ಮೈಸೂರು : ಮೈಕ್ರೊ ಫೈನಾನ್ಸ್ ಕಂಪನಿಗಳು ಮತ್ತು ಲೇವಾದೇವಿದಾರರು ನೀಡುತ್ತಿರುವ ಕಿರುಕುಳದಿಂದ ಸಾಲಗಾರರನ್ನು ರಕ್ಷಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿದ ಕರ್ನಾಟಕ ಮೈಕ್ರೊ ಫೈನಾನ್ಸ್(ಬಲವಂತದ ಕ್ರಮಗಳ ತಡೆ) ಸುಗ್ರೀವಾಜ್ಞೆ-2025 ಕಾಯ್ದೆಯನ್ನು ಕರ್ನಾಟಕ ರಾಜ್ಯ ರೈತ ಸಂಘ ಸ್ವಾಗತಿಸಿದೆ.
ಈ ಕುರಿತು ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರೈತ ಮುಖಂಡ ಇಂಗಲಗುಪ್ಪೆ ಕೃಷ್ಣೆಗೌಡ, ರೈತರು ಮತ್ತು ಸಾರ್ವಜನಿಕರು ಖಾಸಗಿ ಬ್ಯಾಂಕ್ ಮತ್ತು ಮೈಕ್ರೋ ಫೈನಾನ್ಸ್ ಗಳಲ್ಲಿ ಸಾಲ ಪಡೆಯುತ್ತಿದ್ದಾರೆ. ಮೊದಲಿಗೆ ಸಾಲ ಕೊಡುವ ಮೈಕ್ರೋ ಫೈನಾನ್ಸ್ ಗಳು ತದ ನಂತರ ಜನರ ರಕ್ತ ಹೀರುವ ಕೆಲಸ ಮಾಡುತ್ತಿದ್ದಾರೆ.
ಇದರ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿದೆ. ಇದು ಸ್ವಾಗತಾರ್ಹವಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಹಾವಳಿ ಹೆಚ್ಚಾಗಿದೆ. ಮೈಕ್ರೋ ಫೈನಾನ್ಸ್ ಹಾವಳಿಗೆ ರೈತರು ಊರು ಬಿಡುತ್ತಿದ್ದಾರೆ. ಹಲವು ಕಡೆ ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳು ನಿಗದಿತ ಸಮಯಕ್ಕೆ ರೈತರಿಗೆ, ಜನ ಸಾಮಾನ್ಯರಿಗೆ ಸಾಲ ನೀಡುತ್ತಿಲ್ಲ ಎಂದು ದೂರಿದರು.
ಮೈಸೂರು ತಾಲ್ಲೂಕು ಕಚೇರಿಯಲ್ಲಿ ಮಧ್ಯವರ್ಥಿಗಳ ಹಾವಳಿ ಹೆಚ್ಚಾಗಿದೆ. ಸಾರ್ವಜನಿಕರ ಯಾವುದೇ ಕೆಲಸ ಆಗುತ್ತಿಲ್ಲ. ಮಧ್ಯವರ್ತಿಗಳ ಮುಖಾಂತರವೇ ಎಲ್ಲ ಕೆಲಸ ನಡೆಯುತ್ತಿದೆ. ಹೆಚ್ ಡಿ ಕೋಟೆ ತಾಲ್ಲೂಕಿನಲ್ಲಿ ರೈತರ ಸೋಗಿನಲ್ಲಿ ಹಲವರು ಸರ್ಕಾರಿ ಭೂಮಿ ಕಬಳಿಸುತ್ತಿದ್ದಾರೆ. ಅಧಿಕಾರಿಗಳು ಭೂಗಳ್ಳರ ಜೊತೆ ಸೇರಿ ಸರ್ಕಾರಿ ಭೂಮಿಯನ್ನ ಕಬಳಿಕೆ ಮಾಡುತ್ತಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.
ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…