ಎಚ್.ಡಿ.ಕೋಟೆ: ಆದಿವಾಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಹೊರತರಲು ಬೇಸಿಗೆ ಶಿಬಿರಗಳು ಸಹಕಾರಿ ಎಂದು ನಿಸರ್ಗ ಸಂಸ್ಥೆಯ ನಿರ್ದೇಶಕರಾದ ಪ್ರಭು ನಂಜುಂಡಯ್ಯ ಹೇಳಿದರು.
ಪಟ್ಟಣದ ನಿಸರ್ಗ ಸಂಸ್ಥೆಯಲ್ಲಿ ಆದಿವಾಸಿ ಚಿಗುರು ಶಾಲಾ ಮಕ್ಕಳಿಗೆ ಹಮ್ಮಿಕೊಂಡಿದ್ದ ಉಚಿತ ಬೇಸಿಗೆ ಶಿಬಿರ ಕಾರ್ದಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬೇಸಿಗೆ ಶಿಬಿರದಲ್ಲಿ ಆದಿವಾಸಿಗಳ ಕಲೆ, ಸಂಸ್ಕೃತಿ, ಆಟೋಟಗಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿದ್ದು, ಎಲ್ಲಾ ಮಕ್ಕಳು ಶಿಬಿರದಲ್ಲಿ ಪಾಲ್ಗೊಂಡು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮಲ್ಲಿರುವ ಪ್ರತಿಭೆ ಹಾಗೂ ಕೌಶಲವನ್ನು ಗುರುತಿಸಿಕೊಳ್ಳಬೇಕೆಂದು ಕರೆ ನೀಡಿದರು.
ನಿಸರ್ಗ ಸಂಸ್ಥೆಯ ಕಾರ್ಕಯರ್ತ ಚಿಕ್ಕತಿಮ್ಮನಾಯಕ ಮಾತನಾಡಿ, ಮಕ್ಕಳಿಗೆ ಪ್ರಮುಖವಾಗಿ ನಾಲ್ಕು ಹಕ್ಕುಗಳಿವೆ. ಬದುಕುವ ಹಕ್ಕು, ಭಾಗವಹಿಸುವ ಹಕ್ಕು, ರಕ್ಷಣೆ ಹೊಂದುವ ಹಕ್ಕು, ವಿಕಾಸ ಹೊಂದುವ ಹಕ್ಕುಗಳಿದ್ದು, ಈ ಹಕ್ಕುಗಳಿಗೆ ಚ್ಯುತಿ ಬಂದಾಗ ಮಕ್ಕಳ ಸಹಾಯವಾಣಿ ೧೦೯೮ ಅಥವಾ ೧೧೨ ಸಂಖ್ಯೆಗೆ ಕರೆವಾಡುವಂತೆ ತಿಳಿಸಿದರು.
ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಆಶು-ಭಾಷಣ ಸ್ಪರ್ಧೆ, ರಸಪ್ರಶ್ನೆ ಕಾರ್ಯಕ್ರಮ, ನೃತ್ಯ ಹಾಗೂ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ ವಿಜೇತರಾದ ಮಕ್ಕಳಿಗೆ ಬಹುವಾನವನ್ನು ವಿತರಿಸಲಾಯಿತು.
ನಿಸರ್ಗ ಸಂಸ್ಥೆಯ ಕಾರ್ಯಕರ್ತರಾದ ದಿವ್ಯ, ಕನ್ಯಾಕುವಾರಿ, ನಿರ್ಮಲ, ಜ್ಯೋತಿ, ಚಿಗುರು ಶಾಲಾ ಶಿಕ್ಷಕಿಯರಾದ ಶ್ರುತಿ, ಮಹಾದೇವಿ, ಗೀತಾ, ಮೋನಿಕಾ, ೭೦ಕ್ಕೂ ಹೆಚ್ಚು ಆದಿವಾಸಿ ಚಿಗುರು ಶಾಲಾ ಮಕ್ಕಳು ಭಾಗಹಿಸಿದ್ದರು.
ಮೈಸೂರು: ಸಕ್ಕರೆ ನಾಡು ಮಂಡ್ಯದಲ್ಲಿ ಇಂದಿನಿಂದ (ಡಿ.20) 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಶುರುವಾಗಿದೆ. ಆದರೆ ಈ ಸಮ್ಮೇಳನವನ್ನು ಯಾವ…
ಮಂಡ್ಯ: ಹಾಸ್ಯ ಸಾಹಿತ್ಯ ಆಧುನಿಕ ಬದುಕಿನಗೆ ಔಷಧಿಯಾಗಿದೆ ಎಂದು ಪ್ರಾಧ್ಯಾಪಕ ಡಾ.ಜೆ.ಕರಿಯಪ್ಪ ಮಾಳಿಗೆ ಹೇಳಿದರು. 87ಅಖಿಲ ಭಾರತ ಕನ್ನಡ ಸಾಹಿತ್ಯ…
ಮಡಿಕೇರಿ: ಸಿ ಮತ್ತು ಡಿ ಭೂಮಿಗೆ ಸಂಬಂಧಿಸಿದಂತೆ ಕಂದಾಯ ಸಚಿವರು ಉನ್ನತ ಮಟ್ಟದ ಸಮಿತಿ ರಚನೆಗೆ ಮುಂದಾಗಿದ್ದು, ಸಮಸ್ಯೆ ಪರಿಹಾರವಾಗಲಿ…
ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಅಕ್ಷೇಪಾರ್ಹ ಪದ ಬಳಸಿದ್ದಾರೆ ಎಂಬ ಆರೋಪದ ಮೇಲೆ ಎಂಎಲ್‌ಸಿ ಸಿ.ಟಿ.ರವಿಯವರನ್ನು ಪೊಲೀಸರೇ ಕೊಲೆ…
ವಿರಾಜಪೇಟೆ: ಗೋಣಿಕೊಪ್ಪ-ಕೇರಳ ಹೆದ್ದಾರಿಯ ಬಿಟ್ಟಂಗಾಲ ಆಟೋ ನಿಲ್ದಾಣದ ಬಳಿ ಚಿರತೆ ಬೆಕ್ಕೊಂದು ಅಪಘಾತಕೀಡಾಗಿ ಸಾವನಪ್ಪಿದ ಘಟನೆ ಶುಕ್ರವಾರ ರಾತ್ರಿ 9…
ಮೈಸೂರು: ನಟ ದರ್ಶನ್ ಅವರು ಮೈಸೂರಿನ ತಿ.ನರಸೀಪುರ ಮುಖ್ಯರಸ್ತೆಯಲ್ಲಿರುವ ಕೆಂಪಯ್ಯನಹುಂಡಿ ಬಳಿಯ ತಮ್ಮ ಫಾರ್ಮ್‌ಹೌಸ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಶುಕ್ರವಾರ ಇಲ್ಲಿಗ…