ಮೈಸೂರು : ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ರೈತ ಕುಟುಂಬದವರಿಗೆ ಸರ್ಕಾರದ ವಿಶೇಷ ಸೌಲಭ್ಯಗಳ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿ ಪಿ. ಶಿವರಾಜು ರವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆತ್ಮಹತ್ಯೆಗೆ ಒಳಗಾದ ಕುಟುಂಬದ ಸದಸ್ಯರುಗಳಿಗೆ ಸರ್ಕಾರದ ವಿವಿಧ ಇಲಾಖೆಗಳಿಂದ ಸೌಲಭ್ಯಗಳ ಅನುಷ್ಠಾನ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅರ್ಹ ರೈತರ ಕುಟುಂಬಗಳಿಗೆ ಸರ್ಕಾರದ ವತಿಯಿಂದ ದೊರೆಯುವ ಸೌಲಭ್ಯಗಳನ್ನು ತ್ವರಿತವಾಗಿ ದೊರಕಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳ ಅಧಿಕಾರಿಗಳು ಯಾವುದೇ ವಿಳಂಬ ಮಾಡದೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ತಿಳಿಸಿದ ಅಪರ ಜಿಲ್ಲಾಧಿಕಾರಿಗಳು ರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರದ ವಿಶೇಷ ಸೌಲಭ್ಯಗಳ ಕುರಿತ ಸ್ಪಂದನೆ ಹಾಗೂ ಪರಿಣಾಮಕಾರಿ ಅನುಷ್ಠಾನಕ್ಕೆ ಇನ್ನು ಮುಂದೆ ಪ್ರತಿ ತಿಂಗಳ ಮೊದಲ ಸೋಮವಾರ ನಿಯಮಿತವಾಗಿ ಉಸ್ತುವಾರಿ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 53 ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾಗಿದ್ದು 43 ಪ್ರಕರಣಗಳು ಅರ್ಹ ಪ್ರಕರಣಗಳಲ್ಲಿ ಮೂರು ಪ್ರಕರಣಗಳಲ್ಲಿ ಎಫ್ಎಸ್ಎಲ್ ವರದಿ ಬಾಕಿ ಇದ್ದು ಎರಡು ಪ್ರಕರಣಗಳಲ್ಲಿ ಇತರೆ ದಾಖಲಾತಿಗಳು ಬಾಕಿ ಇದ್ದು ಈ ರೀತಿ ಬಾಕಿ ಇರುವ ಪ್ರಕರಣಗಳ ಕುರಿತು ತುರ್ತಾಗಿ ಕ್ರಮ ವಹಿಸಲು ಪೊಲೀಸ್ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶಿಸಿದರು ಹಾಗೂ ವಿಶೇಷ ಆರೋಗ್ಯ ಚಿಕಿತ್ಸಾ ಸೌಲಭ್ಯಗಳನ್ನು ದೊರಕಿಸುವ ಸಲುವಾಗಿ ಬಾಕಿಇರುವ 16 ಕುಟುಂಬಗಳಿಗೆ ಆರೋಗ್ಯ ಇಲಾಖೆ ವತಿಯಿಂದ ಕಾಡುಗಳನ್ನು ಶೀಘ್ರವಾಗಿ ನೀಡುವಂತೆ ಸಭೆಯಲ್ಲಿ ಹಾಜರಿದ್ದ ಜಿಲ್ಲಾ ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ಶಿಕ್ಷಣ ಇಲಾಖೆ ವತಿಯಿಂದ ಲಭ್ಯವಿರುವ ಸೌಲಭ್ಯ ಗಳನ್ನು ಯಾವುದೇ ವಿಳಂಬ ಮಾಡದೆ ಅರ್ಹ ಮೃತ ರೈತರ ಮಕ್ಕಳಿಗೆ ಒದಗಿಸಲು ಅಗತ್ಯ ಕ್ರಮವಹಿಸುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಈ ಎಲ್ಲಾ ವಿಷಯದ ಕುರಿತು ನಿಯಮಿತವಾಗಿ ಪ್ರತಿ ತಿಂಗಳ ಮೊದಲನೇ ಸೋಮವಾರ ಇನ್ನುಮುಂದೆ ನಿಯಮಿತವಾಗಿ ಸಭೆ ನಡೆಸಲಾಗುವುದು ಮತ್ತು ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದರು
ರೈತರ ಆತ್ಮಹತ್ಯೆ ಪ್ರಕರಣಗಳು ವರದಿಯಾದವು 4 ಗಂಟೆಯೊಳಗಾಗಿ ಸಂಬಂಧಿಸಿದ ಇಲಾಖೆಗಳು ಕ್ಷೇತ್ರ ಭೇಟಿ ನೀಡಿ ವರದಿ ಸಲ್ಲಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂಧ ಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ಕುಮಾರಸ್ವಾಮಿ, ಕೃಷಿ ಇಲಾಖೆಯ ಉಪನಿರ್ದೇಶಕರುಗಳು, ಕಂದಾಯ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…