ್ಕೆ ಬರುವ ಒಳಹರಿವಿನ ಪ್ರಮಾಣವನ್ನು ಆಧರಿಸಿ ಅಚ್ಚುಕಟ್ಟು ಪ್ರದೇಶಕ್ಕೆ 2024-25 ನೇ ಸಾಲಿನ ಖಾರೀಪ್ ಬೆಳೆಗಳಿಗೆ ನಾಲೆಗಳ ಮುಖೇನ ನೀರು ಬಿಡುವ ಬಗ್ಗೆ ಕಬಿನಿ ಜಲಾಶಯದ ನೀರಾವರಿ ಸಲಹಾ ಸಮಿತಿಯ ಸಭೆ ಕರೆದು ಸಮಿತಿಯಲ್ಲಿ ತೀರ್ಮಾನಿಸಲಾಗುವುದು ಎಂದು ಕಬಿನಿ ನೀರಾವರಿ ಸಲಹಾ ಸಮಿತಿಯ ಕಬಿನಿ ಮತ್ತು ವರಣಾ ನಾಲಾ ವೃತ್ತ ಸದಸ್ಯ ಕಾರ್ಯದರ್ಶಿಗಳು ಹಾಗೂ ಅಧೀಕ್ಷಕ ಇಂಜಿನಿಯರ್ ಮಹೇಶ.ಕೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…